Homeಮುಖಪುಟಬಿಎಸ್‌ಪಿಯಿಂದ ಚುನಾವಣೆಗಾಗಿ ರಾಮ ಧ್ಯಾನ: ಮಂದಿರ ನಿರ್ಮಾಣ ತ್ವರಿತಗೊಳಿಸುವ ಭರವಸೆ

ಬಿಎಸ್‌ಪಿಯಿಂದ ಚುನಾವಣೆಗಾಗಿ ರಾಮ ಧ್ಯಾನ: ಮಂದಿರ ನಿರ್ಮಾಣ ತ್ವರಿತಗೊಳಿಸುವ ಭರವಸೆ

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣವನ್ನು ತ್ವರಿತಗೊಳಿಸುವುದಾಗಿ ಮಾಯಾವತಿಯ ಬಹುಜನ ಸಮಾಜ ಪಕ್ಷ ಶುಕ್ರವಾರ ಭರವಸೆ ನೀಡಿದೆ. ದೇವಾಲಯ ನಿರ್ಮಾಣಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುವುದು ಮಾತ್ರ ಬಿಜೆಪಿಯ ಕೆಲಸವಾಗಿದೆ ಎಂದು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದೆ.

ಉತ್ತರ ಪ್ರದೇಶದ ದಲಿತ ಮತಗಳ ಮೇಲೆಯೇ ಕೇಂದ್ರೀತವಾಗಿರುವ ರಾಜಕೀಯ ಪಕ್ಷ ಬಹುಜನ ಸಮಾಜ ಪಕ್ಷದ ಈ ಹೇಳಿಕೆ ಚುನಾವಣಾ ತಂತ್ರವಾಗಿ ನೋಡಲಾಗುತ್ತಿದೆ. ಬ್ರಾಹ್ಮಣರ ಒಲೈಕೆಗಾಗಿ ಇಂತಹ ಹೇಳಿಕೆಗಳು ಬ್ರಾಹ್ಮಣ ಸಮ್ಮೇಳನಗಳನ್ನು ಬಿಎಸ್‌ಪಿ ನಡೆಸುತ್ತಿದೆ.

“ಬಿಜೆಪಿಗರು ರಾಮ ಮಂದಿರದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ಆದರೆ, ಭವ್ಯವಾದ ರಾಮನ ದೇವಾಲಯವನ್ನು ನಿರ್ಮಿಸಲು ಅದನ್ನು ಬಳಸುತ್ತಿಲ್ಲ. ಬಿಜೆಪಿಗರು ದೇವಾಲಯವನ್ನು ನಿರ್ಮಿಸಲು ಬಯಸುವುದಿಲ್ಲ. ನಾವು ಅವರಿಂದ ಈ ಕೆಲಸ ಆಗುವಂತೆ ಮಾಡುತ್ತೇವೆ. ದೇವಾಲಯ ನಿರ್ಮಾಣ ಚುರುಕುಗೊಳಿಸುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಆಪ್ತ ಸತೀಶ್ ಚಂದ್ರ ಮಿಶ್ರಾ ಅಯೋಧ್ಯೆಯಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧೆ: ಓವೈಸಿ ಜೊತೆ ಮೈತ್ರಿ ತಳ್ಳಿ ಹಾಕಿದ ಮಾಯಾವತಿ

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಎಸ್‌ಪಿ ರಾಜ್ಯದಲ್ಲಿ ಬ್ರಾಹ್ಮಣ ಸಮ್ಮೇಳನಗಳನ್ನು ಆಯೋಜಿಸುತ್ತಿದ್ದು, ಇದು ಮೊದಲನೆಯ ಬ್ರಾಹ್ಮಣ ಸಮ್ಮೇಳನವಾಗಿದೆ. ಆದರೆ, ಅಯೋಧ್ಯೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಮಾಯಾವತಿ ಭಾಗವಹಿಸಸಿರಲಿಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಮಿಶ್ರಾ ಉಸ್ತುವಾರಿ ವಹಿಸಿದ್ದರು.

ಯುಪಿ ಜನಸಂಖ್ಯೆಯ ಅಂದಾಜು ಶೇಕಡಾ 11 ರಷ್ಟು ಬ್ರಾಹ್ಮಣರು ಇದ್ದು, ಸಾಂಪ್ರದಾಯಿಕವಾಗಿ ರಾಜ್ಯದಲ್ಲಿ ರಾಜಕೀಯ ಮತ್ತು ಅಧಿಕಾರ ಸಮೀಕರಣಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಬ್ರಾಹ್ಮಣರು ಮತ್ತು ಪರಿಶಿಷ್ಟ ಜಾತಿಗಳ ಮತಗಳಿಂದ 2007 ರಲ್ಲಿ ಮಾಯಾವತಿ ಪಕ್ಷ ಅಧಿಕಾರಕ್ಕೆ ಬಂದಿತ್ತು.  ಬಹುಮತ ಪಡೆದಿದ್ದ ಮಾಯಾವತಿ ಪಕ್ಷ ಐದು ವರ್ಷಗಳ ಕಾಲ ಆಳಿದ್ದರು. ಬಿಎಸ್‌ಪಿಯಿಂದ ಇಲ್ಲಿಯವರೆಗೆ 40 ಕ್ಕೂ ಹೆಚ್ಚು ಬ್ರಾಹ್ಮಣ ಶಾಸಕರು ಆಯ್ಕೆಯಾಗಿದ್ದಾರೆ.

ಜಾತಿಯ ಆಧಾರದಲ್ಲಿ ಠಾಕೂರ್ ಆಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಬ್ರಾಹ್ಮಣ ಸಮುದಾಯವು  ಅಸಮಾಧಾನ ಹೊಂದಿದೆ. ಆದರೆ, ಈ ವಿಚಾರವನ್ನು ಬಿಜೆಪಿ ತಳ್ಳಿಹಾಕಿದೆ.

ಇತ್ತ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಮತ್ತು ಮಾಯಾವತಿಯ ಬಿಎಸ್‌ಪಿ ಎರಡು ಪಕ್ಷಗಳು ಚುನಾವಣೆಗೆ ಮುನ್ನ ಬ್ರಾಹ್ಮಣ ಸಮುದಾಯವನ್ನು ಗೆಲ್ಲುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.


ಇದನ್ನೂ ಓದಿ: ರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಬಹಳ ನೋವಿನ ಸಂಗತಿ, ಚುನಾವಣೆಯಲ್ಲಿ ಗೆಲ್ಲಲು ಬಿ.ಎಸ್.ಪಿ. ಇಂತಹ ಹಾದಿಯನ್ನು ಹಿಡಿಯಬಾರದಿತ್ತು. ಅಂಬೇಡ್ಕರ್ ಮತ್ತು ಕಾನ್ಶೀರಾಂ ಅವರ ಕನಸುಗಳನ್ನು ಮಾಯಾವತಿಯವರು ನುಚ್ಚುನೂರು ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...