Homeಕರ್ನಾಟಕಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ...

ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಮರು ಪರಿಷ್ಕರಣೆಯ ವಿರುದ್ಧದ ಪ್ರತಿಭಟನೆ ಮತ್ತಷ್ಟು ಬಲಗೊಳ್ಳುತ್ತಿದೆ. ನಾಡಿನ ಹಲವಾರು ಸಾಹಿತಿಗಳು ಕೋಮುವಾದ ಹರಡುವ ಪಠ್ಯ ಪುಸ್ತಕದಲ್ಲಿ ನಮ್ಮ ಬರಹಗಳು ಇರಬಾರದು ಎಂದು ಸರ್ಕಾರದಕ್ಕೆ ಪತ್ರ ಬರೆದಿದ್ದು, ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಾಸು ಪಡೆದಿದ್ದಾರೆ. ಇದೀಗ ಕನ್ನಡ ವರನಟ ಡಾ| ರಾಜ ಕುಮಾರ್‌ ಬಗ್ಗೆ ಬರೆದಿದ್ದ ಬರಹವನ್ನು ಪಠ್ಯದಿಂದ ಲೇಖಕ ದೊಡ್ಡಹುಲ್ಲೂರು ರೊಕ್ಕೋಜಿರಾವ್ ಅವರು ಬುಧವಾರದಂದು ವಾಪಾಸು ಪಡೆದಿದ್ದಾರೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಬರೆದಿರುವ ಪತ್ರದಲ್ಲಿ ರುಕ್ಕೋಜಿರಾವ್, “ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರುಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಪಠ್ಯ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ” ಎಂದು ಹೇಳಿದ್ದು, ರಾಜಕುಮಾರ್ ಅವರ ಬಗ್ಗೆ ಬರೆದ ತಮ್ಮ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಬಳಸಬಾರದು ಎಂದು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತ್ರದಲ್ಲಿ ಅವರು, “ನಾನು ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ಲೇಖನವನ್ನು ಪ್ರೋ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ 6 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪುಸ್ತಕಕ್ಕೆ ಸೇರಿಸಲು ಒಪ್ಪಿಗೆ ನೀಡಿದ್ದೆ. ಈಗ ರೋಹಿತ್‌ ಚಕ್ರತೀರ್ಥ ಎಂಬುವವರ ಅಧ್ಯಕ್ಷತೆಯಲ್ಲಿ ನಡೆದ ಮರುಪರಿಷ್ಕರಣೆ ಬಗ್ಗೆ ದೊಡ್ಡ ವಿವಾದ ಎದ್ದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

“ರೋಹಿತ್ ಚಕ್ರತೀರ್ಥರು ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದಾರೆ. ಕುವೆಂಪು ಅವರನ್ನು ಕೀಳಾಗಿ ಕಂಡಿದ್ದಾರೆ. ಕನ್ನಡ ಭಾಷೆಯನ್ನು ತನ್ನ ಮೇಲೆ ಹೇರಲಾಗಿದೆ ಎಂದು ಕನ್ನಡ ವಿರೋಧಿ ಮಾತನಾಡಿದ್ದಾರೆ” ಎಂದು ರುಕ್ಕೋಜಿರಾವ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಅಪೂರ್ವ ಕನ್ನಡ ಪ್ರೇಮಿಯಾದ, ನಾಡು ನುಡಿಗಾಗಿ ಹೋರಾಡಿದ ಡಾ. ರಾಜಕುಮಾರ್‌ ಅವರ ಬಗ್ಗೆ ಬರೆದ ತನ್ನ ಲೇಖನವನ್ನು, ಕನ್ನಡ ದ್ರೋಹದ ಮಾತನಾಡಿರುವ ವ್ಯಕ್ತಿಯ ಮರು ಪರಿಷ್ಕರಣೆ ಪಠ್ಯದಲ್ಲಿ ಬಳಸಲು ನಾನು ಒಪ್ಪುವುದಿಲ್ಲ. ಇಂಥವರ ನೇತೃತ್ವದ ಮರು ಪರಿಷ್ಕರಣೆ ಪಠ್ಯದಲ್ಲಿ ಡಾ. ರಾಜಕುಮಾರ್‌ ಸೇರಿಸಲು ಒಪ್ಪುವುದು ಡಾ. ರಾಜಕುಮಾರ್‌ ಅವರಿಗೆ ಅವಮಾನ ಮಾಡಿದಂತೆ ಎಂಬ ಕಾರಣವನ್ನು ತಿಳಿಸುತ್ತಾ ನನ್ನ ಲೇಖನವನ್ನು ಬಳಸಬಾರದು ಎಂದು ವಿನಂತಿಸುತ್ತೇನೆ” ಎಂದು ರುಕ್ಕೋಜಿರಾವ್ ಪತ್ರದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ನಿರ್ಧಾರ ದೊಡ್ಡ ಹುಲ್ಲೂರು ರುಕ್ಕೋಜಿ ರಾವ್ ಸರ್. ಸರ್ ನಿಮ್ಮ ಡಾಕ್ಟರ್. ರಾಜಕುಮಾರ್ ಸಮಗ್ರ ಸಾಹಿತ್ಯ ಪುಸ್ತಕ ಅವಶ್ಯ ಬೇಕಾಗಿದೆ. ತಾವು ದಯವಿಟ್ಟು ನನಗೆ ಸಿಗುವಂತೆ ಮಾಡಿ. ಹಣವನ್ನು ಸಂದಾಯ ಮಾಡುವೆ. ತೊಂದರೆಗೆ ಕ್ಷಮೆ ಇರಲಿ. ನಿಮ್ಮ ರವೀಂದ್ರ. ಕುಲಕರ್ಣಿ.

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...