Homeಮುಖಪುಟಅಸಾದುದ್ದೀನ್‌ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ; ಒಬ್ಬನ ಬಂಧನ

ಅಸಾದುದ್ದೀನ್‌ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ; ಒಬ್ಬನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದಾಗ ತಮ್ಮ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ನಾಯಕ, ಸಂಸದ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಆದರೆ ಅವರ ಕಾರಿನ ಟೈರ್‌ಗಳು ಪಂಕ್ಚರ್ ಆಗಿವೆ ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಅಲ್‌‌ಹಂದುಲಿಲ್ಲಾ” ಎಂದು ಅವರು ಬರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬನ ಬಂಧನವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಹಿಂದೂ ದೇಗುಲಗಳನ್ನು ’ಪ್ರಭುತ್ವ ನಿಯಂತ್ರಣಮುಕ್ತ’ಗೊಳಿಸುವ ದುಷ್ಟ ಸಂಚು

ಪಶ್ಚಿಮ ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ದೆಹಲಿ ಬಳಿಯ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ಗಳು ಶಸ್ತ್ರಾಸ್ತ್ರಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಒವೈಸಿ ತಿಳಿಸಿದ್ದಾರೆ.

“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿದರು; ಒಟ್ಟು 3-4 ಜನರಿದ್ದರು” ಎಂದು ಓವೈಸಿ ಹೇಳಿದ್ದಾರೆ.

“ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಅವರು ಬರೆದಿದ್ದಾರೆ. ಈ ಬಗ್ಗೆಅವರು ಚಿತ್ರವನ್ನು ಕೂಡಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಹೇಳಿಕೆ ನಿಜವೇ?

ಅವರು ಟ್ವೀಟ್‌ ಮಾಡಿರುವ ಚಿತ್ರದಲ್ಲಿ ಬಿಳಿ ಕಾರಿನ ಚಿತ್ರಣವಿದ್ದು, ಅದರ ಬಾಡಿಯಲ್ಲಿ ಎರಡು ಬುಲೆಟ್ ರಂಧ್ರಗಳು ಕಾಣುತ್ತಿದೆ. ಮೂರನೇ ಬುಲೆಟ್ ಟೈರ್‌ಗೆ ತಗುಲಿದೆ ಎನ್ನಲಾಗಿದೆ. ಓವೈಸಿ ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದ್ದಾರೆ.

ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎಐಎಂಐಎಂ ನಾಯಕರಾಗಿರುವ ಓವೈಸಿ ಮೀರತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...