Homeಮುಖಪುಟಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

- Advertisement -
- Advertisement -

ಅಸ್ಸಾಂ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಇದವರೆಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್ ಪಕ್ಷವು ಬಿಜೆಪಿ ಜೊತೆಗಿನ ಮೈತ್ರಿ ತೊರೆದು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಕುರಿತು ಅಧಿಕೃತವಾಗಿ ಭಾನುವಾರ ಘೋಷಣೆ ಮಾಡಲಾಗುತ್ತದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ಬಲ ತಂದುಕೊಟ್ಟರೆ ಆಡಳಿತರೂಢ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನಲಾಗಿದೆ. ಕಳೆದ 2016ರ ಚುನಾವಣೆಯಲ್ಲಿ ಅಸ್ಸಾಂನ ಒಟ್ಟು 126 ಸ್ಥಾನಗಳಲ್ಲಿ ಬಿಪಿಎಫ್ 12 ಸ್ಥಾನಗಳಲ್ಲಿ ಜಯಗಳಿಸಿತ್ತು. ನಂತರ ಬಿಜೆಪಿ ಜೊತೆಗೂಡಿ ಸರ್ಕಾರದ ಭಾಗವಾಗಿತ್ತು. ಆದರೆ ಬಿಜೆಪಿಯು ಕಳೆದ ವರ್ಷ ಬಿಪಿಎಫ್‌ ಅನ್ನು ಬದಿಗೊತ್ತಿ, ಹೊಸ ಪಕ್ಷಗಳನ್ನು ಆಡಳಿತಕ್ಕೆ ಸೇರಿಸಿಕೊಂಡಿತ್ತು. ಅಲ್ಲದೇ ಅಸ್ಸಾಂನ ಬೋಡೋ ಪ್ರಾಬಲ್ಯದ ಪ್ರದೇಶಗಳಲ್ಲಿ ಸ್ವ-ಆಡಳಿತ ಮಂಡಳಿಯಾದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಯನ್ನು ಸಹ ಬಿಜೆಪಿ ಆಳಿತು.

ಇದರಿಂದ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿರುವ ಬಿಪಿಎಫ್ ಪಕ್ಷವು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. “ಶಾಂತಿ, ಐಕ್ಯತೆ, ಅಭಿವೃದ್ದಿ, ಸ್ಥಿರ ಸರ್ಕಾರ, ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್ ಪಕ್ಷವು ಮಹಾಜಾಥ್ ಮೈತ್ರಿ ಸೇರಲು ನಿರ್ಧರಿಸಿದೆ. ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಹಾಜಾಥ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ. ಬಿಜೆಪಿಯೊಂದಿಗೆ ಇನ್ನು ಮುಂದೆ ಯಾವುದೇ ಮೈತ್ರಿ ಇರುವುದಿಲ್ಲ” ಎಂದು ಬಿಪಿಎಫ್ ಮುಖಂಡ ಹಗ್ರಮ ಮೊಹಿಲರಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಸ್ಸಾಂ ರಾಜ್ಯದ ಸರ್ಬಾನಂದ ಸೋನೊವಾಲ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮೂವರು ಮಂತ್ರಿಗಳನ್ನು ಹೊಂದಿದ್ದ ಬಿಪಿಎಫ್, ಡಿಸೆಂಬರ್‌ನಲ್ಲಿ ನಡೆದ ಬಿಟಿಸಿ ಸ್ಥಳೀಯ ಚುನಾವಣೆಯಲ್ಲಿ 40 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಆದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 12 ಸ್ಥಾನಗಳನ್ನು ಗೆದ್ದ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಯನ್ನು ಅಭಿನಂದಿಸಿದರು ಮತ್ತು ತಮ್ಮ ಟ್ವೀಟ್‌ನಲ್ಲಿ ಪಕ್ಷವನ್ನು “ಮಿತ್ರ” ಎಂದು ಬಣ್ಣಿಸಿದ್ದರು. ಬಿಜೆಪಿ ಬೆಂಬಲದೊಂದಿಗೆ ಯುಪಿಪಿಎಲ್ ಮುಖ್ಯಸ್ಥ ಪ್ರಮೋದ್ ಬೊರೊ ಬಿಟಿಸಿಯಲ್ಲಿ ಹೊಸ ಮುಖ್ಯ ಕಾರ್ಯನಿರ್ವಾಹಕ ಸದಸ್ಯ (ಸಿಇಎಂ) ಆಗಲಿದ್ದಾರೆ ಎಂದು ಸಿಎಂ ಸೋನೊವಾಲ್ ಘೋಷಿಸಿದ್ದರು.


ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...