Homeರಂಜನೆಕ್ರೀಡೆಏಷ್ಯನ್ ಗೇಮ್ಸ್: 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಚಿನ್ನ ಗೆದ್ದ ಭಾರತ

ಏಷ್ಯನ್ ಗೇಮ್ಸ್: 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಚಿನ್ನ ಗೆದ್ದ ಭಾರತ

- Advertisement -
- Advertisement -

ಚೀನಾದ ಹ್ಯಾಂಗ್‌ ಝೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದೆ. 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ ಕುದುರೆ ಸವಾರಿ (ಡೆಸ್ಸೇಜ್‌ ಟೀಮ್‌ ಇವೆಂಟ್) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ‌

2023 ರ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡವು ಇತಿಹಾಸವನ್ನು ನಿರ್ಮಿಸಿದ್ದು, ಕುದುರೆ ಸವಾರಿ ಈವೆಂಟ್‌ನಲ್ಲಿ, ತಂಡವು ಅಗ್ರಸ್ಥಾನಕ್ಕೇರಿ ಚಿನ್ನ ಪದಕವನ್ನು ಗೆದ್ದುಕೊಂಡಿದೆ. ಆ ಮೂಲಕ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ಕುದುರೆ ಸವಾರಿ ತಂಡ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಈ ಕ್ರೀಡೆಯಲ್ಲಿ 1982 ರ ಬಳಿಕ ಭಾರತಕ್ಕೆ ಸಿಕ್ಕ ಮೊದಲ ಚಿನ್ನದ ಪದಕ ಇದಾಗಿದೆ.

ಕುದುರೆ ಸವಾರಿ ಈವೆಂಟ್‌ನಲ್ಲಿ ಭಾರತ ತಂಡವು ಒಟ್ಟು 209.205 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾ 204.882 ರೊಂದಿಗೆ ಬೆಳ್ಳಿಯೊಂದಿಗೆ ಮತ್ತು ಹಾಂಗ್ ಕಾಂಗ್ ಚೀನಾ 204.852 ರೊಂದಿಗೆ 3ನೇ ಸ್ಥಾನದಲ್ಲಿ ಕಂಚಿನ ಪದಕ ಪಡೆದುಕೊಂಡಿದೆ. ಸುದೀಪ್ತಿ ಹಜೇಲಾ, ಹೃದಯ್ ವಿಪುಲ್ ಛೇಡಾ, ಅನುಷ್ ಗರ್ವಾಲಾ ಮತ್ತು ದಿವ್ಯಕೃತಿ ಸಿಂಗ್ ಅವರ ಭಾರತ ತಂಡವು ಕುದುರೆ ಸವಾರಿಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.

ಈ ಕುದರೆ ಸವಾರಿ ಸ್ಪರ್ಧೆಯಲ್ಲಿ ತಂಡದ ಒಟ್ಟಾರೆ ಸ್ಕೋರ್‌ಗೆ ಅಗ್ರ 3 ತಂಡಗಳ ಸ್ಕೋರ್ ಅನ್ನು ಮಾತ್ರ ಪರಿಗಣಿಸಲಾಗುತ್ತದೆ.

ಏಷ್ಯನ್ ಗೇಮ್ಸ್‌ನಲ್ಲಿ ಕುದುರೆ ಸವಾರಿಯಲ್ಲಿಯೇ ಭಾರತ ನಾಲ್ಕನೇ ಚಿನ್ನದ ಪದಕ ಗೆದ್ದಂತಾಯಿತು. ಕ್ರೀಡಾಕೂಟದಲ್ಲಿ ಒಟ್ಟಾರೆ 13ನೇ ಪದಕವಾಗಿದೆ. ಕುದುರೆ ಸವಾರಿಯಲ್ಲಿ ಭಾರತದ ಎಲ್ಲಾ 3 ಚಿನ್ನದ ಪದಕಗಳು 1982ರಲ್ಲಿ ದೆಹಲಿಯಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಬಂದಿದ್ದವು.

ಇದನ್ನೂ ಓದಿ: ಏಷ್ಯನ್ ಗೇಮ್ಸ್‌: ಭಾರತದ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

0
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು...