Homeಮುಖಪುಟಕೆಂಪುಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿಯಾಗಿದ್ದ ಪ್ರತಿಪಕ್ಷ ನಾಯಕನ ಆಸನ

ಕೆಂಪುಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿಯಾಗಿದ್ದ ಪ್ರತಿಪಕ್ಷ ನಾಯಕನ ಆಸನ

- Advertisement -
- Advertisement -

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.  ಬಳಿಕ ಅವರು ಸಂದೇಶವನ್ನು ಕಳುಹಿಸಿ, ದೇಶದ ಅಭಿವೃದ್ಧಿಯಲ್ಲಿ ಹಿಂದಿನ ಪ್ರಧಾನಿಗಳ ಪಾತ್ರವನ್ನು ಅವರು ಬಣ್ಣಿಸಿದ್ದು,  ಪ್ರಸ್ತುತ ಸರಕಾರ ಪ್ರತಿಪಕ್ಷಗಳನ್ನು ಭೇಟೆಯಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಭಾಷಣ ಮಾಡಿದ ಐತಿಹಾಸಿಕ ಕೆಂಪು ಕೋಟೆಯ ಒಂದು ವಿಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿನ ಆಸನ ಖಾಲಿ ಇತ್ತು.

ಮಲ್ಲಿ ಕಾರ್ಜುನ ಖರ್ಗೆ ಅವರು  ಪಕ್ಷದ ಅಧ್ಯಕ್ಷರಾಗಿ ಮೊದಲ ಬಾರಿಗೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದರು. ಅವರು ತಮ್ಮ ಭಾಷಣದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸಾಂಪ್ರದಾಯಿಕವಾಗಿ ಸ್ವಾತಂತ್ರ್ಯ ದಿನದಂದು ಯಾವುದೇ ಟೀಕೆ  ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕಣ್ಣಿನ ಸಮಸ್ಯೆ ಇರುವ ಕಾರಣ ಕೆಂಪುಕೋಟೆಗೆ ಹೋಗಲು ಸಾಧ್ಯವಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಅವರು ತಮ್ಮ ಮನೆಯಲ್ಲಿ ಮತ್ತು ನಂತರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡುತ್ತೇನೆ.  ಪ್ರಧಾನಿ ಅವರಿಗೆ ತುಂಬಾ ಭದ್ರತೆ ಕೊಡಲಾಗುತ್ತದೆ, ಮತ್ತು ನಂತರ ಅವರು ಗೃಹ ಸಚಿವರು, ರಕ್ಷಣಾ ಸಚಿವರು ಮತ್ತು ಸ್ಪೀಕರ್ ಹೊರಡುವವರೆಗೆ ನಮ್ಮನ್ನು ಹೋಗಲು ಬಿಡುವುದಿಲ್ಲ, ಆದ್ದರಿಂದ ಅದರಲ್ಲಿ ಭಾಗವಹಿಸುವುದು ಅಸಾಧ್ಯವಾಗಿತ್ತು ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಖರ್ಗೆ ತನ್ನ ವಿಡಿಯೋ ಸಂದೇಶದಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮೌಲಾನಾ ಆಜಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಬಿಆರ್ ಅಂಬೇಡ್ಕರ್  ಅವರಿಗೆ  ಗೌರವ ಸಲ್ಲಿಸಿದ್ದಾರೆ.

ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರ ಕಾಂಗ್ರೆಸ್ ಪ್ರಧಾನಿಗಳಾದ ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ನೆನೆಪಿಸಿಕೊಂಡಿದ್ದಾರೆ.  ಅಟಲ್ ಬಿಹಾರಿ ವಾಜಿಪಾಯಿ ಅವರ ಸಾಧನೆಯನ್ನು ಕೂಡ ಉಲ್ಲೇಖಿಸಿದ್ದಾರೆ.

ಭಾರತದ ಎಲ್ಲಾ ಪ್ರಧಾನಿಗಳು ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.  ಆದರೆ ಈಗ ಕೆಲವು ಜನರು ಎಲ್ಲವೂ ಕಳೆದ ಕೆಲ ವರ್ಷಗಳಿಂದ ನಡೆದಿರುವುದು ಎಂದು ಹೇಳಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಪ್ರಧಾನಿ ಮೋದಿಗೆ ಪರೋಕ್ಷವಾಗಿ ಟೀಕಿಸಿದ್ದಾರೆ.

ಇವತ್ತು  ಪ್ರಜಾಪ್ರಭುತ್ವ, ಸಂವಿಧಾನ, ಸ್ವಾಯುತ್ತ ಸಂಸ್ಥೆಗಳು ಗಂಭೀರವಾದ ಬೆದರಿಕೆಯನ್ನು ಎದುರಿಸುತ್ತಿದೆ ಎಂದು ನಾನು ನೋವಿನಿಂದ ಹೇಳುತ್ತೇನೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಹೊಸ ಹೊಸ ಉಪಕರಣಗಳು ಬಳಕೆಯಾಗುತ್ತಿವೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ದಾಳಿಗಳಷ್ಟೇ ಅಲ್ಲ, ಚುನಾವಣಾ ಆಯೋಗವನ್ನೂ ದುರ್ಬಲಗೊಳಿಸಲಾಗುತ್ತಿದೆ. ಪ್ರತಿಪಕ್ಷಗಳ ಸಂಸದರಿಗೆ ಮೂಗುದಾರ ಹಾಕಲಾಗುತ್ತಿದೆ, ಅಮಾನತುಗೊಳಿಸಲಾಗುತ್ತಿದೆ, ಮೈಕ್‌ಗಳನ್ನು ಮ್ಯೂಟ್ ಮಾಡಲಾಗುತ್ತಿದೆ, ಭಾಷಣಗಳನ್ನು ಹೊರಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read