Homeಚಳವಳಿಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧಿಸಲಾಗಿದೆ.

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆದರೆ ಪ್ರತಿಭಟನೆಗೆ ಪೊಲೀಸರು ಅಡ್ಡಿ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ತೆರಳಿದ್ದ ಆಶಾ ಕಾರ್ಯಕರ್ತರನ್ನು ತುಮಕೂರು, ಮಂಡ್ಯ, ಮದ್ದೂರಿನಲ್ಲಿ ತಡೆಹಿಡಿಯಲಾಗಿದೆ ಎಂದು ದೂರಿದ್ದಾರೆ.

12,000 ರೂ. ಮಾಸಿಕ ಗೌರವಧನ ನಿಗದಿ, ಬಾಕಿಯಿರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಆರಂಭಿಸಿರುವ ಆಶಾ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆಯ ನೇತೃತ್ವ ವಹಿಸಿದೆ. ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?


“ನಮ್ಮನ್ನು ಸಾಂಕ್ರಾಮಿಕ ರೋಗದ ಮುಂಚೂಣಿಯ ಯೋಧರು ಎಂದು ಕರೆಯಲಾಗುತ್ತದೆ. ಆದರೆ ಯಾವುದೇ ಸುರಕ್ಷತೆಯಿಲ್ಲದೆ ಕರ್ತವ್ಯಕ್ಕೆ ಹೋಗುತ್ತಿದ್ದೇವೆ. ನಮಗೆ ಪಿಪಿಇ ಕಿಟ್‌ಗಳು ಬೇಕು. ಕನಿಷ್ಠ 12,000 ರೂ.ಗಳ ಸ್ಥಿರ ವೇತನವನ್ನು ನಾವು ಕೋರುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ಅಳಲು

ಎಷ್ಟು ಹೋರಾಡಿದರೂ ನಮ್ಮತ್ತ ತಿರುಗಿ ನೋಡದ ಸರ್ಕಾರ.. ನೀವಾದರೂ ನಮ್ಮೊಡನೆ ದನಿಯೆತ್ತಿ

Posted by Naanu Gauri on Wednesday, September 23, 2020

“ಪ್ರಸ್ತುತ ಆಶಾ ಕಾರ್ಯಕರ್ತರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತಿದೆ. ಕೊರೊನಾ ಸಾಂಕ್ರಮಿಕ ಪ್ರಾರಂಭವಾದಾಗ ಸರ್ಕಾರ 3 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಇದುವರೆಗೂ ನೀಡಿಲ್ಲ. ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ ಹೇಳಿದ್ದಾರೆ

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದು ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧನದ ಭೀತಿಯನ್ನು ಸರ್ಕಾರ ಒಡ್ಡುತ್ತಿದೆ. ಇದೇ ಏನು ಸರ್ಕಾರದ ಧೋರಣೆ. ಥೂ, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ” ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಕಾರ್ಯದರ್ಶಿಗಳಾದ ಕೆ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಳಿಪಟ-2: ಯೋಗರಾಜ ಭಟ್ರ ಲಾಜಿಕ್‌ಗಳನ್ನು ‘ದೇವ್ಲೆ’ ಬಲ್ಲ!

ನೀವು ಬರಹಗಾರರಾಗಿದ್ದೀರಾ? ಹೌದಾದರೆ, ನೀವು ಆರಂಭಿಕ ದಿನಗಳಲ್ಲಿ ಬರೆದ ಒಂದು ಬರಹವನ್ನು ಮತ್ತೆ ಓದಿ ನೋಡಿ. ಎಷ್ಟೊಂದು ಪೇವಲವಾಗಿ ಬರೆದಿದ್ದೇನಲ್ಲ ಅಂತ ನಿಮಗೆಯೇ ಅನಿಸಲೂಬಹುದು. ಕಾಲ ಉರುಳಿದಂತೆ, ನಮ್ಮ ಅನುಭವಗಳು ದಟ್ಟವಾದಂತೆ ಬರವಣಿಗೆಯೂ...