Homeಮುಖಪುಟಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಗೆಹ್ಲೋಟ್‌‌ ಕಾಂಗ್ರೆಸ್‌‌ನ ಮುಂದಿನ ಅಧ್ಯಕ್ಷರಾಗಲು ಸ್ಪರ್ಧಿಸುತ್ತಿರುವುದರಿಂದ, ಅದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ಸುಳಿವು ನೀಡಿದ್ದರು

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌ನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ದವಾಗುತ್ತಿರುವ ಅಶೋಕ್ ಗೆಹ್ಲೋಟ್ ಅವರು ತಮ್ಮ ಮುಖ್ಯಮಂತ್ರಿ  ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದು ಪಕ್ಷದ ಕೆಲವು ಶಾಸಕರು ಹೇಳಿದ್ದಾರೆ. ಹೀಗಾಗಿ ಸಂಜೆ 7 ಗಂಟೆಗೆ ಆರಂಭವಾಗಬೇಕಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಭಾನುವಾರ ತಡವಾಗಿ ಪ್ರಾರಂಭವಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರು ಕಾಂಗ್ರೆಸ್‌‌ನ ಮುಂದಿನ ಅಧ್ಯಕ್ಷರಾಗಲು ಸ್ಪರ್ಧಿಸುತ್ತಿರುವುದರಿಂದ, ಅದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸುಳಿವು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸಲು ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಇದಾಗಿ ಎರಡು ದಿನಗಳ ನಂತರ ಫಲಿತಾಂಶ ಪ್ರಕಟವಾಗಲಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಹ್ಲೋಟ್ ಮಾತ್ರವಲ್ಲದೆ, ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೂಡಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಅಕ್ಟೋಬರ್ 8 ರ ಸಂಜೆ 5 ಗಂಟೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

ಈ ನಡುವೆ ಪಕ್ಷವು ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನಿಯಮವನ್ನು ಅನುಸರಿಸುತ್ತದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು. ಹೀಗಾಗಿ ಅಶೋಕ್‌‌ ಗೆಹ್ಲೋಟ್ ಅವರು ತಮ್ಮ ಸ್ಥಾನವನ್ನು ತ್ಯಜಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು.

ತಾನು 40 ವರ್ಷಗಳಿಂದ ವಿಭಿನ್ನ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿದ್ದು, ಈಗ ಹೊಸ ಪೀಳಿಗೆಗೆ ಅವಕಾಶ ಸಿಗಬೇಕು ಎಂದು ಗೆಹ್ಲೋಟ್‌ ಅವರು ಭಾನುವಾರ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಒಬ್ಬ ವ್ಯಕ್ತಿ ಇನ್ನೇನು ಹೆಚ್ಚು ಪಡೆಯಬೇಕು?. ಹೊಸ ಪೀಳಿಗೆಗೆ ಅವಕಾಶ ಸಿಗಬೇಕು ಎಂಬುದು ನನ್ನ ಮನಸ್ಸಿನಲ್ಲಿದೆ. ದೇಶಕ್ಕೆ ನಾಯಕತ್ವ ನೀಡಲು ಎಲ್ಲರೂ ಒಗ್ಗೂಡಬೇಕು” ಎಂದು ಗೆಹ್ಲೋಟ್ ಜೈಸಲ್ಮೇರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅವಕಾಶ ನೀಡುವ ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

ಈ ನಡುವೆ ಭಾನುವಾರ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಗೋವಿಂದ್ ರಾಮ್ ಮೇಘವಾಲ್,“ಮುಖ್ಯಮಂತ್ರಿಯಾಗಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಗೆಹ್ಲೋಟ್ ಎರಡೂ ಪಾತ್ರಗಳನ್ನು ನಿರ್ವಹಿಸಬಹುದು. ಸಚಿನ್ ಪೈಲಟ್ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಸಹ ‘ಸೂಕ್ಷ್ಮ ವಿಷಯ’ವಾಗಿದೆ” ಎಂದು ಹೇಳಿದ್ದಾರೆ.

ಶಾಸಕರ ನಡುವೆ ಅಸಮಾಧಾನವಿದೆ ಎಂದು ಅವರು ಹೇಳಿದ್ದಾರೆ. “2020ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಮಗೆ ಸಹಾಯ ಮಾಡಿದವರಲ್ಲಿ ಪಕ್ಷೇತರರು ಇದ್ದರು. ಆದ್ದರಿಂದ ನಾವೆಲ್ಲರೂ ಕುಳಿತು ಚರ್ಚಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

2020ರ ಆಗಸ್ಟ್‌ನಲ್ಲಿ, ಸಚಿನ್‌ ಪೈಲಟ್ ಕಾಂಗ್ರೆಸ್ ವಿರುದ್ಧ ದಂಗೆ ಎದ್ದು ರಾಜಸ್ಥಾನ ಸರ್ಕಾರವನ್ನು ರಾಜಕೀಯ ಬಿಕ್ಕಟ್ಟಿಗೆ ತಳ್ಳಿದ್ದರು. ಆದರೆ ಸಚಿನ್‌ ಪೈಲಟ್‌ನ ಕಳವಳಗಳನ್ನು ಪರಿಹರಿಸಲು ಪಕ್ಷವು ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಮತ್ತು ಅಹ್ಮದ್ ಪಟೇಲ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಇದರ ನಂತರ ಗೊಂದಲವನ್ನು ಪರಿಹರಿಸಲಾಗಿತ್ತು.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕಿಯರು ಬಡಿಸಿದ್ದಕ್ಕೆ ಬಿಸಿಯೂಟ ಎಸೆದ ಸವರ್ಣೀಯ ಅಡುಗೆಯವನ ಬಂಧನ

ಈ ಮಧ್ಯೆ, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು, ಗೆಹ್ಲೋಟ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಮಾತುಕತೆ ನಡೆಯಲಿದೆ. 102 ಶಾಸಕರಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಇದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್‌ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...