Homeಮುಖಪುಟಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಉಭಯ ಕಕ್ಷಿದಾರರಿಗೆ ನೀಡಲು ಸಮ್ಮತಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಉಭಯ ಕಕ್ಷಿದಾರರಿಗೆ ನೀಡಲು ಸಮ್ಮತಿಸಿದ ನ್ಯಾಯಾಲಯ

- Advertisement -
- Advertisement -

ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಡೆಸಿದ ‘ಜ್ಞಾನವಾಪಿ ಮಸೀದಿ ಸಂಕೀರ್ಣ’ದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ಕಕ್ಷಿಗಳಿಗೆ ನೀಡಲು ಒಪ್ಪಿಗೆ ನೀಡಿದೆ. ಈ ಬಗ್ಗೆ ಸಂಬಂಧಪಟ್ಟವರು ಅಫಿಡವಿಟ್ ಸಲ್ಲಿಸಬೇಕಾಗಿದೆ.

ಡಿಸೆಂಬರ್ 18ರಂದು ಮುಚ್ಚಿದ ಲಕೋಟೆಯಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಕುರಿತದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಎಎಸ್‌ಐ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದಾದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ನ್ಯಾಯಾಲಯಕ್ಕೆ ಎಎಸ್‌ಐ ವರದಿ ಸಲ್ಲಿಸಿದ ನಂತರ, ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಎಎಸ್‌ಐ ವರದಿಯನ್ನು ಸಾರ್ವಜನಿಕಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವುದನ್ನು ಪ್ರಶ್ನಿಸಿದ್ದರು.

ಆದರೆ ಎಎಸ್‌ಐ ಜ್ಞಾನವಾಪಿ ಸಮೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದನ್ನು ಮುಂದೂಡುವಂತೆ ಕೋರಿತ್ತು. ಸಾರ್ವಜನಿಕರಿಗೆ ವರದಿಯ ಬಿಡುಗಡೆ ವದಂತಿಗಳು ಮತ್ತು ತಪ್ಪು ಮಾಹಿತಿಯನ್ನು ಉತ್ತೇಜಿಸುವ ಸಾಧ್ಯತೆ ಇದೆ. ಆದ್ದರಿಂದ ವರದಿಯನ್ನು ಬಹಿರಂಗಪಡಿಸುವಿಕೆಯನ್ನು ವಿಳಂಬಗೊಳಿಸುವಂತೆ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಧೀಶರನ್ನು ಒತ್ತಾಯಿಸಿತ್ತು.

ASI ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತ್ತು. 17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯ ಕೆಡವಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಮೀಕ್ಷೆಗೆ ಕೋರ್ಟ್‌ ASIಗೆ ಸೂಚಿಸಿತ್ತು.

ಅಲಹಾಬಾದ್ ಹೈಕೋರ್ಟ್, ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ನಂತರ ಮತ್ತು ಈ ಕ್ರಮವು ನ್ಯಾಯದ ಹಿತಾಸಕ್ತಿಯಲ್ಲಿ ಅಗತ್ಯ ಎಂದು ತೀರ್ಪು ನೀಡಿದ ನಂತರ ಸಮೀಕ್ಷೆಯು ಪ್ರಾರಂಭವಾಗಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ಜ್ಞಾನವಾಪಿ ಮಸೀದಿ ಸಮಿತಿಯು ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಎಎಸ್‌ಐ ಸಮೀಕ್ಷೆ ಕುರಿತ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ನಿರಾಕರಿಸಿತ್ತು.

ಮಸೀದಿಯನ್ನು ದೇವಾಲಯ ಕೆಡವಿ ನಿರ್ಮಿಸಲಾಗಿದೆಯೇ ಎಂದು ತಿಳಿಯಲು ಸಮೀಕ್ಷೆಯೊಂದು ಮಾರ್ಗವಾಗಿದೆ ಎಂದು ಅರ್ಜಿದಾರ ಮಹಿಳೆಯರು ವಾದಿಸಿದ್ದರು. ಕಳೆದ ಎಪ್ರಿಲ್‌ನಲ್ಲಿ ನ್ಯಾಯಾಲಯವು ಮಸೀದಿ ಆವರಣದ ವೀಡಿಯೋ ಸಮೀಕ್ಷೆಗೆ ಆದೇಶಿಸಿತ್ತು.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲಿ ಪ್ರಸ್ತುತ ಸ್ಥಿತಿಯನ್ನು ತಿಳಿಯಲು ಆಯೋಗವನ್ನು ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆಯನ್ನು ನಡೆಸಿ ಅದರ ವರದಿಯನ್ನು ಸಲ್ಲಿಸಲು ASIಗೆ ನಿರ್ದೇಶನ ನೀಡಿತ್ತು. ಆದರೆ ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು  ಅರ್ಜಿಯನ್ನು  ವಿರೋಧಿಸಿತ್ತು ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿತ್ತು.  ಪ್ರಕರಣವು ನಂತರ ಅಲಹಾಬಾದ್ ಹೈಕೋರ್ಟ್‌ಗೆ ತಲುಪಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...