Homeಮುಖಪುಟಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

ಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

- Advertisement -
- Advertisement -

“ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯದಿಂದ ಯಾವುದೇ ವೈಯಕ್ತಿಕ ಹಣಕಾಸಿನ ನೆರವು ದೊರೆತಿಲ್ಲ. ಜೊತೆಗೆ ವೈಯಕ್ತಿಕ ತರಬೇತುದಾರರನ್ನು ನಿಯೋಜಿಸುವಂತೆ ಮಾಡಿದ್ದ ಮನವಿಯನ್ನೂ ತಿರಸ್ಕರಿಸಲಾಗಿತ್ತು” ಎಂದು ಖ್ಯಾತ ಬ್ಯಾಡ್ಮಿಂಟನ್ ಡಬಲ್ಸ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಪ್ಯಾರಿಸ್‌ಗೆ ತೆರಳಿದ ಭಾರತೀಯ ಅಥ್ಲೀಟ್‌ಗಳಿಗೆ ನೀಡಲಾದ ಹಣಕಾಸಿನ ನೆರವಿನ ಕುರಿತ ದಾಖಲೆಯನ್ನು ಬಿಡುಗಡೆ ಮಾಡಿದೆ.

ದಾಖಲೆಯ ಪ್ರಕಾರ, ಅಶ್ವಿನಿ ಅವರು ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ ಸ್ಕ್ರೀಂ (ಟಿಒಪಿಎಸ್) ಅಡಿಯಲ್ಲಿ ರೂ 4,50,000 ಮತ್ತು ತರಬೇತಿ ಮತ್ತು ಸ್ಪರ್ಧೆಗಾಗಿ (ಎಸಿಟಿಸಿ) ವಾರ್ಷಿಕ ಕ್ಯಾಲೆಂಡರ್ ಅಡಿಯಲ್ಲಿ ರೂ. 1,48,04,080 ಪಡೆದಿದ್ದಾರೆ. ಅದರಲ್ಲಿ ಆಟಕ್ಕೆ ಅಗತ್ಯವಿರುವ ಸಲಕರಣೆ, ಅಂತಾರಾಷ್ಟ್ರೀಯ ಸ್ಪರ್ಧೆ ಹಾಗೂ ಆಟಗಾರರ ಖರ್ಚು ಸೇರಿದೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವಿನಿ ಪೊನ್ನಪ್ಪ”ಈ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ನಮಗೆ ಇಷ್ಟೊಂದು ಹಣ ಕೊಟ್ಟಿರುವುದಾಗಿ ದೇಶಕ್ಕೆ ಹೇಳಿರುವುದು ಹಾಸ್ಯಾಸ್ಪದ. ನನಗೆ ಯಾವುದೇ ಹಣ ನೀಡಿಲ್ಲ. ರಾಷ್ಟ್ರೀಯ ಶಿಬಿರದ ಕುರಿತು ಮಾತನಾಡಲಾಗಿದೆ. ಆಗ ನೀಡಿದ 1.5 ಕೋಟಿ ರೂಪಾಯಿ ಎಲ್ಲಾ ಆಟಗಾರರ ಮೇಲೂ ಖರ್ಚು ಮಾಡಲಾಗಿತ್ತು” ಎಂದಿದ್ದಾರೆ.

“ನನಗೆ ನಿರ್ದಿಷ್ಟ ತರಬೇತುದಾರರು ಇರಲಿಲ್ಲ. ನನ್ನ ವೈಯಕ್ತಿಕ ತರಬೇತುದಾರರಿಗೆ ಸಂಬಂಧಿಸಿದಂತೆ, ನಾನು ಅವರಿಗೆ ಹಣ ಪಾವತಿಸಿದ್ದೇನೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ. ನವೆಂಬರ್ 2023ರ ವರೆಗೆ ನನ್ನದೇ ಖರ್ಚಿನಲ್ಲಿ ಆಡಿದ್ದೇನೆ. ನಾವು ಅರ್ಹತೆ ಪಡೆದ ಬಳಿಕವಷ್ಟೇ ಟಿಒಪಿಎಸ್‌ಗೆ ಸೇರಿಸಿಕೊಳ್ಳಲಾಗಿದೆ” ಎಂದು ಅಶ್ವಿನಿ ತಿಳಿಸಿದ್ದಾರೆ.

ಕರ್ನಾಟಕದ 34 ವರ್ಷದ ಅಶ್ವಿನಿ ಪೊನ್ನಪ್ಪ ಭಾರತದ ಪ್ರಮುಖ ಡಬಲ್ಸ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ, 2014 ರಲ್ಲಿ ಬೆಳ್ಳಿ ಮತ್ತು 2018 ರಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುವುದು ಅವರ ಸಾಧನೆಗಳಲ್ಲಿ ಸೇರಿದೆ.

ತನ್ನ ಕಾಮನ್‌ವೆಲ್ತ್ ಕ್ರೀಡಾಕೂಟದ ಯಶಸ್ಸಿನ ಜೊತೆಗೆ, ಅಶ್ವಿನಿ ತನ್ನ ಸಹವರ್ತಿ ಜ್ವಾಲಾ ಗುಟ್ಟಾ ಜೊತೆಯಲ್ಲಿ ಲಂಡನ್ ಮತ್ತು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಭಾರತವನ್ನು ಶ್ರೇಷ್ಠ ವೇದಿಕೆಯಲ್ಲಿ ಪ್ರತಿನಿಧಿಸಿದ್ದಾರೆ.

ಈ ವರ್ಷ ಮೂರನೇ ಬಾರಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಅಶ್ವಿನಿ, ಪ್ಯಾರಿಸ್‌ನಲ್ಲಿ ತನಿಶಾ ಕ್ರಾಸ್ಟೊ ಜೊತೆ ಕಣಕ್ಕೆ ಇಳಿದು, ಗುಂಪು ಹಂತದಲ್ಲೇ ನಿರ್ಗಮಿಸಿದ್ದರು.

ಪ್ಯಾರಿಸ್‌ನಲ್ಲಿ ನಾನು ಚೆನ್ನಾಗಿ ಆಡಿಲ್ಲ. ಅಲ್ಲಿ ಕೋಚ್ ಇಲ್ಲದಿದ್ದರೂ, ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಅಶ್ವಿನಿ ಹೇಳಿದ್ದಾರೆ.

ಇದನ್ನೂ ಓದಿ : ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...