ಪಂಚರಾಜ್ಯಗಳ ಚುನಾವಣೆ ಘೋಷಣೆಯಾಗಿದ್ದು, ಅಸ್ಸಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ 70 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಆಡಳಿತಾರೂಢ ಬಿಜೆಪಿ ಶುಕ್ರವಾರ ಪ್ರಕಟಿಸಿದೆ. ಪಕ್ಷವು ಒಟ್ಟು 126 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಸ್ಪರ್ಧಿಸುವ ಸಾಧ್ಯತೆಯಿದೆ, 26 ತನ್ನ ಮಿತ್ರಪಕ್ಷ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಎಂಟು ಸ್ಥಾನಗಳನ್ನು ತನ್ನ ಮತ್ತೊಂದು ಮಿತ್ರಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಗೆ ಬಿಟ್ಟುಕೊಟ್ಟಿದೆ.
ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಪ್ರಸ್ತುತ ಪ್ರತಿನಿಧಿಸುವ ಕ್ಷೇತ್ರಗಳಾದ ಕ್ರಮವಾಗಿ ಮಜುಲಿ ಮತ್ತು ಜಲುಕ್ಬರಿಯಿಂದ ಸ್ಪರ್ಧಿಸಲಿದ್ದಾರೆ. ಅಸ್ಸಾಂ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ದಾಸ್ ಅವರು ಪತಾಚಾರ್ಕುಚಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಅಸ್ಸಾಂನಲ್ಲಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.
ಈ ಬಾರಿ ಅಸ್ಸಾಂನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷ, ಕಾಂಗ್ರೆಸ್ ಮತ್ತು ಅದರ ‘ಮಹಾ ಮೈತ್ರಿ’ ಹಾಗೂ ಹೊಸದಾಗಿ ರೂಪುಗೊಂಡ ಎರಡು ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ.
ಇದನ್ನೂ ಓದಿ: ರೈತ ಹೋರಾಟ: ಗಾಜಿಪುರ್ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ


