HomeUncategorizedಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

ಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

- Advertisement -
- Advertisement -

ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು 2009 ರಿಂದ 2013 ರವರೆಗೆ ಚುನಾವಣಾ ಆಯೋಗದ ವಿಶೇಷ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅಶೋಕ್ ಅವರ ಕೆಲಸದ ಅವಧಿಯಲ್ಲಿ ಇತರರ ಮೇಲೆ ಪ್ರಭಾವ ಬೀರಿದ್ದರಾ..?, ತಮ್ಮ ಹುದ್ದೆಯನ್ನು ಬಳಸಿಕೊಂಡು ಬೇರೆ ಲಾಭ ಪಡೆಯಲು ಯತ್ನಿಸಿದ್ದರಾ..? ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಭಾರತ ಸರ್ಕಾರ, 11 ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಪತ್ರ ಬರೆದಿದೆ.

ಪ್ರಕರಣ ಹೊರಬರುತ್ತಿದ್ದಂತೆಯೇ ಅಶೋಕ್‌ ಲಾವಾಸರವರು ಕಳೆದ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತಾಡಿದ್ದಕ್ಕೆ ಈಗ ಶಿಕ್ಷೆ ಅನುಭವಿಸಬೇಕಾಗಿದೆ. ಮೋದಿ ಮತ್ತು ಶಾರನ್ನು ಎದುರಾಕಿಕೊಂಡ ಎಲ್ಲರಿಗೂ ಇದೇ ಗತಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಐಎಎಸ್ ಅಧಿಕಾರಿಯಾಗಿದ್ದ ಅಶೋಕ್ ಲಾವಾಸಾ, ಸೆಪ್ಟೆಂಬರ್ 2009 ರಿಂದ ಡಿಸೆಂಬರ್ 2013 ರವರೆಗೆ ಜೆಎಸ್ ಹೆಚ್ಚುವರಿ ಕಾರ್ಯದರ್ಶಿ / ವಿಶೇಷ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಕೆಲ ಕಂಪನಿಗಳು ಮತ್ತು ಸಹಾಯಕ ಕಂಪನಿಗಳಿಗೆ ಲಾಭವಾಗುವಂತೆ ಅನಗತ್ಯ ಪ್ರಭಾವ ಬೀರಲು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅಶೋಕ್ ಲಾವಾಸಾ ಬಗ್ಗೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವಂತೆ ಪಿ.ಎಸ್.ಯು ಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ತಿಳಿಸಿದೆ.

ಪಿ.ಎಸ್.ಯುನಲ್ಲಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಎನ್‌ಎಚ್‌ಪಿಸಿ ಲಿಮಿಟೆಡ್ ಅಥವಾ ಹಿಂದಿನ ರಾಷ್ಟ್ರೀಯ ಜಲವಿದ್ಯುತ್ ನಿಗಮ, ಆರ್‌ಇಸಿ ಲಿಮಿಟೆಡ್, ಗ್ರಾಮೀಣ ವಿದ್ಯುದ್ದೀಕರಣ ನಿಗಮ ಮತ್ತು ವಿದ್ಯುತ್ ಫೈನಾನ್ಸ್ ಕಾರ್ಪೊರೇಷನ್ ವಿಭಾಗಗಳು ಸೇರಿವೆ.

ಮುಖ್ಯವಾಗಿ ಮೋದಿ ಮತ್ತು ಅಮಿತ್‌ ಶಾರವರು ಲೋಕಸಭಾ ಚುನಾವಣೆಗೂ ಮೊದಲು ನಡೆದ ರ್‍ಯಾಲಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ದೂರುಗಳ ವಿಚಾರಣೆ ಸಂದರ್ಭದಲ್ಲಿ ಅಶೋಕ್‌ ಲಾವಾಸರವರು 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅಪರಾಧಿಗಳು ಎಂದು ಅಭಿಪ್ರಾಯಪಟ್ಟರೆ ಉಳಿದ ಇಬ್ಬರು ಚುನಾವಣಾಧಿಕಾರಿಗಳು ಮೋದಿ ಮತ್ತು ಅಮಿತ್‌ ಶಾ ಪರವಾಗಿ ವಾದಿಸಿ ಅವರಿಗೆ ಕ್ಲಿನ್‌ಚಿಟ್‌ ನೀಡಿದ್ದರು. ಇದರಿಂದ ಕುಪಿತಗೊಂಡ ಅಶೋಕ್‌ ಲಾವಾಸ ತೀರ್ಪಿನಲ್ಲಿ ನನ್ನ ಅಲ್ಪಸಂಖ್ಯಾತ ಅಭಿಪ್ರಾಯವನ್ನು ದಾಖಲಿಸಬೇಕೆಂದು ಒತ್ತಾಯಿಸಿ ಸಭೆಗಳಿಂದ ದೂರವುಳಿದಿದ್ದರು. ಇದು ಮೋದಿ ಮತ್ತು ಅಮಿತ್‌ ಶಾ ರವರಿಗೆ ಸಾಕಷ್ಟು ಮುಜುಗರ ತಂದಿತ್ತು.

ಆ ಸೇಡನ್ನು ತೀರಿಸಿಕೊಳ್ಳಲು ಈಗ ಹಳೆಯ ಕೇಸುಗಳಲ್ಲಿ ಅಶೋಕ್‌ ಲಾವಾಸ ರವರ ಮೇಲೆ ಮೋದಿ ಮತ್ತು ಅಮಿತ್‌ ಶಾ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲದೇ.

ಅಲ್ಲದೇ ಲಾವಾಸರವರ ಪತ್ನಿ ನಾವೆಲ್‌ ಸಿಂಗ್ಹಾಲ್‌ ಲಾವಾಸರವರು ವಿರುದ್ಧ ಐಟಿ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಆಕೆಯು ಹಲವಾರು ಕಂಪನಿಗಳ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಮರ್ಪಕವಾಗಿ ಐಟಿ ರಿರ್ಟನ್ಸ್‌ ಸಲ್ಲಿಸಿಲ್ಲ ಎಂದು ಆರೋಪಿಸಿದೆ.

ಜೊತೆಗೆ ಲಾವಾಸರವರ ಸಹೋದರಿ ಶಕುಂತಲಾ ಲಾವಾಸರವರ ಮೇಲೆಯೂ ಐಟಿ ನೋಟಿಸ್‌ ನೀಡಿದೆ. ಲಾವಾಸರವರ ಪುತ್ರ ಅಬಿರ್‌ ಲಾವಾಸರವರು ತೊಡಗಿಸಿಕೊಂಡಿರುವ ಬುಕ್ಸ್ ಕಂಪನಿಗಳ ಮೇಲೆಯೂ ಐಟಿ ಇಲಾಖೆಯ ಕೆಂಗಣ್ಣು ಬಿದ್ದಿದೆ. 2009-10 ಸಾಲಿನ ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡಲು ಮುಂದಾಗಿದೆ. ಆದರೆ ನಾವು ಹೆದರುವುದಿಲ್ಲ ಏಕೆಂದರೆ ಎಲ್ಲಾ ವ್ಯವಹಾರಗಳನ್ನು ಕಾನೂನಾತ್ಮಕವಾಗಿಯೇ ಮಾಡಿದ್ದೇವೆ ಎಂದು ಲಾವಾಸ ಕುಟುಂಬ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾನೂನಾತ್ಮಕವಾಗಿ ಅಥವಾ ನ್ಯಾಯಯುತವಾಗಿ ಕೆಲಸ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳಿಗೂ ಎಲ್ಲಾ ಸಕಾ೯ರಗಳೂ ಕೂಡ ಯಾವುದೇ ರೀತಿಯಲ್ಲಿ ಶಿಕ್ಷಿಸಲು ಹೊಂಚು ಹಾಕುತ್ತವೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...