Homeಮುಖಪುಟಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ 'ಹಲವು ಪಾಸ್‌ಪೋರ್ಟ್‌' ಹೊಂದಿರುವ ಆರೋಪ : ಪವನ್ ಖೇರಾ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.

ರಿನಿಕಿ ಭುಯಾನ್ ಶರ್ಮಾ ಅವರು ಭಾರತದ ಜೊತೆಗೆ ಯುಎಇ, ಆಂಟಿಗುವಾ- ಬರ್ಬುಡಾ ಮತ್ತು ಈಜಿಪ್ಟ್ ದೇಶಗಳ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ. ಹಿಮಂತ ಬಿಸ್ವಾ ಶರ್ಮಾ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪತ್ನಿಯ ಹೆಸರಿನಲ್ಲಿ ದುಬೈನಲ್ಲಿರುವ ಆಸ್ತಿಗಳು ಮತ್ತು ಅಮೆರಿಕದ ವ್ಯೋಮಿಂಗ್‌ನಲ್ಲಿರುವ ಶೆಲ್ ಕಂಪನಿಗಳ ಹೂಡಿಕೆಯನ್ನು ಮರೆಮಾಚಿದ್ದಾರೆ ಮತ್ತು ಅಮೆರಿಕದಲ್ಲಿರುವ ಕಂಪನಿಯೊಂದರಲ್ಲಿ ಸುಮಾರು 52,000 ಕೋಟಿ ರೂಪಾಯಿ ಮೊತ್ತವನ್ನು ಡಾಲರ್ ರೂಪದಲ್ಲಿ ಠೇವಣಿ ಇಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದರು.

ಹಿಮಂತ ಬಿಸ್ವಾ ಶರ್ಮಾ ಪವನ್ ಖೇರಾ ಅವರ ಎಲ್ಲಾ ಆರೋಪಗಳನ್ನು ‘ಸಂಪೂರ್ಣ ಸುಳ್ಳು ಮತ್ತು ಕಪೋಲಕಲ್ಪಿತ’ ಎಂದು ತಳ್ಳಿಹಾಕಿದ್ದರು. ಪವನ್ ಖೇರಾ ಹಂಚಿಕೊಂಡಿರುವ ದಾಖಲೆಗಳು ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣಗಳಿಂದ ಬಂದವುಗಳಾಗಿದ್ದು, ಅವುಗಳನ್ನು ಎಐ ಮೂಲಕ ಎಡಿಟ್ ಮಾಡಲಾಗಿದೆ ಎಂದು ಅವರು ಪ್ರತಿಪಾದಿಸಿದ್ದರು.

ಪವನ್ ಖೇರಾ ವಿರುದ್ದ ರಿನಿಕಿ ಭುಯಾನ್ ಶರ್ಮಾ ಅವರು ಗುವಾಹಟಿಯ ಪೊಲೀಸ್ ಠಾಣೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪವನ್ ಖೇರಾ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯಿಸಿ ಹಿಮಂತ ಬಿಸ್ವಾ ಶರ್ಮಾ, “ಅಸ್ಸಾಂ ಪೊಲೀಸರು ದೆಹಲಿಗೆ ಹೋಗಿದ್ದು ಯಾಕೆ ಎಂದು ನನಗೆ ಗೊತ್ತಿಲ್ಲ. ಆದರೆ, ಪವನ್ ಖೇರಾ ಹೈದರಾಬಾದ್‌ಗೆ ಪಲಾಯನ ಮಾಡಿದ್ದಾರೆ ಎಂಬುವುದು ಗೊತ್ತಾಗಿದೆ” ಎಂದಿದ್ದಾರೆ.

ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, “ಸ್ವಲ್ಪ ದಿನ ಕಾಯಿರಿ, ನಾವು ಚುನಾವಣೆಯಲ್ಲಿ ಕನಿಷ್ಠ 100 ಸ್ಥಾನಗಳನ್ನು ಗೆಲ್ಲುತ್ತೇವೆ. ಪವನ್ ಖೇರಾ ವಿರುದ್ಧ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ರಿನಿಕಿ ಭುಯಾನ್ ಶರ್ಮಾ, ಎಫ್‌ಐಆರ್ ದಾಖಲಿಸಿರುವುದನ್ನು ದೃಢಪಡಿಸಿದ್ದಾರೆ ಮತ್ತು ತನ್ನ ವಿರುದ್ದದ ಆರೋಪಗಳನ್ನು ಹಗುರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷಗಳು ಹತಾಶೆಯಿಂದ ವರ್ತಿಸುತ್ತಿವೆ. ಒಂದು ನಾಟಕ ಮಾಡಲು ಪ್ರಯತ್ನಿಸುತ್ತಿವೆ. ಸತ್ಯಕ್ಕೆ ಗೆಲುವಾಗಲಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...