Homeಕರ್ನಾಟಕಸಿಡಿದೆದ್ದ ಆಶಾ ಕಾರ್ಯಕರ್ತೆಯರು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ಸಿಡಿದೆದ್ದ ಆಶಾ ಕಾರ್ಯಕರ್ತೆಯರು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

- Advertisement -
- Advertisement -

“ಚಪ್ಪಾಳೆ, ಹೂಮಳೆಗಳ ಗೌರವ ಸಾಕು! ಗೌರವಯುತ ಜೀವನ ನಡೆಸಲು ಸೂಕ್ತ ಗೌರವಧನ ಬೇಕು” ಘೋಷಣೆ ಇಂದು ಬೆಂಗಳೂರಿನಲ್ಲಿ ಮಾರ್ದನಿಸಿದೆ. ಜುಲೈ 10 ರಿಂದ ಹೋರಾಟಕ್ಕಿಳಿದಿರುವ ರಾಜ್ಯದ ಆಶಾ ಕಾರ್ಯಕರ್ತರು ಇಂದು ಬೆಂಗಳೂರಿಗೆ ಧಾವಿಸಿ ದನಿಯೆತ್ತಿದ್ದಾರೆ.

ಮಾಸಿಕ 12,000 ವೇತನ ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ  ಕಳೆದ 20 ದಿನಗಳಿಂದ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಇಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿಯೂ ಕಳೆದ ನಾಲ್ಕು ತಿಂಗಳುಗಳಿಂದ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿದ್ದರೂ ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸಿಲ್ಲ. ಈಗ ಸಿಗುತ್ತಿರುವ ಪ್ರೋತ್ಸಾಹಧನ ಯಾವುದಕ್ಕೂ ಸಾಲುತ್ತಿಲ್ಲ. ಹಾಗಾಗಿ 12,000 ಮಾಸಿಕ ವೇತನ ಮತ್ತು ಕೆಲಸ ಮಾಡುವ ವೇಳೆ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಒದಗಿಸಬೇಕೆಂದು ಆಶಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಲವು ಜಿಲ್ಲೆಗಳಿಂದಾ ನೂರಾರು ಆಶಾ ಕಾರ್ಯಕರ್ತರು ಪ್ರತಿಭಟನೆಗೆ ಆಗಮಿಸಿದ್ದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ನಗರದ ಮೌರ್ಯ ಸರ್ಕಲ್ ಬಳಿ ಪ್ರತಿಭಟನಾಕಾರರನ್ನು ತಡೆದಿದ್ದು ಅಲ್ಲಿಯೇ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮುಂದುವರೆದಿದೆ.

ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಿದ್ದು, ಕೋವಿಡ್ ಸಮಯದಲ್ಲಿಯೂ ದುಡಿಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ಮಾಸ್ಕ್, ಪಿಪಿಇ ಕಿಟ್, ಸ್ಯಾನಿಟೈಸರ್ ಸೇರಿದಂತೆ ಅವಶ್ಯಕ ಆರೋಗ್ಯ ರಕ್ಷಾಣ ಸಲಕರಣೆಗಳು ಸರ್ಕಾರ ನೀಡುತ್ತಿಲ್ಲ, ಮಾಸಿಕ ವೇತನ ನಿಗಧಿ ಮಾಡಿಲ್ಲ ಎಂದು ದೂರಿದ್ದಾರೆ.

ಈ ಹಿಂದೆ ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಹತ್ತಾರು ಭಾರಿ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗಿದೆ. ಆದರೆ ಸರ್ಕಾರ ಕೇವಲ ಭರವಸೆಗಳಲ್ಲೇ ಕೈತೊಳೆದುಕೊಂಡಿದೆ. ಆದರೆ ಈ ಬಾರಿ ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಹಿಂದೆಲ್ಲಾ ಆಶಾ ಕಾರ್ಯಕರ್ತರ ಪ್ರತಿಭಟನೆ ಎಂದರೆ ಬೆಂಗಳೂರು ಗುಲಾಬಿ ನಗರವಾಗಿ ಪರಿವರ್ತನೆಯಾಗುತ್ತಿತ್ತು. ಎಲ್ಲಿ ನೋಡಿದರು ಗುಲಾಬಿ ಬಣ್ಣದ ಸೀರೆಯುಟ್ಟ ಆಶಾ ಕಾರ್ಯಕರ್ತರ ದಂಡು ಕಂಡುಬರುತ್ತಿತ್ತು. ಆದರೆ ಕೋವಿಡ್ ಸಾಂಕ್ರಾಮಿಕದ ಕಾರಣವಾಗಿ ಎಲ್ಲಾ ಆಶಾ ಕಾರ್ಯಕರ್ತರು ಈ ಬಾರಿ ಬೆಂಗಳೂರಿಗೆ ಬಂದಿಲ್ಲ. ತಾವಿರುವ ಜಿಲ್ಲೆಗಳಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಪ್ರತಿಭಟನೆಯಲ್ಲಿಯೂ ಸಹ ಸಾಮಾಜಿಕ ಅಂತರ ಕಾಯ್ದುಕೊಂಡು, ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...