Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಯು.ಯು. ಲಲಿತ್ ನೇಮಕ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಯು.ಯು. ಲಲಿತ್ ನೇಮಕ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಆಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಬುಧವಾರ ನೇಮಕಗೊಳಿಸಿದ್ದಾರೆ. ಹಾಲಿ ಸಿಜೆಐ ಎನ್.ವಿ. ರಮಣ ಅವರು ಆಗಸ್ಟ್‌‌ 26 ರಂದು ನಿವೃತ್ತಿ ಪಡೆಯಲಿದ್ದಾರೆ.

ಆಗಸ್ಟ್‌‌ 4 ರಂದು ನ್ಯಾಯಮೂರ್ತಿ ಎನ್.ವಿ. ರಮಣ ಅವರು  ತನ್ನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಲಲಿತ್ ಅವರು 2014 ರ ಆಗಸ್ಟ್ 13 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಮೂರ್ತಿಯಾಗಿ ನೇಮಕಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಪ್ರೀಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮುನ್ನ ಅವರು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಲಲಿತ್ ಅವರು ನೇರವಾಗಿ ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕಗೊಂಡ 6ನೇ ಹಿರಿಯ ವಕೀಲರಾಗಿದ್ದಾರೆ.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ದೇಶದ 49ನೇ ಸಿಜೆಐ ಆಗಿ ಆಗಸ್ಟ್‌‌ 27 ರಂದು ಅದಿಕಾರ ವಹಿಸಿಕೊಳ್ಳುತ್ತಾರೆ. ಅವರ ಅಧಿಕಾರಾವಧಿ ಕೇವಲ 74 ದಿನಗಳು ಮಾತ್ರ ಇರಲಿವೆ. 2022 ರ ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ. ಇವರ ನಂತರ ಭಾರತದ ಮುಖ್ಯ ನ್ಯಾಯಾಮೂರ್ತಿಯಾಗಲು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರು ಮುಂಚೂಣಿಯ ಸ್ಥಾನದಲ್ಲಿದ್ದು ಅವರು ಈ ಹುದ್ದೆಗೇರಿದರೆ ಸುಮಾರು 2 ವರ್ಷಗಳ ಕಾಲ ಅಧಿಕಾರದಲ್ಲಿ ಇರಲಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ತಪ್ಪು ಮಾಹಿತಿ: BJP ಶಾಸಕರ ಯಡವಟ್ಟು | Naanu Gauri

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ತಪ್ಪು ಮಾಹಿತಿ: BJP ಶಾಸಕರ ಯಡವಟ್ಟು

0
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆ, ಅವರಿಗೆ ಸ್ವಾಗತ ಕೋರಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹಾಕಿರುವ ಬ್ಯಾನರ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಬ್ಯಾನರ್‌ನಲ್ಲಿ ಮುರ್ಮು ಅವರನ್ನು ‘ದೇಶದ...