Homeಮುಖಪುಟಅಸ್ಸಾಂ: ಇದ್ದದ್ದು 90 ಮತಗಳು, ಚಲಾವಣೆಯಾಗಿದ್ದು 181, ಪ್ರಕರಣದಲ್ಲಿ 6 ಅಧಿಕಾರಿಗಳ ಅಮಾನತು

ಅಸ್ಸಾಂ: ಇದ್ದದ್ದು 90 ಮತಗಳು, ಚಲಾವಣೆಯಾಗಿದ್ದು 181, ಪ್ರಕರಣದಲ್ಲಿ 6 ಅಧಿಕಾರಿಗಳ ಅಮಾನತು

- Advertisement -
- Advertisement -

ಕೇವಲ 90 ನೋಂದಾಯಿತ ಮತದಾರರನ್ನು ಹೊಂದಿರುವ ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಮತಗಟ್ಟೆ ಒಂದರಲ್ಲಿ 181 ಮತಗಳನ್ನು ಚಲಾಯಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ನಂತರ ಚುನಾವಣಾ ಆಯೋಗ  ಮತಗಟ್ಟೆಯ 6 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಏಪ್ರಿಲ್ 1 ರಂದು ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ನಡೆಯಿತು. ಇಲ್ಲಿನ ಹಫ್ಲಾಂಗ್ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 107 (ಎ) ರಲ್ಲಿ ಈ ಘಟನೆ ನಡೆದಿದೆ. ಅಂದು ಶೇ 74ರಷ್ಟು ಮತದಾನವಾಗಿತ್ತು.  2016 ರಲ್ಲಿ ಬಿಜೆಪಿಯ ಬಿರ್ ಭದ್ರಾ ಹಗ್ಗರ್ ಇಲ್ಲಿಂದ ಗೆದ್ದಿದ್ದಾರೆ. ಮತದಾನದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಮುಖ್ಯ ಕೇಂದ್ರಕ್ಕೆ ಸಹಾಯಕ ಮತದಾನ ಕೇಂದ್ರವಾಗಿದ್ದ ಈ ಬೂತ್‌ಗೆ ಮರು-ಮತದಾನದ ಆದೇಶ ಹೊರಡಿಸಲು ಚುನಾವಣಾ ಆಯೋಗ ಯೋಚಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಧಿಕೃತ ಆದೇಶವನ್ನು ಇನ್ನೂ ಹೊರಡಿಸಬೇಕಿದೆ.

ಇದನ್ನೂ ಓದಿ: ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

“ಮುಖ್ಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಲು ಆಗದ ಮತದಾರರಿಗೆ ಸಹಾಯಕ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡಿದ್ದಾಗಿ ಮತದಾನದ ಕೇಂದ್ರದ ಅಧ್ಯಕ್ಷ ಮತ್ತು ಅಧಿಕಾರಿ ತಮ್ಮ ಹೇಳಿಕೆಗಳಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕರ್ತವ್ಯ ಲೋಪದ ಆರೋಪದಲ್ಲಿ ಸೀಖೋಸಿಯಮ್ ಲಾಂಗುಮ್ (ಸೆಕ್ಟರ್ ಆಫೀಸರ್), ಪ್ರಹ್ಲಾದ್ ಚ ರಾಯ್ (ಪ್ರೆಸಿಡಿಂಗ್ ಆಫೀಸರ್), ಪರಮೇಶ್ವರ ಚರಂಗ್ಸಾ (1 ನೇ ಮತಗಟ್ಟೆ ಅಧಿಕಾರಿ), ಸ್ವರಾಜ್ ಕಾಂತಿ ದಾಸ್ (2 ನೇ ಮತಗಟ್ಟೆ ಅಧಿಕಾರಿ) ಮತ್ತು ಲಾಲ್ಜಮ್ಲೊ ಥೀಕ್ (3 ನೇ ಮತಗಟ್ಟೆ ಅಧಿಕಾರಿ) ಅವರನ್ನು ಅಮಾನತುಗೊಳಿಸಲಾಗಿದೆ.

ಅಸ್ಸಾಂನಲ್ಲಿ ಮಾರ್ಚ್ 27 ರಂದು ಪ್ರಾರಂಭವಾದ ಮೂರು ಹಂತದ ವಿಧಾನಸಭಾ ಚುನಾವಣೆಯಲ್ಲಿ ಎರಡು ಹಂತಗಳು ಮಗಿದಿವೆ. ಮೂರನೇ ಮತ್ತು ಕೊನೆಯ ಹಂತದ ಮತದಾನ ಇಂದು (ಏಪ್ರಿಲ್ 6) ನಡೆಯುತ್ತಿದೆ.


ಇದನ್ನೂ ಓದಿ: ಕೇರಳದಲ್ಲಿ ಹಿಂದೂಗಳ ಬೆಂಬಲದಿಂದ BJP 10ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ: ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...