Homeಮುಖಪುಟಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯಾಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಕೆಗಳ ವಿರುದ್ದ ದೂರು ದಾಖಲಿಸಿದೆ.

- Advertisement -
- Advertisement -

ಮಾರ್ಚ್ 27 ರಂದು ಪಂಚರಾಜ್ಯಗಳ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಅಂದು ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎರಡನೇ ಮತ್ತು ಮೂರನೇ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರನ್ನು ಮೋಸಗೊಳಿಸಲು ಮಾಡಲಾದ ಪೂರ್ವ ಯೋಜಿತ ಪಿತೂರಿಯಾಗಿದೆ ಇದು. ಸಿಎಂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಾಧ್ಯಕ್ಷ ಮತ್ತು ಪಕ್ಷದ ಇತರ ಸದಸ್ಯರು ಉದ್ದೇಶಪೂರ್ವಕವಾಗಿ ಉತ್ತರ ಅಸ್ಸಾಂನ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಮೂಲಕ ವಿವಿಧ ಪತ್ರಿಕೆಗಳ ಮುಖ ಪುಟಗಳಲ್ಲಿ ಜಾಹೀರಾತುಗಳನ್ನು ಸುದ್ದಿಯ ರೀತಿಯಲ್ಲಿ ಬಿಡುಗಡೆ ಮಾಡಿದ್ದಾರೆ” ಎಂದು ಬೋರಾ ಹೇಳಿದ್ದಾರೆ.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಇದಲ್ಲದೆ, ಅಸ್ಸಾಂಗೆ ನಿರ್ದಿಷ್ಟವಾದ ಇಸಿಐನ ಸೂಚನೆಗಳು ಇದ್ದು, ಮಾರ್ಚ್ 27 ರಿಂದ ಏಪ್ರಿಲ್ 29 ರ ವರೆಗೆ ಮತದಾನ ಫಲಿತಾಂಶಗಳಿಗೆ ಸಂಬಂಧಿಸಿದ ಯಾವುದೇ ರೀತಿಯ ಮುನ್ಸೂಚನೆಯನ್ನು ಪ್ರಸಾರ ಮಾಡುವುದನ್ನು ನಿಷೇಧಿಸಿವೆ ಎಂದು ಬೋರಾ ಹೇಳಿದ್ದಾರೆ.

“ಪ್ರಸಕ್ತ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ತಮ್ಮ ಪರವಾಗಿದೆ ಎಂದು ತಪ್ಪಾಗಿ ಊಹಿಸುವ ದೊಡ್ಡ ಪ್ರಮಾಣದ ಜಾಹೀರಾತುಗಳನ್ನು ಬಿಜೆಪಿ ಪ್ರಕಟಿಸುವುದರಿಂದ ಇದು ಈ ಸೂಚನೆಗಳ ನೇರ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಪತ್ರಿಕೆಗಳು ಸೇರಿದಂತೆ ದೂರಿನಲ್ಲಿ ಹೆಸರಿಸಲಾದವರ ವಿರುದ್ಧ “ತ್ವರಿತ ಮತ್ತು ಅಗತ್ಯ ಕ್ರಮ” ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...