Homeಮುಖಪುಟಧೈರ್ಯವಿದ್ದರೆ ನಮ್ಮ ಸರ್ಕಾರವನ್ನು ವಜಾಗೊಳಿಸಿ: ಪೌರತ್ವ ಕಾಯ್ದೆಯ ವಿರುದ್ಧ ಮಮತಾ ಬ್ಯಾನರ್ಜಿ ಸವಾಲು

ಧೈರ್ಯವಿದ್ದರೆ ನಮ್ಮ ಸರ್ಕಾರವನ್ನು ವಜಾಗೊಳಿಸಿ: ಪೌರತ್ವ ಕಾಯ್ದೆಯ ವಿರುದ್ಧ ಮಮತಾ ಬ್ಯಾನರ್ಜಿ ಸವಾಲು

- Advertisement -
- Advertisement -

“ನೀವು ನನ್ನ ಸರ್ಕಾರವನ್ನು ವಜಾಗೊಳಿಸಲು ಬಯಸಿದರೆ, ನೀವು ಮಾಡಬಹುದು, ಆದರೆ ನಾನು ಎಂದಿಗೂ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧವಾಗಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ತೃಣಮೂಲ ಕಾಂಗ್ರೆಸ್‌ ಪಕ್ಷದ ನೂರಾರು ಮುಖಂಡರು ಮತ್ತು ಸಾವಿರಾರು ಬೆಂಬಲಿಗರು ಪೋಸ್ಟರ್ ಮತ್ತು ಧ್ವಜಗಳನ್ನು ಹಿಡಿದು ಸಾಥ್‌ ನೀಡಿದರು.

“ನಾನು ಬದುಕಿರುವವರೆಗೂ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು ಜಾರಿಗೊಳಿಸುವುದಿಲ್ಲ. ಅವರು ಬಯಸಿದರೆ ಅವರು ನಮ್ಮ ಸರ್ಕಾರವನ್ನು ವಜಾಗೊಳಿಸಬಹುದು. ನಾವು ಶರಣಾಗುವುದಿಲ್ಲ” ಎಂದು ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ ಹೇಳಿದ್ದಾರೆ.

“ಅವರು ನನ್ನ ಮೃತ ದೇಹದ ಮೇಲೆ ಬಂಗಾಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಯನ್ನು ಜಾರಿಗೆ ತರಬೇಕಾಗುತ್ತದೆ. ನಾವು ಎನ್‌ಆರ್‌ಸಿ ವಿರುದ್ಧ ಧ್ವನಿ ಎತ್ತಿದಾಗ, ನಾವು ಒಬ್ಬಂಟಿಯಾಗಿದ್ದೆವು. ಈಗ, ಇತರ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದಾರೆ, ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಈ ಅಸಾಂವಿಧಾನಿಕ ಕಾಯ್ದೆಯ ವಿರುದ್ಧ ಪ್ರತಿಭಟನೆಗೆ ಜನರು ಭಾಗವಹಿಸಬೇಕೆಂದು ಮಮತಾ ಬ್ಯಾನರ್ಜಿ ಟ್ವಿಟ್ಟರ್‌ನಲ್ಲಿ ಕರೆ ನೀಡಿದ್ದರು. ಇದಕ್ಕೆ ಬಂಗಾಳದ ರಾಜ್ಯಪಾಲರು ಕೆಂಡಾಮಂಡಲವಾಗಿ ಪ್ರತಿಕ್ರಿಯೆ ನೀಡಿದ್ದರು.

“ಸಿಎಎ ವಿರುದ್ಧ ಮುಖ್ಯಮಂತ್ರಿ ಮತ್ತು ಮಂತ್ರಿಗಳು ರ್‍ಯಾಲಿ ನಡೆಸಲಿದ್ದಾರೆ ಎಂದು ತಿಳಿದು ನಾನು ತುಂಬಾ ದುಃಖಿತನಾಗಿದ್ದೇನೆ. ಇದು ನೆಲದ ಕಾನೂನಿಗೆ ವಿರುದ್ಧವಾಗಿದ್ದು, ಅಸಂವಿಧಾನಿಕವಾಗಿದೆ. ಈ ಕಠೋರ ಪರಿಸ್ಥಿತಿಯ ಹಂತದಲ್ಲಿ ಈ ಅಸಂವಿಧಾನಿಕ ಮತ್ತು ಗಲಭೆ ಉಂಟುಮಾಡುವ ಕೃತ್ಯದಿಂದ ದೂರವಿರಲು ಮತ್ತು ರ್‍ಯಾಲಿ ಹಿಂಪಡೆಯಲು ನಾನು ಸಿಎಂಗೆ ಕರೆ ನೀಡುತ್ತೇನೆ.” ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.

ಮಮತಾ ಬ್ಯಾನರ್ಜಿಯವರು ಪೌರತ್ವ ಕಾನೂನಿಗೆ ತೀವ್ರ ವಿರೋಧ ವ್ಯಕ್ತಪಡಿಸಲು ಬುಧವಾರದವರೆಗೆ ಇದೇ ರೀತಿಯ ಮೆರವಣಿಗೆಗಳನ್ನು ಯೋಜಿಸಿದ್ದಾರೆ. 2021 ರಲ್ಲಿ ನಡೆಯಲಿರುವ ಬಂಗಾಳ ವಿಧಾನಸಭೆ ಚುನಾವಣೆಗೆ ಮುಂಚೆಯೇ ಇದು ಮುಖ್ಯಮಂತ್ರಿ ಮತ್ತು ಬಿಜೆಪಿ ನಡುವಿನ ಮತ್ತೊಂದು ಸಂಘರ್ಷದ ಹಂತವನ್ನು ತೆರೆದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...