Homeಮುಖಪುಟಅಸ್ಸಾಂ: ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರು

ಅಸ್ಸಾಂ: ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರು

- Advertisement -
- Advertisement -

ಕ್ರಿಶ್ಚಿಯನ್ನರು ಮಾತ್ರ ಕ್ರಿಸ್‌ಮಸ್ ಆಚರಿಸಬೇಕೆ ಹೊರತು ಹಿಂದೂಗಳು ಆಚರಿಸಬಾರದು ಎಂದು ಬಜರಂಗದಳ ಸದಸ್ಯರು ಚರ್ಚ್‌ಗೆ ನುಗ್ಗಿ, ದಾಂಧಲೆ ನಡೆಸಿ ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿರುವ ಅಹಿತಕರ ಘಟನೆ ಅಸ್ಸಾಂನ ಸಿಲ್ಚಾರ್‌ನಲ್ಲಿ ನಡೆದಿದೆ.

ನಾವು ಕ್ರಿಶ್ಚಿಯನ್ನರು ಕ್ರಿಸ್‌ಮಸ್ ಆಚರಿಸುವುದಕ್ಕೆ ವಿರೋಧಿಸುವುದಿಲ್ಲ. ಆದರೆ ಡಿಸೆಂಬರ್ 25 ಹಿಂದೂಗಳ ತುಳಸಿ ಹಬ್ಬ ಕೂಡ. ಆದರೆ ಹಿಂದೂಗಳು ಯಾರೂ ತುಳಸಿ ಹಬ್ಬ ಆಚರಿಸಿಲ್ಲ. ಇದು ನಮ್ಮ ಭಾವನೆಗಳಿಗೆ ಧಕ್ಕೆ ತಂದಿದೆ. ಹಿಂದೂ ಹುಡುಗ-ಹುಡುಗಿಯರು ಸಹ ಮೆರ್ರಿ ಕ್ರಿಸ್‌ಮಸ್ ಎಂದು ಹೇಳುತ್ತಾ ಹೊರಟರೆ ನಮ್ಮ ಧರ್ಮವನ್ನು ಉಳಿಸುವವರು ಯಾರು? ಇದು ನಮಗೆ ತುಂಬಾ ನೋವು ಮಾಡುತ್ತದೆ. ಹಾಗಾಗಿ ಹಿಂದೂಗಳು ಕ್ರಿಸ್‌ಮಸ್ ಆಚರಿಸುವುದನ್ನು ತಡೆಯುತ್ತಿದ್ದೇವೆ ಎಂದು ಯುವಕನೊಬ್ಬ ಹೇಳಿರುವುದು ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ.

ಚರ್ಚ್‌ನ ಬಾಗಿಲಿನಲ್ಲೇ ಜನರನ್ನು ತಡೆಯುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದದೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ. ಸ್ವಯಂ ಪ್ರೇರಿತ ದೂರು ದಾಖಲಿಸುವಷ್ಟು ಗಂಭೀರ ಪ್ರಕರಣವಲ್ಲ ಎಂದು ಪೊಲೀಸರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಸಹ ವಿಶ್ವ ಹಿಂದೂ ಪರಿಷತ್ ಮುಖಂಡನೊಬ್ಬ ಹಿಂದೂಗಳು ಕ್ರಿಸ್‌ಮಸ್ ಆಚರಿಸಲು ಚರ್ಚ್‌ಗೆ ತೆರಳಿದರೆ ಅವರ ಮೇಲೆ ಹಲ್ಲೆ ಮಾಡಲಾಗುವುದು ಎಂದು ಬೆದರಿಸಿದ್ದ.

ಇತ್ತೀಚೆಗೆ ಚರ್ಚ್‌ಗಳ ಮೇಲೆ ದಾಳಿ, ಶಾಲೆಗಳ ಮೇಲೆ ದಾಳಿ, ಕ್ರಿಸ್‌ಮಸ್‌ ಆಚರಣೆಗೆ ಬಲಪಂಥೀಯ ಶಕ್ತಿಗಳು ತಡೆಯೊಡ್ಡುವ ಕೆಲಸ ಆರಂಭಿಸಿದ್ದಾರೆ. ನಿನ್ನೆ ಬಲಪಂಥೀಯ ಗುಂಪು ಗುರ್ಗಾಂವ್‌ನ ಪಟೌಡಿ ಚರ್ಚ್ ಒಂದಕ್ಕೆ ನುಗ್ಗಿ ದಾಂಧಲೆ ನಡೆಸಿ, ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಈ ಕುರಿತು ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗುವುದನ್ನು ನೋಡಬಹುದು.

ಅದೇ ರೀತಿಯ ರಾಜ್ಯದ ಮಂಡ್ಯ ಜಿಲ್ಲೆಯ ಪಾಂಡವಪುರದ ನಿರ್ಮಲ ಇಂಗ್ಲಿಷ್ ಶಾಲೆಯಲ್ಲಿ ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...