Homeಮುಖಪುಟಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

- Advertisement -
- Advertisement -

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಶಿಸ್ತುಕ್ರಮ ಕೈಗೊಂಡಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 23 ರಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಸರ್ಕಾರ ಅಭಿಯಾನ ಆರಂಭಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಹಾಗೂ 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 4,074 ಪ್ರಕರಣಗಳು ದಾಖಲಾಗಿವೆ. ವರನ ಪೋಷಕರು ಮತ್ತು ಅರ್ಚಕರು ಸೇರಿದಂತೆ 8,134 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಅಸ್ಸಾಂ: ಬಾಲ್ಯ ವಿವಾಹ ತಡೆ ವಿರುದ್ಧ ಮಹಿಳೆಯರ ಪ್ರತಿಭಟನೆ

ಧುಬ್ರಿ, ಮೋರಿಗಾಂವ್, ದಕ್ಷಿಣ-ಸಾಲಮರ ಮಂಚಚಾರ್ ಜಿಲ್ಲೆಗಳಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟಿಸುವ ಹೆಚ್ಚಿನ ಮಹಿಳೆಯರು ಆರ್ಥಿಕ ಬೆಂಬಲಕ್ಕೆ ತಮ್ಮ ಗಂಡನನ್ನೇ ಅವಲಂಬಿಸಿದ್ದಾರೆ.

ಧುಬ್ರಿಯ ತಮರ್ಹತ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅವರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ ಮೂರು ತಿಂಗಳ ಹಸುಳೆಯನ್ನು ಹೊತ್ತ ಅಪರಿಚಿತ ಮಹಿಳೆಯೊಬ್ಬರು, ”ನನ್ನ ಮಗುವನ್ನು ನಾನು ಹೇಗೆ ನೋಡಿಕೊಳ್ಳಲಿ ಎಂದು ಚಿಂತಿತಳಾಗಿದ್ದೇನೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಅಳಲು ತೊಡಿಕೊಂಡಳು. ”ನನ್ನ ಪತಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದರು. ನಾನು ಮನೆಯಿಂದ ಓಡಿಹೋಗಿ ಮದುವೆಯಾಗಿದ್ದೇನೆ. ನನಗೆ ಬೇರೆ ಯಾವುದೇ ಬೆಂಬಲವಿಲ್ಲ, ಸದ್ಯಕ್ಕೆ ನನ್ನ ಬಳಿ ಒಂದು ರೂಪಾಯಿಯೂ ಇಲ್ಲ” ಎಂದು ತನ್ನ ಸಂಕಟವನ್ನು ತೋಡಿಕೊಂಡಿದ್ದಾಳೆ.

23 ವರ್ಷದ ಮಹಿಳೆ ತನ್ನ ಗಂಡನ ಬಂಧನವನ್ನು ವಿರೋಧಿಸಿ ಧುಬ್ರಿಯ ಗೋಲಕ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟಿಸಿದಳು. ಈ ವೇಳೆ ತನ್ನ ಗಂಡ ಮತ್ತು ತನ್ನ ತಂದೆಯನ್ನು ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು.

”ಈ ವಿಷಯಗಳಲ್ಲಿ ಶೂನ್ಯ ಸಹಾನುಭೂತಿ ಇದೆ” ಎಂದು  ಹೇಳಿದರು. ”ಒಂದು ಚಿಕ್ಕ ಹುಡುಗಿ ಮದುವೆಯಾಗಿ ಹೋದ ನಂತರ, ನಾನು ಅದನ್ನು ಅತ್ಯಾಚಾರ ಎಂದು ಕರೆಯಬೇಕಾಗುತ್ತದೆ. ಹುಡುಗಿ ಅನುಭವಿಸುವ ನೋವನ್ನು ನಾವು ಯೋಚಿಸಿದ್ದೇವೆಯೇ? ಭವಿಷ್ಯದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳನ್ನು ಈ ಪರಿಸ್ಥಿತಿಯಿಂದ ರಕ್ಷಿಸಲು, ಒಂದು ಪೀಳಿಗೆಯು ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪತಿ ಜೈಲಿನಲ್ಲಿರುವ ಕಾರಣ ಯಾರಿಗಾದರೂ ಹಣಕಾಸಿನ ತೊಂದರೆಯಾಗಿದ್ದರೆ, ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈಗಾಗಲೇ ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ ಎಂದು ಶರ್ಮಾ ಹೇಳಿದರು.

ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಅಸ್ಸಾಂ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಈ ಅಭಿಯಾನವನ್ನು ಪ್ರಶ್ನಿಸಿದ್ದಾರೆ. ಈ ಕ್ರಮವನ್ನು ಬಿಜೆಪಿ ಸರ್ಕಾರದ ಜನಸಂಪರ್ಕ ವ್ಯಾಯಾಮ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

”ಬಾಲ್ಯ ವಿವಾಹವನ್ನು ಹತ್ತಿಕ್ಕುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಉಪಕ್ರಮವನ್ನು ಅಸ್ಸಾಂನಲ್ಲಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಸರಿಯಾದ ವಿಚಾರಣೆ ಅಥವಾ ಕಾರ್ಯವಿಧಾನವನ್ನು ಅನುಸರಿಸದೆ ದಶಕಗಳಷ್ಟು ಹಳೆಯದಾದ ಪ್ರಕರಣಗಳನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತೋರುತ್ತದೆ. ಇದು ಒಂದು ಪ್ರಹಸನ” ಎಂದು ಗೊಗೋಯ್ ಟ್ವೀಟ್ ಮಾಡಿದ್ದಾರೆ.

ಕಾರ್ಯಾಚರಣೆ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಬಾಲ್ಯ ವಿವಾಹದ ಸಮಸ್ಯೆಯನ್ನು ನಿಜವಾಗಿಯೂ ಬಗೆಹರಿಸುವ ಮನಸ್ಸಿದ್ದಿದ್ದರೆ ಅಸ್ಸಾಂ ಸರ್ಕಾರವು ಸಾಕ್ಷರತೆಯ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

”ಬಾಲ್ಯವಿವಾಹಗಳನ್ನು ನಿಲ್ಲಿಸಬೇಕಾದರೆ ಶಾಲೆಗಳನ್ನು ತೆರೆಯಬೇಕು ಎಂದು ತಜ್ಞರು ಹೇಳಿದ್ದಾರೆ, (ಆದರೆ) ನೀವು ಅದನ್ನು ಮಾಡಿಲ್ಲ. ಮದರಸಾಗಳನ್ನೂ ಮುಚ್ಚಿದ್ದೀರಿ” ಎಂದು ಅವರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮಾತನಾಡಿ, ”ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನವೀಯ ನಡೆ ಅನುಸರಿಸಬೇಕಾದ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.

”ಬಾಲ್ಯ ವಿವಾಹವನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಆದರೆ ಬೆಳೆದ ಮಕ್ಕಳೊಂದಿಗೆ ನೆಲೆಸಿರುವ ಕುಟುಂಬಗಳಲ್ಲಿ ನೆಮ್ಮದಿ ಕದಡುವುದರಿಂದ ಏನು ಪ್ರಯೋಜನ? ಇದು ಪ್ರಚಾರದ ಸ್ಟಂಟ್ ಹೊರತು ಬೇರೇನೂ ಅಲ್ಲ” ಎಂದು ಅವರು ಹೇಳಿದರು.

ಅಸ್ಸಾಂ ತೃಣಮೂಲ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ”ರಾಜ್ಯ ಸರ್ಕಾರ ಬಾಲ್ಯವಿವಾಹ ಕಾಯ್ದೆಯನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

”ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವುದು ಸರಿಯಲ್ಲ. ಮಂಕಚಾರ್‌ನಲ್ಲಿ, ತನ್ನ ಪೋಷಕರು ಜೈಲಿಗೆ ಹೋಗುತ್ತಾರೆ ಎಂದು ಹೆದರಿ, ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಅಪರಾಧಿಗಳ ಮೇಲೆ ವಿಚಿತ್ರವಾದ ದಮನದ ಪರಿಣಾಮವಾಗಿದೆ” ಎಂದು ಬೋರಾ ಟ್ವೀಟ್ ಮಾಡಿದ್ದಾರೆ.

ಬಾಲ್ಯವಿವಾಹದ ವಿರುದ್ಧ ಸರ್ಕಾರ ನಡೆಸುತ್ತಿರುವ ಕ್ರಮದಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಸೂಪರಿಂಟೆಂಡೆಂಟ್ ಹೋರೆನ್ ಟೋಕ್ಬಿ ಅವರು, ”ಅವಳ ಕುಟುಂಬಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾವು ಈ ವಿಚಾರದ ಬಗ್ಗೆ ಮತ್ತಷ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...