Homeಮುಖಪುಟಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

- Advertisement -
- Advertisement -

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ. ಬದಲಾಗಿ, ಯುವಜನರ ಕಲ್ಯಾಣದ ಕುರಿತು ಮಾತನಾಡಲಾರಂಭಿಸಿದ್ದಾರೆ.

ಶನಿವಾರ (ಏ.4) ಗುವಾಹಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಿಜುಷ್ ಹಜಾರಿಕಾ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿವೆ” ಎಂದು ಹೇಳಿದ್ದಾರೆ. ತಮ್ಮ ಸರ್ಕಾರಗಳ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ಬಿಜೆಪಿಯ ಈ ಹಠಾತ್ ಬದಲಾವಣೆಯು, ಕಳೆದ ಹತ್ತು ವರ್ಷಗಳಿಂದ  ಬಿಜೆಪಿ ಬಳಸುತ್ತಿದ್ದ ‘ನುಸುಳುಕೋರ’ ಎಂಬ ಹಳೆಯ ರಾಗವು ಯುವ ಮತದಾರರನ್ನು ಪ್ರಭಾವಿಸಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡಂತಿದೆ. ಅಲ್ಲದೆ, ಯುವಜನತೆಯಲ್ಲಿ ಎನ್‌ಡಿಎ ವಿರುದ್ಧ ಮೌನ ಅಲೆ ಇರುವ ಸಾಧ್ಯತೆಯನ್ನು ಬಿಜೆಪಿ ಅರಿತುಕೊಂಡಿದೆ. ಆದ್ದರಿಂದ, ಸರ್ಕಾರದ ಕಾರ್ಯವೈಖರಿ ಬರಿ ಭಾಷಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ಜೀವನೋಪಾಯದ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ ಎಂದು ಮನವರಿಕೆ ಮಾಡಲು ಪ್ರಯತ್ನಿಸುತ್ತಿದೆ.

ಸಚಿವರು ನೀಡಿದ ಭರವಸೆಯ ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಜನರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 10 ಲಕ್ಷ ಯುವಜನರಿಗೆ ತಲಾ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಬಿಜೆಪಿ ಹೊಂದಿದೆ ಎಂದು ವಿವರಿಸಿದ್ದಾರೆ.

2021ರಿಂದ 615 ಸ್ಟಾರ್ಟ್‌ಅಪ್‌ಗಳಿಗೆ ನೆರವು ನೀಡಲಾಗಿದ್ದು, ಎಂಎಸ್‌ಎಂಇ ವಲಯವು 82 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಮೂಲಕ ತಳಮಟ್ಟದ ಉದ್ಯಮಶೀಲತೆಯನ್ನು ವಿಸ್ತರಿಸಿದೆ ಎಂದು ಸಚಿವರು ಹೇಳಿಕೊಂಡಿದ್ದಾರೆ.

ಇದುವರೆಗೆ ಬಿಜೆಪಿ ‘ಜಾತಿ, ಮಾತಿ ಮತ್ತು ಭೇಟಿ’ (ಸಮುದಾಯ, ಭೂಮಿ ಮತ್ತು ಅಡಿಪಾಯ) ಎಂಬ ಘೋಷಣೆಯಡಿ ಧ್ರುವೀಕರಣದ ರಾಜಕಾರಣ ಮಾಡಿತ್ತು. ವಿಶೇಷವಾಗಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಸಲಾದ ಒತ್ತುವರಿ ತೆರವು ಕಾರ್ಯಾಚರಣೆಗಳ ಮೂಲಕ ಮತ ಸೆಳೆಯಲು ಪ್ರಯತ್ನಿಸಿತ್ತು.

ಶುಕ್ರವಾರ, ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪ್ರಚಾರದಲ್ಲಿ ನುಸುಳುಕೋರರನ್ನು ಹೊರಹಾಕುವ ಮಾತನ್ನೇ ಆಡಿದ್ದರು. ಆದರೆ, ರಾಜಕೀಯ ವಿಶ್ಲೇಷಕರ ಪ್ರಕಾರ ನುಸುಳುಕೋರರ ವಿಚಾರ ಈಗ ಯುವ ಮತದಾರರನ್ನು ಹೆಚ್ಚು ಆಕರ್ಷಿಸುತ್ತಿಲ್ಲ. ಬದಲಿಗೆ, ನಾಡಿನ ಜನಪ್ರಿಯ ಗಾಯಕ ದಿ. ಜುಬೀನ್ ಗಾರ್ಗ್ ಅವರ ಸಾವಿನ ಪ್ರಕರಣದಲ್ಲಿನ ತನಿಖೆ ಮತ್ತು ನ್ಯಾಯದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಯುವಜನತೆ ಹೆಚ್ಚು ಆಕ್ರೋಶಗೊಂಡಿದ್ದಾರೆ.

ಗುವಾಹಟಿಯ ಹೊರವಲಯದಲ್ಲಿರುವ ಹಾತಿಮುರಾದಲ್ಲಿ ಜುಬೀನ್ ಅವರ ಸಮಾಧಿ ಸ್ಥಳದ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲು ರಾಜ್ಯ ಸರ್ಕಾರ ಆರು ತಿಂಗಳು ತೆಗೆದುಕೊಂಡಿದ್ದರಿಂದ ಯುವ ವರ್ಗವು ಅಸಮಾಧಾನಗೊಂಡಿದೆ. ಅಲ್ಲದೆ, ಅವರ ಸಾವಿನ ಕುರಿತ ಹೈಪ್ರೊಫೈಲ್ ಪ್ರಕರಣದ ವಿಚಾರಣೆಯು ಇತ್ತೀಚೆಗಷ್ಟೇ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಪ್ರಾರಂಭವಾಗಿದೆ. ಇನ್ನು ಬಿಜೆಪಿಗೆ ಪರಿಸ್ಥಿತಿಯನ್ನು ಮತ್ತಷ್ಟು ಕಷ್ಟವಾಗಿಸಿರುವ ವಿಷಯವೇನೆಂದರೆ, ಜುಬೀನ್ ಗಾರ್ಗ್ ಅವರು ಬಿಜೆಪಿ ಪಕ್ಷದ ಪ್ರಬಲ ಟೀಕಾಕಾರರಾಗಿದ್ದರು.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ವಿಧಾನಸಭೆಯಲ್ಲಿ ಜುಬೀನ್ ಅವರನ್ನು ‘ಕೊಲೆ’ ಮಾಡಲಾಗಿದೆ ಎಂದು ಹೇಳಿದ ನಂತರ ‘ಜಸ್ಟೀಸ್ ಫಾರ್ ಜುಬೀನ್’ ಎಂಬ ಅಭಿಯಾನವು ತೀವ್ರಗೊಂಡಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಂಧಿತರಾದ ಏಳು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆಯಾದರೂ, ಸಿಂಗಾಪುರ ಸರ್ಕಾರ ಗಾರ್ಗ್ ಅವರು ‘ಅಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ’ ಎಂದು ಹೇಳಿ ಕೊಲೆಯ ಆರೋಪವನ್ನು ತಳ್ಳಿಹಾಕಿರುವ ಹಿನ್ನೆಲೆಯಲ್ಲಿ, ಆರೋಪಿಗಳು ಶೀಘ್ರದಲ್ಲೇ ಜೈಲಿನಿಂದ ಹೊರಬರುತ್ತಾರೆ ಎಂಬ ಭಾವನೆ ಯುವಜನರಲ್ಲಿ ಮೂಡಿದೆ.

ಲಂಡನ್‌ನಲ್ಲಿ ಶಿಕ್ಷಣ ಪಡೆದ ಮತ್ತು ಗುವಾಹಟಿ ಸೆಂಟ್ರಲ್ ಕ್ಷೇತ್ರದ ಅಸ್ಸಾಂ ಜಾತೀಯ ಪರಿಷತ್ತಿನ (ಎಜೆಪಿ) ‘ಜೆನ್ ಝಿ’ (Gen Z) ಅಭ್ಯರ್ಥಿ ಕುಂಕಿ ಚೌಧರಿ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಕ್ಕಾಗಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ವಿಶೇಷವಾಗಿ ಯುವಜನರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಟೀಕಿಸಿದ್ದಾರೆ. ಇದರಿಂದ ಎಚ್ಚತ್ತ ಬಿಜೆಪಿ ಈಗ ತನ್ನ ಹಿಂದುತ್ವ ಮತ್ತು ನುಸುಳುಕೋರರ ವಿಷಯಕ್ಕಿಂತ ಉದ್ಯೋಗ ಮತ್ತು ಯುವ ಕಲ್ಯಾಣದ ಮಾತನ್ನು ಆಡಲು ಪ್ರಾರಂಭಿಸಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...