Homeಸಿನಿಮಾಕ್ರೀಡೆಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು - ಭಾರತದ ಫೈನಲ್ ಕನಸು ಭಗ್ನ

ಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು – ಭಾರತದ ಫೈನಲ್ ಕನಸು ಭಗ್ನ

- Advertisement -
- Advertisement -

ಏಷ್ಯಾಕಪ್ ಟೂರ್ನಿಯಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತವು ಸೂಪರ್ 4 ಹಂತದಲ್ಲಿ ಸತತ ಎರಡು ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಬುಧವಾರ ರಾತ್ರಿ ನಡೆದ ಪಾಕಿಸ್ತಾನ-ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಪಾಕ್ ಜಯಗಳಿಸುವುದರೊಂದಿಗೆ ಭಾರತವು ಫೈನಲ್ ಪ್ರವೇಶಿಸಲು ಇದ್ದ ಕಡೆಯ ಅವಕಾಶವು ಮುಚ್ಚಿಹೋಗಿದೆ. ಹಾಗಾಗಿ ಭಾರತವು ಇನ್ನೊಂದು ಔಪಚಾರಿಕ ಪಂದ್ಯವನ್ನಷ್ಟೆ ಆಡಿ ಭಾರತಕ್ಕೆ ವಾಪಸ್ ಆಗಬೇಕಿದೆ.

ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಭಾರತ ಪಾಕ್ ಎದುರು 5 ವಿಕೆಟ್ ಗಳ ಸೋಲು ಕಂಡಿತ್ತು. ಎರಡನೇ ಪಂದ್ಯದಲ್ಲಿಯೂ ಸಹ ಶ್ರೀಲಂಕಾ ಎದುರು 6 ವಿಕೆಟ್‌ಗಳ ಸೋಲು ಕಂಡಿತು. ಈ ಎರಡು ಪಂದ್ಯಗಳಲ್ಲಿ ಭಾರತದ ವೇಗದ ಬೌಲರ್‌ಗಳ ಕಳಪೆ ಪ್ರದರ್ಶನ ತಂಡಕ್ಕೆ ಮುಳುವಾಯಿತು.

ಕಡೆಯ ಅವಕಾಶವಾಗಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡವು ಪಾಕಿಸ್ತಾನದ ಎದುರು ಗೆದ್ದಿದ್ದರೆ ಭಾರತಕ್ಕೆ ಫೈನಲ್ ತಲುಪುವ ಅವಕಾಶವಿತ್ತು. ಇಂದಿನ ಪಂದ್ಯದಲ್ಲಿ ಭಾರತವು ಆಫ್ಘಾನಿಸ್ತಾನ ತಂಡದ ಎದುರು ಗೆದ್ದು, ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕ್ ಎದುರು ಗೆದ್ದಿದ್ದರೆ ನೆಟ್ ರನ್ ರೇಟ್ ಆಧಾರದಲ್ಲಿ ಭಾರತ-ಪಾಕಿಸ್ತಾನ-ಆಫ್ಘಾನಿಸ್ತಾನ ತಂಡಗಳು ಫೈನಲ್‌ಗೆ ಪೈಪೋಟಿ ನಡೆಸಬಹುದಿತ್ತು. ಏಕೆಂದರೆ ಸೂಪರ್ 4 ಹಂತದಲ್ಲಿ ಶ್ರೀಲಂಕಾ ಮೂರಕ್ಕೆ ಮೂರು ಗೆದ್ದಂತೆ ಆಗುತ್ತಿತ್ತು. ಆದರೆ ಪಾಕಿಸ್ತಾನ ಗೆಲುವು ಸಾಧಿಸುವುದರೊಂದಿಗೆ ಶ್ರೀಲಂಕಾದೊಂದಿಗೆ ಫೈನಲ್‌ನಲ್ಲಿ ಕಾದಾಡಲಿದೆ. ಭಾರತ ಮತ್ತು ಆಫ್ಘಾನಿಸ್ತಾನ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಇಂದು ಸಂಜೆ ನಡೆಯುವ ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ತಂಡದ ಎದುರು ಕೊನೆಯ ಔಪಚಾರಿಕ ಪಂದ್ಯ ಆಡಲಿದೆ. ಇಂದಿನ ಗೆಲುವು ಇನ್ನ ಎರಡು ತಿಂಗಳಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಗೆ ಸ್ವಲ್ಪ ವಿಶ್ವಾಸ ಕೊಡಬಹುದಾಗಿದೆ. ಸೆಪ್ಟಂಬರ್ 11 ರಂದು ಫೈನಲ್ ಪಂದ್ಯವು ಶ್ರೀಲಂಕಾ-ಪಾಕಿಸ್ತಾನದ ನಡುವೆ ನಡೆಯಲಿದೆ.

ಇದನ್ನೂ ಓದಿ : ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...