Homeಮುಖಪುಟಅಸ್ಸಾಂ | ಅಳಿವಿನಂಚಿನಲ್ಲಿರುವ 'ಹೂಲಾಕ್ ಗಿಬ್ಬನ್' ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

- Advertisement -
- Advertisement -

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ.

ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ ಯೋಜನೆಗೆ ನಿರಾಪೇಕ್ಷಣ ನೀಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಮಾನವ ವಾಸಸ್ಥಳದ ಪ್ರದೇಶಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳಂತಹ ಸಂರಕ್ಷಿತ ಪ್ರದೇಶಗಳ ನಡುವಿನ ಬಫರ್ ವಲಯಗಳು ಅಥವಾ “ಶಾಕ್ ಅಬ್ಸರ್‌ವರ್ಸ್‌’ಗಳನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪರಿಸರ-ಸೂಕ್ಷ್ಮ ವಲಯಗಳು ಎಂದು ಘೋಷಿಸಲಾಗಿದೆ.

ಹೊಲ್ಲೊಂಗಪರ್ ಅಭಯಾರಣ್ಯವು 21 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, ಅದರ ಪರಿಸರ ಸೂಕ್ಷ್ಮ ವಲಯವು 264.9 ಚದರ ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸಿದೆ. ಡಿಸೋಯ್ ಕಣಿವೆಯ ಮೀಸಲು ಅರಣ್ಯ ಮತ್ತು ನಾಗಾಲ್ಯಾಂಡ್‌ನ ಅರಣ್ಯ ಪ್ರದೇಶಗಳೊಂದಿಗೆ ಇದು ಸಂಪರ್ಕ ಹೊಂದಿದೆ. ಈ ಪ್ರದೇಶವು ಏಳು ಪ್ರೈಮೇಟ್ ಪ್ರಭೇದಗಳಿಗೆ ನೆಲೆಯಾಗಿದೆ, ಇದರಲ್ಲಿ ಭಾರತದ ಏಕೈಕ ಮಂಗವಾದ ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಸೇರಿದೆ.

ಹೊಲ್ಲೊಂಗಪರ್ ಅಭಯಾರಣ್ಯ ಹೊರಗೆ ತೈಲ ಮತ್ತು ಅನಿಲ ಪರಿಶೋಧನೆಗೆ 4.5 ಹೆಕ್ಟೇರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 1.4 ಹೆಕ್ಟೇರ್ ಬಾವಿ ಮತ್ತು 3 ಹೆಕ್ಟೇರ್ ಪ್ರವೇಶ ರಸ್ತೆ ಸೇರಿವೆ. ಇವು ಸಂರಕ್ಷಿತ ಪ್ರದೇಶದಿಂದ 13 ಕಿ.ಮೀ ದೂರದಲ್ಲಿವೆ.

ನವೆಂಬರ್ 15ರಂದು ಸ್ಥಳ ಪರಿಶೀಲನೆ ನಡೆಸಿದ ನಂತರ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಅಸ್ಸಾಂನ ಅರಣ್ಯ ಇಲಾಖೆಯ ಅಧಿಕಾರಿಗಳು ಹೀಗೆ ತೀರ್ಮಾನಿಸಿದರು : “ಈ ಅಭಯಾರಣ್ಯವು ಹೂಲಾಕ್ ಗಿಬ್ಬನ್‌ನ ಪ್ರಮುಖ ಆವಾಸಸ್ಥಾನವಾಗಿದೆ. ಪರಿಶೋಧನಾ ಕೊರೆಯುವಿಕೆಯು ಹೆಚ್ಚಿನ ಹಾನಿಯನ್ನುಂಟುಮಾಡದಿರಬಹುದು, ಆದರೆ ವಾಣಿಜ್ಯ ಕೊರೆಯುವಿಕೆಯನ್ನು ಅನುಮತಿಸಲಾಗುವುದಿಲ್ಲ.”

ಈ ಯೋಜನೆಯು ಕಟ್ಟುನಿಟ್ಟಾಗಿ ಪರಿಶೋಧನಾತ್ಮಕವಾಗಿದ್ದು, ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ವೇದಾಂತ ಗ್ರೂಪ್ ಅಧಿಕಾರಿಗಳಿಗೆ ಭರವಸೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಹೊರಗೆ ಯಾವುದೇ ನಿಕ್ಷೇಪಗಳು ಪತ್ತೆಯಾದರೆ, ಮಾತ್ರ ಹೊರತೆಗೆಯುವಿಕೆಯನ್ನು ಕೈಗೊಳ್ಳಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಅಭಯಾರಣ್ಯವು ಮಾನವ ಚಟುವಟಿಕೆಗಳಿಂದ ಹೆಚ್ಚುವರಿ ಒತ್ತಡಗಳನ್ನು ಎದುರಿಸುತ್ತಿದೆ, ಅದರಲ್ಲಿ ಅದರ ಮೂಲಕ ಹಾದುಹೋಗುವ ರೈಲು ಮಾರ್ಗವೂ ಸೇರಿದೆ. ಈ ಮಾರ್ಗವನ್ನು ವಿದ್ಯುದ್ದೀಕರಿಸುವ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಹ ಶಿಫಾರಸು ಮಾಡಿದೆ.

‘ಹೊಸ ಕೃಷಿ ಮಾರುಕಟ್ಟೆ ನೀತಿ’ಗೆ ವಿರೋಧ; ಕರಡಿನ ಪ್ರತಿ ಸುಟ್ಟು ಪಂಜಾಬ್ ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...