HomeಅಂಕಣಗಳುKarnataka against SIRಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

- Advertisement -
- Advertisement -

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಆಗಸ್ಟ್ 10ರಂದು ವರದಿ ಮಾಡಿದೆ.

ಕರಡು ಪಟ್ಟಿ ಪ್ರಕಟಿಸುವ ಮುನ್ನ ಗುಣಮಟ್ಟ ತಪಾಸಣೆಯ ಭಾಗವಾಗಿ, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಮತದಾರರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಈ ಮತದಾರರು ಈ ಹಿಂದೆ ಎಎಸ್‌ಡಿಡಿಒ (ಗೈರುಹಾಜರು, ವಲಸೆ ಹೋದವರು, ಮೃತರು, ನಕಲಿ ಮತ್ತು ಇತರೆ) ಪಟ್ಟಿಯಲ್ಲಿದ್ದರು.

ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಮುನ್ನ ಚುನಾವಣಾ ಆಯೋಗ ನಡೆಸುತ್ತಿರುವ ಗುಣಮಟ್ಟ ತಪಾಸಣೆಯಿಂದಾಗಿ, ಆಗಸ್ಟ್ 3 ಮತ್ತು 9 ರ ನಡುವೆ ಕರ್ನಾಟಕದ ಎಎಸ್‌ಡಿಡಿಒ ಪಟ್ಟಿಯಿಂದ ಸುಮಾರು 2.9 ಲಕ್ಷ ಮತದಾರರನ್ನು ಕೈಬಿಡಲಾಗಿದ್ದು, ಇದರಲ್ಲಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ಸಂಖ್ಯೆಯ ಕಡಿತ ದಾಖಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಸದ್ಯ ಕರ್ನಾಟಕದ ಎಎಸ್‌ಡಿಡಿಒ ಪಟ್ಟಿಯಲ್ಲಿ 1 ಕೋಟಿಗೂ ಹೆಚ್ಚು ಹೆಸರುಗಳಿದ್ದು, ಪಟ್ಟಿಯಲ್ಲಿ ಮುಂದುವರಿಯಲು ಅಥವಾ ಅದರಿಂದ ಹೊರಹೋಗಲು ಜನರು ತಮ್ಮ ಗುರುತಿನ ಪುರಾವೆಗಳನ್ನು ಸಲ್ಲಿಸಬೇಕಾಗಿದೆ. ಎಎಸ್‌ಡಿಡಿಒ ಪ್ರಮಾಣ ಕರ್ನಾಟಕದ ಒಟ್ಟು ಮತದಾರರ ಸಂಖ್ಯೆಯ ಸುಮಾರು ಶೇಕಡಾ 20 ರಷ್ಟು ಅಥವಾ ಆರನೇ ಒಂದು ಭಾಗದಷ್ಟಿದೆ ಎಂದು ವರದಿ ಹೇಳಿದೆ.

SIR ಪ್ರಕ್ರಿಯೆಯ ಬಗ್ಗೆಯೇ ಪ್ರಶ್ನೆಗಳನ್ನು ಮೂಡಿಸಿದ ವರದಿ

ಟೈಮ್ಸ್ ಆಫ್ ಇಂಡಿಯಾದ ಮೇಲಿನ ವರದಿ ಕರ್ನಾಟಕದ ಒಟ್ಟಾರೆ ಎಸ್‌ಐಆರ್ ಪ್ರಕ್ರಿಯೆ ಬಗ್ಗೆಯೇ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

1. ಗುಣಮಟ್ಟ ತಪಾಸಣೆಯ ಭಾಗವಾಗಿ ಎಎಸ್‌ಡಿಡಿಒ ಪಟ್ಟಿಯಿಂದ ಲಕ್ಷಾಂತರ ಜನರನ್ನು ಕೈಬಿಡಲಾಗಿದೆ ಎಂದು ವರದಿ ಹೇಳುತ್ತದೆ. ಹಾಗಾದರೆ, ಈ ತಪಾಸಣೆ ಮಾಡದೇ ಇದ್ದಿದ್ದರೆ ಈ ಜನರು ತಮ್ಮ ಹಕ್ಕು ಕಳೆದುಕೊಳ್ಳುತ್ತಿರಲಿಲ್ಲವೇ?

2. ಲಕ್ಷಾಂತರ ಮತದಾರರನ್ನು ಡಿಲೀಟ್ ಪಟ್ಟಿಗೆ ಹಾಕುವಷ್ಟು ಕಳಪೆ ಗುಣಮಟ್ಟದಿಂದ ಈ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆಯಾ? ಜನರ ಅಮೂಲ್ಯವಾದ ಸಾಂವಿಧಾನಿಕ ಹಕ್ಕನ್ನು ಚುನಾವಣಾ ಆಯೋಗ ಇಷ್ಟೊಂದು ತುಚ್ಚವಾಗಿ ನೋಡುತ್ತಿದೆಯಾ?

3. ಗುಣಮಟ್ಟ ತಪಾಸಣೆ ವೇಳೆ ಇಷ್ಟೊಂದು ಸಂಖ್ಯೆಯಲ್ಲಿ ಜನರನ್ನು ಪಟ್ಟಿಯಿಂದ ಕೈಬಿಟ್ಟರೆ, ಇನ್ನುಳಿದ ಪಟ್ಟಿಯಲ್ಲಿ ಇರುವ ಜನರ ಬಗ್ಗೆ ಚುನಾವಣಾ ಆಯೋಗ ಕೊಟ್ಟ ತೀರ್ಪನ್ನು ಸರಿ ಎಂದು ನಂಬುವುದಾದರೂ ಹೇಗೆ?

4. ಈಗ ಎಎಸ್‌ಡಿಡಿಒ ಪಟ್ಟಿಯಿಂದ ಕೈಬಿಡಲಾದ ಜನರನ್ನು ಕೆಲ ದಿನಗಳ ಹಿಂದೆ ಮುಖ್ಯ ಚುನಾವಣಾ ಆಯುಕ್ತರೇ ಎಎಸ್‌ಡಿಡಿಒಗಳು ಎಂದು ತೀರ್ಪು ಕೊಟ್ಟಿದ್ದರು. ಸರಿಯಾಗಿ ಪರಿಶೀಲನೆ ಮಾಡದೆ ಈ ತೀರ್ಮಾನಕ್ಕೆ ಆಯೋಗ ಬಂದಿದ್ದು ಹೇಗೆ?

5. ಬದುಕಿರುವ ವ್ಯಕ್ತಿಯನ್ನು ಸತ್ತಿದ್ದಾನೆ ಎಂದು ತೀರ್ಪು ಕೊಟ್ಟು, ಈಗ ಇಲ್ಲಾ ಸತ್ತಿಲ್ಲ ಎನ್ನುವಂತಹ ಈ ಎಸ್‌ಐಆರ್ ಪ್ರಕ್ರಿಯೆಯನ್ನು ನಂಬುವುದಾರೂ ಹೇಗೆ?

6. ಬರೀ ಎಎಸ್‌ಡಿಡಿಒ ಮಾತ್ರವಲ್ಲದೆ ಇದುವರೆಗೆ ನಡೆದಿರುವ ಮತ್ತು ಮುಂದೆ ನಡೆಯಲಿರುವ ಎಸ್‌ಐಆರ್ ಪ್ರಕ್ರಿಯೆಯ ಸಮರ್ಪಕತೆ, ಪಾರದರ್ಶಕತೆ ಮತ್ತು ಗುಣಮಟ್ಟತೆಯನ್ನು ಜನರು ನಂಬುವುದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ.

ಒಟ್ಟಾರೆಯಾಗಿ ಎಎಸ್‌ಡಿಡಿಒ ಪಟ್ಟಿಯ ಸಂಖ್ಯೆ ಇಳಿಕೆಯಾಗಿದೆ ಎಂದು ಜನರು ನಿರಾಳರಾಗುವ ಸಮಯ ಇದಲ್ಲ. ಟೈಮ್ಸ್ ಆಫ್ ಇಂಡಿಯಾದ ವರದಿ ಇಡೀ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆಯೇ ಹಲವು ಪ್ರಶ್ನೆಗಳು ಹುಟ್ಟು ಹಾಕಿದೆ ಮತ್ತು ಆತಂಕವನ್ನು ಮೂಡಿಸಿದೆ. ಇವೆಲ್ಲದಕ್ಕೂ ಚುನಾವಣಾ ಆಯೋಗ ಸಮಂಜಸವಾದ ಉತ್ತರ ಕೊಡಲೇ ಬೇಕಿದೆ. ಏಕೆಂದರೆ, ಪ್ರತಿಯೊಬ್ಬ ಅರ್ಹರ ಮತದಾನದ ಹಕ್ಕು ತುಚ್ಚವಾಗಿ ಕಾಣುವಂತದಲ್ಲ. ಅದು ಅತ್ಯಂತ ಅಮೂಲ್ಯವಾದದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...