Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...