Homeಮುಖಪುಟಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

- Advertisement -
- Advertisement -

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.

“ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನನಷ್ಟಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಪರಿಹಾರ ಕೋರಿ ನಾನು ಇಂದು ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಆರೋಪಗಳನ್ನು ವಿವರಿಸದೆ ಸಿಎಂ ಶರ್ಮಾ ಮಂಗಳವಾರ (ಫೆ.10) ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಮತ್ತೊಂದೆಡೆ, ಅಸ್ಸಾಂ ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕುವಂತೆ ತೋರಿಸುವ ವಿಡಿಯೋ ಹಂಚಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಸಿಬಮೋನಿ ಬೋರಾ ಮತ್ತು ದಿಗಂತ ಬರ್ಮನ್ ಅವರು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರಿಗೆ ಗುಂಡಿಕ್ಕುವಂತೆ ತೋರಿಸುವ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ವಿಡಿಯೋವೊಂದನ್ನು 2026ರ ಫೆಬ್ರವರಿ 7ರಂದು ಅಸ್ಸಾಂ ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಈ ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ರೈಫಲ್ ಹಿಡಿದು “ಪಾಯಿಂಟ್ ಬ್ಲಾಂಕ್ ಶೂಟ್” (ಅತಿ ಸಮೀಪದಿಂದ ಗುಂಡು ಹಾರಿಸುವುದು) ಎಂಬ ಶೀರ್ಷಿಕೆಯೊಂದಿಗೆ ಮುಸ್ಲಿಮರನ್ನು ಸಾಂಕೇತಿಕವಾಗಿ ಗುರಿ ಮಾಡುತ್ತಿರುವುದನ್ನು ತೋರಿಸಲಾಗಿತ್ತು” ಎಂಬುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಂದುವರಿದು, “ಆ ವಿಡಿಯೋದಲ್ಲಿ ‘ವಿದೇಶಿ ಮುಕ್ತ ಅಸ್ಸಾಂ’ ‘ಯಾವುದೇ ಕರುಣೆ ಇಲ್ಲ’ ‘ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?’ ಮತ್ತು ‘ಬಾಂಗ್ಲಾದೇಶಿಯರಿಗೆ ಕ್ಷಮೆಯಿಲ್ಲ’ ಎಂಬ ಬರಹಗಳನ್ನು ಬಳಸಲಾಗಿತ್ತು. ಈ ಬರಹಗಳು ಅಸ್ಸಾಂನ ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿತ್ತು” ಎಂದು ಹೇಳಲಾಗಿದೆ ಎಂದು ವರದಿ ವಿವರಿಸಿದೆ.

ದೂರಿನಲ್ಲಿ ಕಾಂಗ್ರೆಸ್ ನಾಯಕರು, “ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಹಂಚಲಾದ ವಿಡಿಯೋ ಅತ್ಯಂತ ಪ್ರಚೋದನಾಕಾರಿ ಮತ್ತು ಕೋಮು ದ್ವೇಷದಿಂದ ಕೂಡಿತ್ತು. ಇದು ಸಮಾಜದ ಜನರ ನಡುವೆ ಖಂಡಿತವಾಗಿಯೂ ಅಶಾಂತಿಯನ್ನು ಉಂಟುಮಾಡುತ್ತದೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುತ್ತದೆ. ಆದ್ದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಮತ್ತು ಈ ಬಗ್ಗೆ ತಕ್ಷಣವೇ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...