Homeಮುಖಪುಟಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ  ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್ ತಮ್ಮ ಟ್ವಿಟರ್‌ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.

ಗುರುಗ್ರಾಮ ಆಡಳಿತವು ಗುರುತಿಸಿದ 37 ಸ್ಥಳಗಳಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸೆಕ್ಟರ್ 47 ಮತ್ತು ಸೆಕ್ಟರ್ 12-ಎ ಕೂಡ ಸೇರಿವೆ, ಅಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಅವಕಾಶವಿದೆ. 2018 ರಲ್ಲಿ ಇದೇ ರೀತಿಯ ಘಟನೆ ನಡೆದ ನಂತರ, ಆಡಳಿತವು ಹಿಂದೂ ಮತ್ತು ಮುಸ್ಲಿಮರ ನಡುವೆ ಮಾತುಕತೆ ನಡೆಸಿ ಈ ಸ್ಥಳಗಳನ್ನು ನಿರ್ಧರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್‌ಪಿಸಿ ಸೆಕ್ಷನ್ 354 ಡಿ, 509 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿನಗೆ ಹಿಂದೂ ಆಗಿರೋದಕ್ಕೆ ನಾಚಿಕೆ ಆಗಿದ್ದರೆ ,ಹಿಂದೂಸ್ಥಾನ ಭಾರತವನ್ನು ಬಿಟ್ಟು ತೊಲುಗು ,ನಿಮ್ಮಂತ ಅಯೋಗ್ಯರು ನಮಗೆ ನಮ್ಮ ಧರ್ಮದ ಬಗ್ಗೆ ಹೇಳುವ ಅಗತ್ಯ ಇಲ್ಲಾ ,ನಿಮ್ಮಂತವರಿಗೆ ಅಫ್ಘಾನಿಸ್ತಾನ,ಪಾಕಿಸ್ತಾನವೇ ಸರಿ ,ಇರೋದಕ್ಕೆ ಬೆಳೆಯೋಕೆ ನಮ್ಮ ಧರ್ಮದ ಅಗತ್ಯ ನಿಮಗೆ ಬೇಕು ,ಬೆಳೆದ ಮೇಲೆ ಪಯಕೀಯರ ಸಹವಾಸ ಮೇಲು ನಿಮಗೆ ಅಲ್ಲವೇ ,ನಿಮ್ಮಂತ ಧರ್ಮ ದ್ರೋಹಿ ,ದೇಶ ದ್ರೋಹಿಗಳು ಆದಷ್ಟು ಬೇಗ ದೇಶ ಬಿಟ್ಟು ತೊಲಗಿ ಅಯೋಗ್ಯರಾ.

  2. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದು ಹಿಂದೂಗಳು ಸತ್ತಾಗ ಇವಳು ಎಲ್ಲಿ ಅವಿತುಕೊಂಡಿದ್ದಳು ,ಇವಳಿಗೆ ಯಾವೋನೊ ಪರಧರ್ಮಿಯನ ಸಹವಾಸ ಇರಬೇಕು ಈ ರೀತಿ ಈಗ ಹಿಂದೂ ಧರ್ಮದ ಬಗ್ಗೆ ಹೇಳೋಕೆ.

  3. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಆಕ್ರಮಣ ನಡೆಯುವುದು ಖಂಡನೀಯ….
    ಅದನ್ನು ಬುದ್ದಿ ಇರುವ ಯಾರೂ ಸಮರ್ಥಿಸಲಾರನು.
    ಸಮರ್ಥಿಸುವವನು ಮನುಶ್ಯನೇ ಅಲ್ಲ.
    ಹಾಗಂತ ಆ ಹೆಸರಿನಲ್ಲಿ ಭಾರತದ ನಿರಪರಾದಿಗಳಾದ ಮುಗ್ದ ಮುಸಲ್ಮಾನರನ್ನೇಕೆ ಹತ್ಯೆ ಮಾಡಲಾಗುತ್ತದೆ.
    ಅವರ ಇಲ್ಲಿನ ಪ್ರಾರ್ಥನಾ ಮಂದಿರಗಳನ್ನೇಕೆ ದ್ವಂಸ ಮಾಡಲಾಗುತ್ತದೆ.
    ಅದಕ್ಕಾಗಿ ನಟಿ ನಾಚಿಕೆಪಡುತ್ತಿಫ್ದಾರೆ. ಅಷ್ಟೆ
    ಇಲ್ಲಿನ ಮುಸಲ್ಮಾನರು ವಿನಾ ಕಾರಣ ಹಿಂದುಗಳಿಂದ ಹಿಂಸೆಗೊಳಗಾಗುತ್ತಾರೆ ತಾನೇ
    ಅದು ಅದಕ್ಕೆ ಪ್ರತೀಕಾರವೇ
    ಅವರೇನು ತಪ್ಪು ಮಾಡಿದ್ದಾರೆ..
    ಸಾಧ್ಯವಾದರೆ ಬಾಂಗ್ಲಾ ದೇಶದ ಸರಕಾರಕ್ಕೆ ಭಾರತ ಸರಕಾರ ನಿರ್ಭಂದವೇರಲಿ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...