Homeಮುಖಪುಟಅಸ್ಸಾಂ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೇರಿದರೆ ಮಹಿಳೆಯರಿಗೆ 50% ಮೀಸಲಾತಿ

ಅಸ್ಸಾಂ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೇರಿದರೆ ಮಹಿಳೆಯರಿಗೆ 50% ಮೀಸಲಾತಿ

- Advertisement -
- Advertisement -

ಅಸ್ಸಾಂ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಈಗಾಗಲೆ ಮತಬೇಟೆ ಪ್ರಾರಂಭಿಸಿದ್ದು, ಅಸ್ಸಾಂನಲ್ಲಿ ಪ್ರತಿಪಕ್ಷವಾಗಿರುವ ‘ಮಹಾಜೋತ್’ ಅಥವಾ ಮಹಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ, ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50% ದಷ್ಟು ಮೀಸಲಾತಿ ನೀಡುತ್ತದೆ ಎಂದು ಕಾಂಗ್ರೆಸ್‌ ಘೋಷಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ದೇವ್, ಕಾಂಗ್ರೆಸ್ ನೇತೃತ್ವದ ಮೈತ್ರಿ ಕೂಟವು ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಯುವಜನರ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

“ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಯು ಸರ್ಕಾರ ರಚಿಸಿದರೆ ನಾವು ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೊಳಿಸುತ್ತೇವೆ. ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಕೈಗೆತ್ತಿಕೊಳ್ಳಲಿರುವ ಕೆಲಸಗಳಲ್ಲಿ ಇದೂ ಒಂದು” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಮಹಾ ಮೈತ್ರಿಕೂಟವು ಹೊಣೆಗಾರಿಕೆ ಮತ್ತು ಉದ್ಯೋಗಗಳ ಖಾತರಿಯನ್ನು ಜನರಿಗೆ ನೀಡಲಿದೆ ಎಂದು  ಸುಷ್ಮಿತಾ ಪ್ರತಿಪಾದಿಸಿದ್ದಾರೆ.

“ಅಸ್ಸಾಂನ ಯುವಜನರು ಮತ್ತು ಮಹಿಳೆಯರು ದಾನವನ್ನು ಬಯಸುವುದಿಲ್ಲ. ಅವರು ಉದ್ಯೋಗಾವಕಾಶಗಳನ್ನು ಬಯಸುತ್ತಾರೆ. ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಬಯಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನಗಣತಿ, ಎನ್‌ಪಿಆರ್ ಫೀಲ್ಡ್ ಟ್ರಯಲ್ಸ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...