ರೈತ ಹೋರಾಟ: 4 ರಾಜ್ಯಗಳಿಗೆ ವರದಿ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
PC: Business Standard

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಹುತಾತ್ಮರಾದ ರೈತರ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ಹೇಳಿದ್ದಾರೆ.

ಆದರೆ, ಪಂಜಾಬ್ ಸರ್ಕಾರವು ರಾಜ್ಯದ 220 ರೈತರು ಮತ್ತು ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶ ನೀಡಿದ್ದು, ಮೃತಪಟ್ಟ ರೈತ ಕುಟುಂಬಗಳಿಗೆ 10.86 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಘೋಷಿಸಿದೆ.

ಈ ಬಗ್ಗೆ ಪಂಜಾಬ್ ಸರ್ಕಾರದ ಮಾಹಿತಿಯನ್ನು ಕಲೆ ಹಾಕಿರುವ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ, ಜುಲೈ 20 ರವರೆಗೆ 220 ರೈತರು, ಕೃಷಿ ಕಾರ್ಮಿಕರು ಮೃತಪಟ್ಟಿರುವ ವಿವರಗಳು ಕಡತದಲ್ಲಿ ದಾಖಲಾಗಿವೆ ಎಂದು ತಿಳಿಸಿದೆ.

ಈ 220 ಜನರಲ್ಲಿ, 203 (92%) ರೈತರು / ಕೃಷಿ ಕಾರ್ಮಿಕರು ರಾಜ್ಯದ ಮಾಲ್ವಾ ಪ್ರದೇಶದವರಾಗಿದ್ದರೆ, 11 (5%) ಸಾವುಗಳು ಮಜಾ ಪ್ರದೇಶ ಮತ್ತು ಆರು (2.7%) ದೋಬಾ ಪ್ರದೇಶದ ರೈತರಾಗಿದ್ದಾರೆ ಎಂದು ಪಂಜಾಬ್ ಸರ್ಕಾರದ ದಾಖಲೆಗಳು ತಿಳಿಸಿವೆ.

ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ಇನ್ನು ದೆಹಲಿ ಹೋರಾಟದ ಪ್ರತಿಭಟನೆ ವೇಳೆ 500 ಕ್ಕೂ ಹೆಚ್ಚು ಪ್ರತಿಭಟನಾ ನಿರತ ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೊಂಡಿದೆ. ಇದಕ್ಕೆ ಹೆಚ್ಚಿನ ರೈತರ ಸಾವುಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಪಂಜಾಬ್ ಸರ್ಕಾರದ ಮೂಲಗಳು ಬಹಿರಂಗಪಡಿಸಿವೆ.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಂಗ್ರೂರ್ ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯ ರೈತರು/ ಕೃಷಿ ಕಾರ್ಮಿಕರ ಸಾವುಗಳು ವರದಿಯಾಗಿವೆ. ಕಳೆದ ಎಂಟು ತಿಂಗಳಲ್ಲಿ ಇಂತಹ 43 ಸಾವುಗಳು ಸಂಭವಿಸಿವೆ. ಪ್ರತಿ ಪ್ರಕರಣದಲ್ಲೂ ಮೃತ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಮಂಜೂರು ಮಾಡಿದೆ. ಜಿಲ್ಲೆಯಲ್ಲಿ ಈಗಾಗಲೇ 2.13 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.

ಬಟಿಂಡಾ ಜಿಲ್ಲೆಯು ರೈತರ ಸಾವುಗಳಲ್ಲಿ ಎರಡನೇ ಸ್ಥಾನದಲ್ಲಿದ್ದು, ಈವರೆಗೆ 33 ಸಾವುಗಳು ವರದಿಯಾಗಿವೆ. ಮೃತ ರ ಕುಟುಂಬಗಳಿಗೆ ಸರ್ಕಾರವು 1.65 ಕೋಟಿ ರೂ. ನೀಡಿದೆ. ಇದಲ್ಲದೆ, ಮೊಗಾದಲ್ಲಿ 27, ಪಟಿಯಾಲದಲ್ಲಿ 25, ಬರ್ನಾಲಾದಲ್ಲಿ 17, ಮಾನ್ಸಾದಲ್ಲಿ 15, ಮುಕಾತ್ಸರ್‌ ಸಾಹಿಬ್‌ನಲ್ಲಿ 14, ಲೂಧಿಯಾನದಲ್ಲಿ 13 ಪ್ರಕರಣಗಳು ವರದಿಯಾಗಿವೆ.

ಇನ್ನು, ಮೃತ ರೈತರ ಕುಟುಂಬ ಸದಸ್ಯರಿಗೆ ಸಹಾನುಭೂತಿಯ ನೆಲೆಯಲ್ಲಿ ಪಂಜಾಬ್ ಸರ್ಕಾರವು ಉದ್ಯೋಗಗಳನ್ನು ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here