Homeಕರೋನಾ ತಲ್ಲಣಅಸ್ಸಾಂ: ಕೊರೊನಾ ಲಸಿಕೆ ಪಡೆಯದವರಿಗೆ ಸಾರ್ವಜನಿಕ ಸ್ಥಳಕ್ಕೆ ನಿಷೇಧ

ಅಸ್ಸಾಂ: ಕೊರೊನಾ ಲಸಿಕೆ ಪಡೆಯದವರಿಗೆ ಸಾರ್ವಜನಿಕ ಸ್ಥಳಕ್ಕೆ ನಿಷೇಧ

ಲಸಿಕೆ ಹಾಕಲು ಇಷ್ಟಪಡದ ಜನರು ಮನೆಯಲ್ಲಿಯೇ ಇರಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ದಾಖಲೆ ಸಂಖ್ಯೆಯಲ್ಲಿ ಒಮೈಕ್ರಾನ್‌ ಹೆಚ್ಚುತ್ತಿರುವ ಮಧ್ಯೆ ರಾಜ್ಯ ಸರ್ಕಾರವು, ಕೊರೊನಾ ಲಸಿಕೆ ಪಡೆಯದ ಜನರನ್ನು ಸಾರ್ವಜನಿಕ ಪ್ರದೇಶಗಳಿಂದ ನಿಷೇಧಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ‘ಲಸಿಕೆ ಹಾಕುವುದು ಕಡ್ಡಾಯವಲ್ಲ, ಆದರೆ ಲಸಿಕೆ ಹಾಕಲು ಇಚ್ಛಿಸದ ಜನರು ಮನೆಯಲ್ಲಿಯೇ ಇರಬೇಕು’ ಎಂದು ಹೇಳಿದ್ದಾರೆ.

“ಕೊರೊನಾ ವಿರುದ್ಧ ವ್ಯಾಕ್ಸಿನೇಷನ್ ಕಡ್ಡಾಯವಲ್ಲ. ಆದರೆ ಲಸಿಕೆ ಪಡೆಯದವರು ಸಭೆಗಳಿಗೆ ಹಾಜರಾಗಲು ಸಾಧ್ಯವಿಲ್ಲ. ಕಚೇರಿಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಪ್ರವೇಶಿಸಲು ಸಾಧ್ಯವಿಲ್ಲ. ಲಸಿಕೆ ಹಾಕಲು ಇಷ್ಟಪಡದ ಜನರು ಮನೆಯಲ್ಲಿಯೇ ಇರಬಹುದು” ಎಂದು ಅವರು ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ ಸೋಮವಾರದಂದು 6,982 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ದಾಖಲಾದ ಅತಿ ಹೆಚ್ಚಿನ ಏರಿಕೆಯಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ಕೊರೊನಾ ಚಿಕಿತ್ಸೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಆಸ್ಪತ್ರೆಗಳನ್ನು ಹೊರತುಪಡಿಸಿ, ಸಾರ್ವಜನಿಕ ಸ್ಥಳಗಳಾದ ರೆಸ್ಟೋರೆಂಟ್‌ಗಳು, ಮಾರುಕಟ್ಟೆಗಳು, ಮಾಲ್‌ಗಳು ಮತ್ತು ಇತರ ಸ್ಥಳಗಳಲ್ಲಿ ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಳ್ಳದ ಜನರಿಗೆ ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಬಾರಿ ಲಸಿಕೆ ಹಾಕಿದ ಸರ್ಕಾರಿ ನೌಕರರು ಮಾತ್ರ ಕಚೇರಿಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ ಎಂದು ಅಧಿಕೃತ ಆದೇಶದಲ್ಲಿ ಹೇಳಲಾಗಿದೆ.

“ಅಸ್ಸಾಂನಲ್ಲಿ, ಅಗತ್ಯವಿದ್ದರೆ, ಕೊರೊನಾ ಲಸಿಕೆ ಪ್ರಮಾಣಪತ್ರವನ್ನು ತೋರಿಸಬೇಕಾಗುತ್ತದೆ. ಸಾರ್ವಜನಿಕ ವಿರೋಧಿ ಕೆಲಸವನ್ನು ನಾವು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸೋಮವಾರ ರಾತ್ರಿ ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 23,948 ಕ್ಕೆ ಏರಿದೆ. ಸುಗ್ಗಿ ಹಬ್ಬದ ಆಚರಣೆ ನಂತರ ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಳವಾಗಿದೆ. ಕಳೆದ ಎರಡು ವಾರಗಳಲ್ಲಿ ಅಸ್ಸಾಂನಲ್ಲಿ 25,000 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ:ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...