Homeಮುಖಪುಟಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

ಪ್ರಧಾನಿಯೋರ್ವರು ದೀರ್ಘಾವಧಿ ಅಲಭ್ಯವಾಗುವುದು ಎಷ್ಟು ಸರಿ? ಮೋದಿಯ ಧ್ಯಾನದ ಬಗ್ಗೆ ಉದ್ಭವಿಸಿದ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಚಾರದಲ್ಲಿ ದಾಖಲೆ ಮಟ್ಟದಲ್ಲಿ ಸಮಯವನ್ನು ಕಳೆದಿದ್ದಾರೆ. ದೇಶಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರಗಳ ಬಗ್ಗೆ ಅವರ ಅಸಮರ್ಪಕ ಗಮನದ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು. ಇದೀಗ ಮೋದಿ ಕನ್ಯಾಕುಮಾರಿಯಲ್ಲಿ 48ಗಂಟೆಗಳ ಕಾಲ ಧ್ಯಾನದಲ್ಲಿ ಕುಳಿತುಕೊಂಡಿದ್ದಾರೆ. ಆದರೆ ದೇಶದ ಪ್ರಧಾನಿಯೋರ್ವರು ಇಷ್ಟೊಂದು ಸುದೀರ್ಘ ಅವಧಿಗೆ ಸಂಪರ್ಕಕ್ಕೆ ಅಲಭ್ಯವಾದರೆ ತುರ್ತು ಪರಿಸ್ಥಿತಿ ಉದ್ಭವಿಸಿದರೆ ಮುಂದೇನು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

2022ರ ಜುಲೈನಲ್ಲಿ ಹೊರಡಿಸಲಾದ ಮಂತ್ರಿ ಮಂಡಳಿ ಪಟ್ಟಿಯ ಪ್ರಕಾರ, ಮೋದಿ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನ ಮಂತ್ರಿಯ ನಂತರ ಹಿರಿತನದ ವಿಷಯದಲ್ಲಿ ಮುಂದಿನ ಸಾಲಿನಲ್ಲಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿಯು ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಅವರು ಧ್ಯಾನ ಮಾಡುತ್ತಿರುವುದರಿಂದ ರಾಜನಾಥ್‌ ಸಿಂಗ್‌ ಅಧಿಕಾರ ವಹಿಸಿಕೊಳ್ಳಬೇಕು. ಮೋದಿ ಯಾರನ್ನೂ ಉಪಪ್ರಧಾನಿಯಾಗಿ ನೇಮಿಸಿಲ್ಲ. ಅವರ ಮೊದಲ ಅವಧಿಯಲ್ಲಿ 2014ರ ಸೆಪ್ಟಂಬರ್‌ನಲ್ಲಿ ಯುಎಸ್ ಪ್ರವಾಸ ಮಾಡುವಾಗ, ಆಗಿನ ಗೃಹ ಸಚಿವರಾಗಿದ್ದ ರಾಜನಾಥ್ ಸಿಂಗ್ ಅವರನ್ನು “ತುರ್ತು ಸರ್ಕಾರಿ ವ್ಯವಹಾರ” ನಿರ್ವಹಿಸಲು ಮೋದಿ ಅಧಿಕೃತವಾಗಿ ನಿಯೋಜಿಸಿದ್ದರು. ಈ ಕುರಿತು ಟಿಪ್ಪಣಿಯೊಂದನ್ನು ಕೂಡ ಹೊರಡಿಸಲಾಗಿತ್ತು. ಆದರೆ ಮೋದಿ ತಮ್ಮ ಎರಡು ದಿನಗಳ ಅಂದರೆ 45-ಗಂಟೆಗಳ ದೀರ್ಘಾವಧಿಯ ಧ್ಯಾನಕ್ಕೆ ತೆರಳುವಾಗ ಯಾರನ್ನೂ ಅಧಿಕೃತವಾಗಿ ನಿಯೋಜಿಸಿಲ್ಲ. ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿಲ್ಲ.

ಪ್ರಧಾನ ಮಂತ್ರಿಗಳನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಹೇಗೆ?  

ಪ್ರಧಾನ ಮಂತ್ರಿಗಳ ಕಚೇರಿಯ ಮಾಜಿ ಅಧಿಕಾರಿಯೋರ್ವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಪರಮಾಣು ಕಮಾಂಡ್‌ನ ಏಕೈಕ ಮುಖ್ಯಸ್ಥರಾಗಿರುವುದರಿಂದ ಅವರು ಹಂಗಾಮಿ ಪ್ರಧಾನಿಯನ್ನು ಹೆಸರಿಸಬೇಕಾಗಿದೆ. ಯಾರನ್ನಾದರೂ ಉಸ್ತುವಾರಿಯನ್ನಾಗಿ ನೇಮಿಸದಿರುವುದು ಅತ್ಯಂತ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಚೀನಾ ಅಥವಾ ಪಾಕಿಸ್ತಾನದೊಂದಿಗಿನ ಗಂಭೀರವಾದ ಗಡಿ ಪರಿಸ್ಥಿತಿಯಂತಹ ತುರ್ತು ವಿಚಾರಗಳಿರುವಾಗ ಪ್ರಧಾನಿ ಸಂಪೂರ್ಣವಾಗಿ ಅಜ್ಞಾತವಾಗಿ ಹೋಗುವಂತಿಲ್ಲ. ಅಂತಹ ಸನ್ನಿವೇಶಗಳಲ್ಲಿ ಅವರು ತನ್ನ ಧ್ಯಾನದಿಂದ ಎಚ್ಚರಗೊಳ್ಳಬೇಕಾಗುತ್ತದೆ. ಆದರೆ ದಿನನಿತ್ಯದ ವಿಷಯಗಳಲ್ಲಿ ಅವರ ಸಂಪುಟ ಮತ್ತು ಹಿರಿಯ ಸಚಿವರು ನಿರ್ವಹಿಸಬಹುದು ಎಂದು ಹೇಳಿದ್ದಾರೆ.

ಇನ್ನೊಬ್ಬ ಮಾಜಿ PMO ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ತಾಂತ್ರಿಕವಾಗಿ, ಯಾರೂ ಉಸ್ತುವಾರಿ ವಹಿಸುವ ಅಗತ್ಯವಿಲ್ಲ, ಅವರು ಧ್ಯಾನದಲ್ಲಿದ್ದಾರೆ ಆದರೆ ಅಸಮರ್ಥರಲ್ಲ. ಯಾವುದೇ ರೀತಿಯ ವೈದ್ಯಕೀಯ ಅಲ್ಪವಿರಾಮದಲ್ಲಿಯೂ ಇಲ್ಲ. ಇದು ಸ್ವಯಂ ಹೇರಿದ ಪ್ರತ್ಯೇಕತೆಯಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಅದನ್ನು ಉಲ್ಲಂಘಿಸಬಹುದಾಗಿದೆ ಎಂದು ಹೇಳಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯ ವೇಳೆ ಮೋದಿ ಕೇದಾರನಾಥದಲ್ಲಿರುವ ರುದ್ರ ಧ್ಯಾನದ ಗುಹೆಯಲ್ಲಿ 17 ಗಂಟೆಗಳ ಕಾಲ ಧ್ಯಾನದಲ್ಲಿ ಕಳೆದಿದ್ದರು. ಮಾದರಿ ನೀತಿ ಸಂಹಿತೆ ಮತ್ತು ಮೌನ ಅವಧಿಯ ವೇಳೆ ಮೋದಿಯ ಧ್ಯಾನದ ಮಾಧ್ಯಮಗಳ ಕವರೇಜ್‌ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಬಾರಿಯೂ ಕಾಂಗ್ರೆಸ್ ಔಪಚಾರಿಕವಾಗಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ದೂರು ನೀಡಿದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಮೌನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...