Homeಮುಖಪುಟಪಂಜಾಬ್‌: ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ; ಬಿಜೆಪಿ ಸೇರಿದ ಎಎಪಿ-ಕಾಂಗ್ರೆಸ್ ಕಾರ್ಯಕರ್ತರು

ಪಂಜಾಬ್‌: ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ; ಬಿಜೆಪಿ ಸೇರಿದ ಎಎಪಿ-ಕಾಂಗ್ರೆಸ್ ಕಾರ್ಯಕರ್ತರು

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ’ಇಂಡಿಯಾ’ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು, ಪಂಜಾಬ್‌ನ ಹಲವಾರು ಎಎಪಿ-ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಚಂಡೀಗಢದಲ್ಲಿ ಬಿಜೆಪಿ ಸೇರಿದ್ದಾರೆ.

ಮಾಜಿ ಸಂಸದ ಅಶೋಕ್ ತನ್ವಾರ್ ಅವರು ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆಗಿನ ಎಎಪಿ ಹೊಂದಾಣಿಕೆಯ ಕಾರಣವನ್ನು ಉಲ್ಲೇಖಿಸಿ ಗುರುವಾರ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಜಂಟಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದವು.

ಎಎಪಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪ ಮೇಯರ್‍ ಸ್ಥಾನಕ್ಕೆ ಸ್ಪರ್ಧಿಸುತ್ತಿದೆ. ಗುರುವಾರ ನಡೆಯಬೇಕಿದ್ದ ಚಂಡೀಗಢ ಮೇಯರ್ ಚುನಾವಣೆಯ ದಿನಾಂಕವನ್ನು ನಿಯೋಜಿತ ಅಧ್ಯಕ್ಷರ ’ಅನಾರೋಗ್ಯ’ವನ್ನು ಉಲ್ಲೇಖಿಸಿ ಮುಂದೂಡಲಾಗಿದೆ. ಈ ಘೋಷಣೆಯು ಮೇಯರ್ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಪ್ರತಿಭಟನೆಗೆ ಕಾರಣವಾಯಿತು.

ಜ.17ರಂದು ಚಂಡೀಗಢದ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮೇಯರ್ ಸ್ಥಾನದಿಂದ ಕಾಂಗ್ರೆಸ್‌ನ ಮುನ್ಸಿಪಲ್ ಕೌನ್ಸಿಲರ್ ಜಸ್ಬೀರ್ ಸಿಂಗ್ ಬಂಟಿ ನಾಮಪತ್ರ ಹಿಂಪಡೆಯಲು ಬಂದಾಗ ಈ ಘಟನೆ ನಡೆದಿದೆ. ಎಂಸಿ ಕಚೇರಿಗೆ ಆಗಮಿಸಿದ ಬಂಟಿ ಅವರ ತಂದೆ, ತನ್ನ ಮಗನನ್ನು ತನ್ನೊಂದಿಗೆ ಕಳುಹಿಸುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳಿದರು, ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಕಾಂಗ್ರೆಸ್-ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಗಳ ನಡೆದಿದೆ.

ಬಂಟಿ ಅವರ ತಂದೆ ಬಿಜೆಪಿಯ ಪ್ರಭಾವದಿಂದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪರಿಸ್ಥಿತಿ ಕೈ ಮೀರಿದ್ದರಿಂದ ಚಂಡೀಗಢ ಪೊಲೀಸರು ಬಂಟಿಯನ್ನು ಅವರ ನಿವಾಸಕ್ಕೆ ಕರೆದೊಯ್ದರು. ಆರಂಭದಲ್ಲಿ ಮೇಯರ್ ಹುದ್ದೆಗೆ ಜಸ್ಬೀರ್ ಸಿಂಗ್ ಬಂಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡ ನಂತರ, ಮೇಯರ್ ಹುದ್ದೆಗೆ ಎಎಪಿ, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶಿತರು ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ; ವಡೋದರಾ ದೋಣಿ ದುರಂತ; ವಿಹಾರಕ್ಕೆ ತೆರಳಿದ್ದ ಶಾಲಾ ವಿದ್ಯಾರ್ಥಿಗಳು ಬಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...