Homeಮುಖಪುಟಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

- Advertisement -
- Advertisement -

ಅಸ್ಸಾಂನಲ್ಲಿ ನಿನ್ನೆ ಎರಡನೇ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಮತದಾನದ ಅಂತ್ಯಕ್ಕೆ ಗಲಭೆಗೆ ತಿರುಗಿರುವ ಆತಂಕಕಾರಿ ಘಟನೆ ಜರುಗಿದೆ. ಅಸ್ಸಾಂನ ಬರಾಕ್ ಕಣಿವೆ ಪ್ರದೇಶದಲ್ಲಿ  ಚುನಾವಣಾ ಅಧಿಕಾರಿಗಳು ಮತದಾನ ಅಂತ್ಯಗೊಂಡ ನಂತರ ಕಾನೂನುಬಾಹಿರವಾಗಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯೊಬ್ಬರ ಕಾರಿನಲ್ಲಿ ಪ್ರಯಾಣ ಮಾಡಿದ್ದು ಹಿಂಸೆ ಭುಗಿಲೇಳಲು ಕಾರಣವಾಗಿದೆ.

ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಹೋಗುತ್ತಿದ್ದನ್ನು ಪ್ರತಿಪಕ್ಷದ ಕಾರ್ಯಕರ್ತರು ತಡೆದು ಘೇರಾವ್ ಹಾಕಿದ್ದಾರೆ. ಗುಂಪು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀಚಾರ್ಜ್ ನಡೆಸಿದ್ದಾರೆ. ಆಗ ಹಿಂಸೆಗೆ ತಿರುಗಿದೆ.

ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣಾ ಆಯೋಗ ಪೂರ್ಣವಾಗಿ ಬಿಜೆಪಿಯೊಂದಿಗೆ ಶಾಮೀಲಾಗಿದೆ. ಈ ಚುನಾವಣೆಗೆ ಅರ್ಥವಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರುವುದನ್ನು ನೋಡಬಹುದು.

ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ಇವಿಎಂಗಳನ್ನು ಸರ್ಕಾರಿ ಭದ್ರತಾ ವಾಹನದಲ್ಲಿ ಇವಿಎಂಗಳನ್ನು ಇರಿಸುವ ಸ್ಟ್ರಾಂಗ್‌ ರೂಂಗೆ ಸಾಗಿಸಬೇಕಿತ್ತು. ಆದರೆ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಗಂಟೆಗಳಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸೇರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಆ ಕಾರು ಸ್ಟ್ರಾಂಗ್‌ ರೂಂ ಬಳಿ ಬರುತ್ತಿದ್ದಂತೆ ರೊಚ್ಚಿಗೆದ್ದ ವಿರೋಧ ಪಕ್ಷದ ಬೆಂಬಲಿಗರು ಕಾರನ್ನು ಸುತ್ತುವರಿದು ಘೋಷಣೆ ಕೂಗಿದ್ದಾರೆ. ಕಾರಿನ ಡ್ರೈವರ್ ಸೇರಿದಂತೆ ಪೊಲೀಸರು ಸ್ಥಳದಿಂದ ಪರಾರಿಯಾದರು ಎನ್ನಲಾಗಿದೆ. ಆ ಸಂದರ್ಭದಲ್ಲಿ ಜಿಲ್ಲಾಡಳಿತ ಶಾಂತಿ ಕಾಪಾಡಲು ಲಾಠೀಚಾರ್ಜ್ ಮಾಡಲು ಆದೇಶ ನೀಡಿತು. ಇವಿಎಂಗಳು ಸುರಕ್ಷಿತವಾಗಿವೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯನ್ನು ಅಸ್ಸಾಂ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಸೇರಿದಂತೆ ಹಲವಾರು ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...