Homeಮುಖಪುಟರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

‘ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ರಾಹುಲ್ ಗಾಂಧಿ ಅವರನ್ನು ಏಕೆ ಆಹ್ವಾನಿಸಲಿಲ್ಲ’ ಎಂದು ಪತ್ರಕರ್ತರೊಬ್ಬರು ಕೇಳಿದಾಗ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾವಣನಿಗೆ ಹೋಲಿಸಿ ಉದ್ಧಟತನ ತೋರಿದ್ದಾರೆ.

‘ನೀವು ರಾವಣನ ಬಗ್ಗೆ ಏಕೆ ಮಾತನಾಡುತ್ತಿದ್ದೀರಿ? ಕನಿಷ್ಠ ಇವತ್ತಾದರೂ ರಾಮನ ಬಗ್ಗೆ ಮಾತನಾಡುತ್ತೀರಾ? 500 ವರ್ಷಗಳ ನಂತರ ರಾಮನ ಬಗ್ಗೆ ಮಾತನಾಡಲು ಇಂದು ಒಳ್ಳೆಯ ದಿನ, ಇಂದು ನಾವು ರಾವಣನ ಬಗ್ಗೆ ಮಾತನಾಡಬಾರದು’ ಎಂದು ಹೇಳಿಕೆ ನೀಡಿದ್ದಾರೆ.

ರಾಮಮಂದಿರ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಗಾಂಧಿ ಅವರನ್ನು ಆಹ್ವಾನಿಸಿರಲಿಲ್ಲ. ಪಕ್ಷದ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ತಲುಪಿತ್ತು. ಆದರೆ, ಅವರೆಲ್ಲರೂ ಚುನಾವಣಾ ವರ್ಷದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗುತ್ತಿದೆ ಆಹ್ವಾನವನ್ನು ತಿರಸ್ಕರಿಸಿದ್ದರು.

ದೇವಸ್ಥಾನ ಉದ್ಘಾಟನೆಗೂ ಮುನ್ನ ರಾಹುಲ್ ಗಾಂಧಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, ಇದನ್ನು ನರೇಂದ್ರ ಮೋದಿ ಕಾರ್ಯಕ್ರಮ ಎಂದು ಬಣ್ಣಿಸಿದ್ದಾರೆ. ‘ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಜನವರಿ 22ರ ಕಾರ್ಯವನ್ನು ಸಂಪೂರ್ಣವಾಗಿ ರಾಜಕೀಯಗೊಳಿಸಿದೆ. ಇದನ್ನು ನರೇಂದ್ರ ಮೋದಿ ಕಾರ್ಯವನ್ನಾಗಿ ಮಾಡಲಾಗಿದೆ. ಇದು ಆರ್‌ಎಸ್ಎಸ್-ಬಿಜೆಪಿ ಕಾರ್ಯವಾಗಿ ಮಾರ್ಪಟ್ಟಿದೆ’ ಎಂದು ಅವರು ಹೇಳಿದರು.

‘ಭಾರತದ ಪ್ರಧಾನಿ ಮತ್ತು ಆರ್‌ಎಸ್‌ಎಸ್‌ ಸುತ್ತ ವಿನ್ಯಾಸಗೊಳಿಸಲಾದ ರಾಜಕೀಯ ಕಾರ್ಯಕ್ರಮಕ್ಕೆ ಹೋಗುವುದು ನಮಗೆ ಕಷ್ಟ. ಆದರೂ, ನಮ್ಮ ಮೈತ್ರಿ ಪಕ್ಷಗಳು ಮತ್ತು ನಮ್ಮ ಪಕ್ಷದವರು ರಾಮ ಮಂದಿರಕ್ಕೆ ಭೇಟಿ ನೀಡಲು ಬಯಸುತ್ತಾರೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ. ಜನವರಿ 22 ರಂದು ನಮಗೆ (ದೇವಾಲಯಕ್ಕೆ) ಭೇಟಿ ನೀಡುವುದು ಕಷ್ಟ. ಇದು ಪ್ರಧಾನಿಯ ಕಾರ್ಯಕ್ರಮ ಮತ್ತು ಆರ್‌ಎಸ್ಎಸ್ ಕಾರ್ಯಕ್ರಮ; ನಾವು ಅದರಲ್ಲಿ ಭಾಗವಹಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದರು.

ಇದನ್ನೂ ಓದಿ; ‘ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ..’: ನಟ ಕಿಶೋರ್ ಕುಮಾರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...