Homeಮುಖಪುಟಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು BJP, RSSಗೆ ಬಿಡುವುದಿಲ್ಲ: ರಾಹುಲ್‌

- Advertisement -
- Advertisement -

ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ದೇಶಾದ್ಯಂತ ಮುಂದುವರೆತ್ತಿದ್ದರೂ ಸಹ ಬಿಜೆಪಿ “ಜನರ ಧ್ವನಿಯನ್ನು” ಕೇಳುತ್ತಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಸಿಎಎ ವಿರುದ್ಧದ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರು ಕಾನೂನನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರ್ಕಾರ ಜನರ ಮಾತು ಕೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸ್ಥಾಪನಾ ದಿನದ ಅಂಗವಾಗಿ ನಡೆದ ಸೇವ್ ಕಾನ್ಸ್ಟಿಟ್ಯೂಷನ್-ಸೇವ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ “ಬಿಜೆಪಿ ಎಲ್ಲಿಗೆ ಹೋದರೂ ಅದು ದ್ವೇಷವನ್ನು ಹರಡುತ್ತದೆ. ಅಸ್ಸಾಂನಲ್ಲಿ ಯುವಕರು ಪ್ರತಿಭಟಿಸುತ್ತಿದ್ದಾರೆ, ಇತರ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾನಿರತನ್ನು ಏಕೆ ಗುಂಡಿಕ್ಕಿ ಕೊಲ್ಲಬೇಕು? ಜನರ ಧ್ವನಿಯನ್ನು ಕೇಳಲು ಬಿಜೆಪಿ ಬಯಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈಶಾನ್ಯ ಭಾರತದ ಸಂಸ್ಕೃತಿ ಮತ್ತು ಇತಿಹಾಸವನ್ನು ನಿಗ್ರಹಿಸಬಹುದೆಂದು ಬಿಜೆಪಿ ಭಾವಿಸಿದೆ. ಆದರೆ ಅದು ನಿಮ್ಮ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳಲಿಲ್ಲ. “ಅಸ್ಸಾಂನ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಮೇಲೆ ದಾಳಿ ಮಾಡಲು ನಾವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಬಿಡುವುದಿಲ್ಲ. ಅಸ್ಸಾಂ ಅನ್ನು ನಾಗ್ಪುರದಿಂದ ಆಳಲು ಸಾಧ್ಯವಿಲ್ಲ. ಅಸ್ಸಾಂ ಅನ್ನು ಅದರ ಜನರು ಮಾತ್ರ ಮುನ್ನಡೆಸುತ್ತಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂ ಒಪ್ಪಂದದ ಮೂಲ ಉದ್ದೇಶ ಶಾಂತಿ ಸ್ಥಾಪಿಸುವುದು. ಅಂತಹ ಒಪ್ಪಂದವನ್ನು ಛಿದ್ರಗೊಳಿಸಲು ಬಿಡುವುದಿಲ್ಲ. ದ್ವೇಷ ಮತ್ತು ಹಿಂಸೆಯಿಂದ ಅಸ್ಸಾಂ ಎಂದಿಗೂ ಪ್ರಗತಿ ಸಾಧಿಸುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಅಸ್ಸಾಂ ಸಂಸ್ಕೃತಿ, ಭಾಷೆ, ಅಸ್ಮಿತೆ ಮತ್ತು ಇತಿಹಾಸದ ಮೇಲೆ ದಾಳಿ ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ. ಅದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ರಾಹುಲ್‌ ಸಲಹೆ ನೀಡಿದರು.
ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಜನ ಶಾಂತಿಯಿಂದ ಹೇಳಿದರೆ ಕೇಳುತ್ತಾರೆ. ಹಾಗಾಗಿ ಹಿಂಸೆ ಬೇಕಿಲ್ಲ. ಗುಂಡಿನ ದಾಳಿಯೂ ಅಗತ್ಯವಿಲ್ಲ. ಸಾರ್ವಜನಿಕರಿಗೆ ಪ್ರೀತಿ ಬೇಕು. ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಡಿಸೆಂಬರ್ 12ರಂದು ಎನ್ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ 17 ವರ್ಷದ ಬಾಲಕ ಶಾಮ್ ಸ್ಟ್ಯಾಪರ್ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ದೇಶದ ಆರ್ಥಿಕತೆಯ ಬಗ್ಗೆ ಗಮನ ಸೆಳೆದರು. ನೋಟು ಅಮಾನ್ಯೀಕರಣ, ಜಿಎಸ್ ಟಿ ಜಾರಿ ಮೂಲಕ ಭಾರತದ ಆರ್ಥವ್ಯವಸ್ಥೆಯನ್ನು ಪ್ರಧಾನಿ ಮೋದಿ ನಾಶಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್ಥಿಕತೆ ಭಾರತದ ಶಕ್ತಿ ಎಂದು ಇಡೀ ವಿಶ್ವವೇ ಸಾರಿಹೇಳುತ್ತಿದೆ. ನೋಟು ಅಮಾನ್ಯೀಕರಣ, ಅನುಷ್ಠಾನದ ಮೂಲಕ ಭಾರತಮಾತೆಯ ಶಕ್ತಿಯನ್ನೇ ಹಾಳುಗೆಡವಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೆಲಸ ಭಾರತದ ಜನರನ್ನು ವಿಭಜಿಸುವುದು ಮತ್ತು ದ್ವೇಷವನ್ನು ಹರಡುವುದೇ ಆಗಿದೆ ಎಂದು ಪ್ರಧಾನಿ ವಿರುದ್ಧ ಟೀಕಿಸಿದರು.
ಹೊಸ ಪೌರತ್ವ ಕಾಯ್ದೆಯಿಂದ ಜನರು ಸಂಕಟ ಎದುರಿಸಬೇಕಾಗುತ್ತದೆ. ಎನ್ ಪಿಆರ್. ಎನ್.ಆರ್.ಸಿ ನೋಟು ಅಮಾನ್ಯೀಕರಣದ ಎರಡನೇ ಭಾಗವಾಗಿದೆ. ಬಡವರು ಬಾರತದವರಾಗಿರಬಹುದು ಅಥವಾ ಇಲ್ಲದೇ ಇರಬಹುದು. ಅವರೆಲ್ಲರೂ ದಾಖಲೆಗಳನ್ನು ತೋರಿಸಲೇಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ 15 ಮಂದಿ ಸ್ನೇಹಿತರು ಯಾವುದೇ ದಾಖಲೆಗಳನ್ನು ತೋರಿಸಬೇಕಾಗಿಲ್ಲ. ಯಾಕೆಂದರೆ ಹಣವೆಲ್ಲ 15 ಜನರ ಜೇಬು ಸೇರುತ್ತಿದೆ ಎಂದು ಲೇವಡಿ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...