Homeಮುಖಪುಟಪಾಕಿಸ್ತಾನದಿಂದ ಹಣ ಪಡೆದ ಆರೋಪ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ಗೆ ಅಶುತೋಷ್ ರಾಂಕಾ ಮಾನನಷ್ಟ...

ಪಾಕಿಸ್ತಾನದಿಂದ ಹಣ ಪಡೆದ ಆರೋಪ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ಗೆ ಅಶುತೋಷ್ ರಾಂಕಾ ಮಾನನಷ್ಟ ನೋಟಿಸ್, 3 ಕೋಟಿ ರೂ. ಪರಿಹಾರ ನೀಡಲು ಆಗ್ರಹ

- Advertisement -
- Advertisement -

ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಮಧ್ಯವರ್ತಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಾಯಕ ಅಶುತೋಷ್ ರಾಂಕಾ ಅವರು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಈ ಆರೋಪಗಳನ್ನು ಹಿಂಪಡೆದು ಬೇಷರತ್ ಸಾರ್ವಜನಿಕ ಕ್ಷಮೆಯಾಚಿಸಬೇಕು ಮತ್ತು 3 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ನೋಟಿಸ್‌ನಲ್ಲಿ ಆಗ್ರಹಿಸಿದ್ದಾರೆ.

ನವೆಂಬರ್ 3ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಜಿತೇಂದ್ರ ಸಿಂಗ್, ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರು ಅಮೆರಿಕದಿಂದ ಮತ್ತು ಅಶುತೋಷ್ ರಾಂಕಾ ಅವರು ಪಾಕಿಸ್ತಾನದಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ನಡೆಯುತ್ತಿರುವ ಅಭಿಯಾನಕ್ಕೆ ಪಾಕಿಸ್ತಾನದ ರಾಜಕಾರಣಿಗಳು ಸೇರಿದಂತೆ ಭಾರತ ವಿರೋಧಿ ಸಂಘಟನೆಗಳು ಮತ್ತು ವಿದೇಶಿ ಅನುದಾನಿತ ಗುಂಪುಗಳು ಹಣಕಾಸಿನ ನೆರವು ನೀಡುತ್ತಿವೆ ಎಂದು ದೂರಿದ್ದರು.

ಅಶುತೋಷ್ ರಾಂಕಾ ತಿರುಗೇಟು :

ಈ ಕುರಿತು ಶುಕ್ರವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಂಕಾ, ತಮ್ಮ ಪ್ರಾಮಾಣಿಕತೆ ಮತ್ತು ದೇಶಭಕ್ತಿಯನ್ನು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ತಾನು ಕಠಿಣ ಪರಿಶ್ರಮದಿಂದ ಕಾನ್ಪುರದ ಐಐಟಿ ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಪ್ರವೇಶ ಪಡೆದಿದ್ದಾಗಿ ತಿಳಿಸಿರುವ ಅವರು, ಲಂಡನ್‌ನ ಐಷಾರಾಮಿ ಜೀವನ ಹಾಗೂ ಮೆಕಿನ್ಸೆ ಸಂಸ್ಥೆಯ ಕೈತುಂಬಾ ಸಂಬಳದ ಕೆಲಸವನ್ನು ತೊರೆದು ದೇಶಕ್ಕಾಗಿ ಮರಳಿದ್ದಾಗಿ ಹೇಳಿದ್ದಾರೆ. ಮೆಕಿನ್ಸೆ, ಗಾವಿ ಸೇರಿದಂತೆ ವಿವಿಧ ಸಂಸ್ಥೆಗಳೊಂದಿಗಿನ ತಮ್ಮ ವೃತ್ತಿಪರ ವ್ಯವಹಾರಗಳು ಪಾರದರ್ಶಕವಾಗಿದ್ದು, ಭಾರತದ ತೆರಿಗೆ ಮತ್ತು ಲೆಕ್ಕಪತ್ರ ಕಾನೂನುಗಳಿಗೆ ಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಜೆಪಿ ಕಾನೂನು ಘಟಕವು ವಕೀಲ ಅಭಿಕ್ ಚಿಮ್ನಿ ಅವರ ಮೂಲಕ ಸಚಿವರಿಗೆ ನೋಟಿಸ್ ಜಾರಿ ಮಾಡಿದೆ. ಹಣ ನೀಡಿದ್ದಾರೆ ಎನ್ನಲಾದ ಪಾಕಿಸ್ತಾನಿ ರಾಜಕಾರಣಿಗಳ ಹೆಸರು, ಮೊತ್ತ, ದಿನಾಂಕ, ಬ್ಯಾಂಕ್ ವಹಿವಾಟು ಮತ್ತು ಪೂರಕ ದಾಖಲೆಗಳನ್ನು ಬಹಿರಂಗಪಡಿಸುವಂತೆ ನೋಟಿಸ್‌ನಲ್ಲಿ ಸವಾಲು ಹಾಕಲಾಗಿದೆ.

ಮಾನನಷ್ಟ ಪರಿಹಾರವಾಗಿ ಕೇಳಿರುವ 3 ಕೋಟಿ ರೂಪಾಯಿ ಮೊತ್ತವನ್ನು ಭಾರತದಲ್ಲಿ ಪ್ರಾಥಮಿಕ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ದತ್ತಿ ಸಂಸ್ಥೆಯೊಂದಕ್ಕೆ ದೇಣಿಗೆಯಾಗಿ ನೀಡುವುದಾಗಿ ರಾಂಕಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಜಿರಾದಲ್ಲಿ 19 ವರ್ಷದ ಜಶನ್‌ದೀಪ್ ಎಂಬ ಯುವಕನ ಸಾವಿನ ಪ್ರಕರಣ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಿದ್ದರಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು, ಶುಕ್ರವಾರ ಶೆರಾವಾಲಾ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ

ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಮುಂಬರುವ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ಬೆಂಬಲಿಸುವುದಾಗಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ...

ಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ತಂದೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು ಎಂಬ ಕಾರಣಕ್ಕೆ ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವು, ಅಂತಿಮವಾಗಿ ಎರಡು ತಿಂಗಳ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿಗೆ ಖರ್ಗೆ ಮನವಿ; ಡಿಎಂಕೆ, ಎಎಪಿ, ಬಿಜೆಡಿಗೂ ಆಹ್ವಾನ

ನವದೆಹಲಿ: ಮಹಿಳಾ ಮೀಸಲಾತಿ ಜಾರಿ ನೆಪದಲ್ಲಿ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮತ್ತೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಸೂಚನೆಗಳ ಬೆನ್ನಲ್ಲೇ, ಸರ್ಕಾರದ ನಡೆಗೆ ಸಂಘಟಿತ...

ನಿಗದಿತ ಮಿತಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ: ಕರ್ನಾಟಕ ಸರ್ಕಾರದಿಂದ ಇಂಡಿಯನ್ ಆಯಿಲ್‌ಗೆ ಕಾರಣ ಕೇಳಿ ನೋಟಿಸ್

ಬೆಂಗಳೂರು ಸಮೀಪದ ದೇವನಗೊಂದಿ ಟರ್ಮಿನಲ್‌ನಲ್ಲಿ ಪೆಟ್ರೋಲ್‌ಗೆ ನಿಗದಿತ ಶೇ. 20 ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದು ತಪಾಸಣೆಯ ವೇಳೆ ಪತ್ತೆಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೊರೇಷನ್...

ಅಸ್ಸಾಂನ ಲಖಿಂಪುರದಲ್ಲಿ ತೆರವು ಕಾರ್ಯಾಚರಣೆ ಬಳಿಕವೂ ನಿಲ್ಲದ ಸಂಕಷ್ಟ: ಸೂರು ಕಳೆದುಕೊಂಡು ಬಯಲಿನಲ್ಲಿ ಕಾಲಕಳೆಯುತ್ತಿರುವ 135 ಬಡ ಮುಸ್ಲಿಂ ಕುಟುಂಬಗಳು, ಧರ್ಮದ ಆಧಾರದ ತಾರತಮ್ಯದ ಗಂಭೀರ ಆರೋಪ!

ಲಖಿಂಪುರ (ಅಸ್ಸಾಂ): ಅಸ್ಸಾಂನ ಲಖಿಂಪುರ ಜಿಲ್ಲೆಯ ಕದಮ್ ಕಂದಾಯ ವೃತ್ತದ ವ್ಯಾಪ್ತಿಯ ಬೋಗಿನದಿ ಪ್ರದೇಶದಲ್ಲಿ ಜಿಲ್ಲಾಡಳಿತ ನಡೆಸಿದ ಬೃಹತ್ ತೆರವು ಕಾರ್ಯಾಚರಣೆಯ ಬೆನ್ನಲ್ಲೇ ಸುಮಾರು 135 ಬಡ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ....

ಪೌರಕಾರ್ಮಿಕರ ಸ್ವಂತ ಮನೆ ಕನಸಿಗೆ ಸರ್ಕಾರದ ಬಲ; ಮೈಸೂರಿನಲ್ಲಿ 158 ಕುಟುಂಬಗಳ ವಸತಿ ಸಮುಚ್ಚಯ ಉದ್ಘಾಟಿಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರಿಗೆ ಸ್ವಂತ ಮನೆಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಪೌರಕಾರ್ಮಿಕರ ಬದುಕಿನಲ್ಲಿ ಗೌರವ, ಸ್ವಾಭಿಮಾನ ಮತ್ತು ಭದ್ರತೆ ತರುವ...

ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬೆಂಬಲ ನೀಡಲು ನಿರ್ಧರಿಸಿದರೆ ಡಿಎಂಕೆ ತನ್ನ ‘ನಿಲುವು ಬದಲಾವಣೆ’ಗೆ ವಿವರಣೆ ನೀಡಬೇಕು: ಕಾರ್ತಿ ಚಿದಂಬರಂ

ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿದ್ದ ಡಿಎಂಕೆ, ಇದೀಗ ಅದನ್ನು ಬೆಂಬಲಿಸಲು ನಿರ್ಧರಿಸಿದರೆ ತನ್ನ ನಿಲುವು ಬದಲಾವಣೆಗೆ (ಯು-ಟರ್ನ್) ಕಾರಣವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಶುಕ್ರವಾರ...

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕನ ನೇಮಕ ರದ್ದು: 10 ದಿನದಲ್ಲಿ ಹೊಸ ನಿರ್ಧಾರಕ್ಕೆ ಹೈಕೋರ್ಟ್ ಸೂಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ (LoP) ರಿತಬ್ರತ ಬ್ಯಾನರ್ಜಿ ಅವರನ್ನು ನೇಮಿಸಿದ್ದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಕೃಷ್ಣ ರಾವ್ ಅವರ ಪೀಠವು ಈ ತೀರ್ಪು ನೀಡಿದ್ದು,...

‘ಒಂದು ನಿರ್ದಿಷ್ಟ ವರ್ಗಕ್ಕೆ ಮಣೆ’: ಉನ್ನತ ನ್ಯಾಯಾಂಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಕಡಿಮೆ ಪ್ರಾತಿನಿಧ್ಯಕ್ಕೆ ಮಾಜಿ ಸಿಜೆಐ ಗವಾಯಿ ಆಕ್ಷೇಪ

ನವದೆಹಲಿ: ದೇಶದ ಉನ್ನತ ನ್ಯಾಯಾಂಗದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರೆ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಭಾರತದ ಮಾಜಿ ಮುಖ್ಯ...