Homeಕರ್ನಾಟಕಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ...

ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

- Advertisement -
- Advertisement -

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ್ ಅವರ ಫೇಸ್‌ಬುಕ್ ಖಾತೆಯ ಮೂಲಕ ಗುಡ್‌ ಗವರ್ನೆನ್ಸ್‌ ಡೇ (ಉತ್ತಮ ಆಡಳಿತ ದಿನ) ಕಾರ್ಯಕ್ರಮದ ನೇರಪ್ರಸಾರವಾಗುತ್ತಿದ್ದರೆ, ಅತಿಥಿ ಉಪನ್ಯಾಸರು ಕಮೆಂಟ್ ಬಾಕ್ಸ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶನಿವಾರ ಅತ್ಯುತ್ತಮ ಆಡಳಿತ ದಿನವನ್ನು ಉನ್ನತ ಶಿಕ್ಷಣ ಇಲಾಖೆ, ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ನಡೆಸಲಾಗಿದೆ. ಅಶ್ವತ್‌ ನಾರಾಯಣ್ ಅವರು ತಮ್ಮ ಎಫ್‌ಬಿ ಖಾತೆಯಲ್ಲಿ ಕಾರ್ಯಕ್ರಮವನ್ನು ಲೈವ್ ಮಾಡಿದ್ದಾರೆ.

‘ಉತ್ತಮ ಆಡಳಿತ ದಿನ’ ಆಚರಣೆಯನ್ನು ಅಣಕಿಸಿದಂತೆ ಭಾಸವಾಗುವ ರೀತಿ ಕಮೆಂಟ್‌ಗಳು ದಾಖಲಾಗಿವೆ. ಅತಿಥಿ ಉಪನ್ಯಾಸಕರಿಗೆ ಆಗುತ್ತಿರುವ ಅನ್ಯಾಯದ ಕುರಿತು ಉನ್ನತ ಶಿಕ್ಷಣ ಸಚಿವರು ಹೆಚ್ಚಿನ ಗಮನ ಹರಿಸುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಕಮೆಂಟ್‌ಗಳಾಗಿವೆ.

ಮಹಾಲಕ್ಷ್ಮಿ ನಾಯ್ಡು ಎಂಬವರು ಕಮೆಂಟ್‌ ಮಾಡಿದ್ದು, “ಉತ್ತಮ ಆಡಳಿತವು ಮಾನವ ಹಕ್ಕುಗಳ ಸಾಕ್ಷಾತ್ಕಾರವನ್ನೂ ಒಳಗೊಂಡಿರುತ್ತದೆ. ದಯವಿಟ್ಟು ಅತಿಥಿ ಅಧ್ಯಾಪಕರಿಗೆ ನ್ಯಾಯವನ್ನು ನೀಡಿ. ಅದು ನಮ್ಮ ಮಾನವ ಹಕ್ಕು. ಉತ್ತಮ ಆಡಳಿತದ ಬಗ್ಗೆ ಅಟಲ್ ಜಿ ಅವರ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ. ಅತಿಥಿ ಉಪನ್ಯಾಸಕರನ್ನು ಖಾಯಂ ನೇಮಕಾತಿ ಮಾಡಿಕೊಂಡರೆ ಒತ್ತಡ ಕಡಿಮೆಯಾಗಲಿದೆ. ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಸಾಕಷ್ಟು ಹಣವನ್ನು ಉಳಿಸಿದ್ದಾರೆ. ಈಗಲಾದರೂ ನಮ್ಮ ಸೇವೆಗೆ ನ್ಯಾಯ ಸಿಗಬೇಕು” ಎಂದು ಆಗ್ರಹಿಸಿದ್ದಾರೆ.

“ನೀವು ಮಂತ್ರಿ ಸ್ಥಾನದಲ್ಲಿದ್ದೀರಿ. ನಮಗೆ ನ್ಯಾಯ ಒದಗಿಸಿಕೊಡಿ. ಅತಿಥಿ ಉಪನ್ಯಾಸಕರು ಬಹಳ ಕಷ್ಟದಲ್ಲಿದ್ದೇವೆ” ಎಂದು ಶಿವ ಅಮ್ಮು ಭಾರ್ಗವಿ ಎಂಬವರು ಕೋರಿದ್ದಾರೆ. “ದಯವಿಟ್ಟು ಸೂಕ್ತ ವೇತನವನ್ನು ನೀಡಿ ಅತಿಥಿ ಉಪನ್ಯಾಸಕರ ಕಷ್ಟಗಳನ್ನು ಬಗೆಹರಿಸಿ” ಎಂದು ಅಂಬರೀಶ್ ಗೌರಿ ಎಂಬವರು ಕಮೆಂಟ್ ಮಾಡಿದ್ದಾರೆ.

“ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕು. ನಮ್ಮನ್ನು ಖಾಯಂಗೊಳಿಸಬೇಕು. ಸಂಬಳವನ್ನು ಹೆಚ್ಚಿಸಬೇಕು” ಎಂದು ಮತ್ತೊಬ್ಬರು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ‘ನೀವು ಬಿಜೆಪಿ ಏಜೆಂಟಾ?’- ಕನ್ಹಯ್ಯ ಪ್ರಶ್ನೆಗಳಿಗೆ ಪತ್ರಕರ್ತ ತಬ್ಬಿಬ್ಬು; ಕ್ಷಮೆಯಾಚಿಸಿದ ವರದಿಗಾರ

ಅತಿಥಿ ಉಪನ್ಯಾಸಕರ ನಿರಂತರ ಹೋರಾಟ

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸಿದ್ದಾರೆ. ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ.

“ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ” ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

“ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ” ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಅತಿಥಿ ಉಪನ್ಯಾಸಕರ ಅಳಲು.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ.

ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎನ್ನುತ್ತಾರೆ ಉಪನ್ಯಾಸಕರು.


ಇದನ್ನೂ ಓದಿರಿ: ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. Sir please save the guest lectures life we are suffering a lot bcz of low salary and no job security and our family becoming helpless plz do the needful sir

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...