Homeಮುಖಪುಟಅಸ್ಸಾಂ ವಿಧಾನಸಭಾ ಚುನಾವಣೆ - ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು?

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಅಸ್ಸಾಂನ ಟಿನ್ಸುಕಿಯಾದ ಐಒಸಿ ಸಂಸ್ಕರಣಾಗಾರದಲ್ಲಿ ನೌಕರರೊಂದಿಗೆ ಸಂವಾದ ನಡೆಸಲಿದ್ದಾರೆ. ಅಲ್ಲಿ ಅವರು ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಒಂದು ಸಭೆ ಮಧ್ಯಾಹ್ನ 1 ಗಂಟೆಗೆ ಜೋರ್ಹತ್‌ನಲ್ಲಿ ನಡೆಯಲಿದ್ದು ಮತ್ತು ಇನ್ನೊಂದು ಗೋಹ್ಪುರದಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ.

ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಸಂಜೆ 4.45 ಕ್ಕೆ ಅಸ್ಸಾಂನ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: ರಾಜ್ಯದ ಥಿಯೇಟರ್‌ಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವೆಂಬ ಪ್ರಸ್ತಾಪವಿಲ್ಲ: ಸಿಎಂ

ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಮಾತನಾಡಿ, “ನಾವು ಅಸ್ಸಾಂನ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇವೆ, ಅದು ನಮ್ಮ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ ಮತ್ತು ನಮ್ಮ ಮೈತ್ರಿಪಕ್ಷಗಳು ಸಹ ಇದನ್ನು ಒಪ್ಪುತ್ತಾರೆ” ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿಗೆ ತರುದಿಲ್ಲ ಎಂಬ ಭರವಸೆಯು ಪ್ರಣಾಳಿಕೆಯಲ್ಲಿ ಇರಲಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇದಲ್ಲದೆ, ಚಹಾ ಕಾರ್ಮಿಕರಿಗೆ 365 ರೂ., 200 ಯೂನಿಟ್ ಉಚಿತ ವಿದ್ಯುತ್ ಮತ್ತು ಗೃಹಿಣಿಯರಿಗೆ 2000 ರೂ.ಗಳನ್ನು ಕೂಡಾ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ದಿಬ್ರುಗದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ “ಬಿಜೆಪಿಯು ಅಸ್ಸಾಂನ ಚಹಾ ಕಾರ್ಮಿಕರಿಗೆ 351ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ 167ರೂ.ಯನ್ನು ನೀಡಲಾಗುತ್ತಿದೆ. ನಾನು ನರೇಂದ್ರ ಮೋದಿಯಲ್ಲ. ನಾನು ಸುಳ್ಳು ಹೇಳುವುದಿಲ್ಲ. ನಾವು ನಿಮಗೆ 5 ಭರವಸೆಗಳನ್ನು ನೀಡುತ್ತಿದ್ದೇವೆ” ಎಂದು ಹೇಳಿದ್ದರು.

ಅಸ್ಸಾಂನಲ್ಲಿ 126 ಸ್ಥಾನಗಳಿಗೆ ವಿಧಾನಸಭಾ ಚುನಾವಣೆ ಮಾರ್ಚ್ 27 ರಿಂದ ಮೂರು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ಮೇ 2 ರಿಂದ ನಡೆಯಲಿದೆ.

ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...