Homeಮುಖಪುಟಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

- Advertisement -
- Advertisement -

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ.

ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ.

ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ ಜಂಗಲ್ ಬ್ಲಾಕ್ ಮತ್ತು ಸಂತೇಶಪುರ ಗ್ರಾಮಗಳಲ್ಲಿ ಕನಿಷ್ಠ ಮೂರ್ನಾಲ್ಕು ದಶಕಗಳಿಂದ ವಾಸಿಸುತ್ತಿದ್ದ ಸುಮಾರು 10,000 ಬಂಗಾಳಿ ಮೂಲದ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಥಳಾಂತರಗೊಂಡವರು ಬ್ರಹ್ಮಪುತ್ರ ನದಿಯಿಂದಾಗಿ ತಮ್ಮ ಪೂರ್ವಜರ ಮನೆಗಳನ್ನು ಕಳೆದುಕೊಂಡ ಜನರು ಎಂದು ಸ್ಥಳೀಯ ನಿವಾಸಿ ತೌಫೀಕ್ ಹುಸಿಯಾನ್ ತಿಳಿಸಿದ್ದಾರೆ.

ಏಪ್ರಿಲ್ 2ರಂದು ನಡೆದ ಜಿಲ್ಲಾ ಮಟ್ಟದ ಭೂ ಸಲಹಾ ಸಭೆಯ ಪ್ರಕಾರ, ಸರ್ಕಾರಿ ಗೋಮಾಳದ ಜಾಗವನ್ನು ಸೌರಶಕ್ತಿ ಯೋಜನೆಗಾಗಿ ಬಿಟ್ಟು ಕೊಡುವ ಪ್ರಸ್ತಾಪವನ್ನು ಮಾರ್ಚ್ 30ರಂದು ಜಿಲ್ಲಾಡಳಿತ ಸಲ್ಲಿಸಿದೆ.

ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಸೌರ ವಿದ್ಯುತ್ ಸ್ಥಾವರಕ್ಕಾಗಿ ಸುಮಾರು 1,289 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಾನಿ ಸಮೂಹ ಇಲ್ಲಿ ಸೌರ ವಿದ್ಯುತ್ ಯೋಜನೆ ಕಾರ್ಯಗತಗೊಳಿಸಲಿದೆ.

ಮನೆಗಳನ್ನು ಕೆಡವುವ ಮೊದಲು ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ. ಭಾನುವಾರಕ್ಕಿಂತ ಮೊದಲು ಮನೆಗಳನ್ನು ಖಾಲಿ ಮಾಡುವಂತೆ ಪ್ರತಿದಿನ ಸಾರ್ವಜನಿಕ ಪ್ರಕಟಣೆಗಳನ್ನು ನೀಡಲಾಗಿತ್ತು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

ಸೋಮವಾರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬುಲ್ಡೋಜರ್‌ಗಳ ಜೊತೆ ಆಗಮಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಚಾಪರ್ ಕಂದಾಯ ವೃತ್ತದ ಅಧಿಕಾರಿ ನೀಡಿದ ತೆರವು ನೋಟಿಸ್ ಪ್ರಕಾರ, ಜಿಲ್ಲಾಡಳಿತ ಬೈಜರ್ ಅಲ್ಗಾ ಗ್ರಾಮದಲ್ಲಿ ನಿರಾಶ್ರಿತ ಜನರ ಪುನರ್ವಸತಿಗಾಗಿ 300 ಬಿಘಾ (ಸುಮಾರು 1 ಎಕರೆ) ಭೂಮಿಯನ್ನು ಮಂಜೂರು ಮಾಡಿದೆ. ಜನರು ತಮ್ಮ ವಸ್ತುಗಳನ್ನು ಸಾಗಿಸಲು ಒಂದು ಬಾರಿಯ ಪರಿಹಾರಕ್ಕಾಗಿ 50,000 ರೂ.ಗಳನ್ನು ಮೀಸಲಿಟ್ಟಿದೆ. ಕೆಲವು ನಿವಾಸಿಗಳು 50,000 ರೂ.ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವರು ತಮಗೆ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಪುನರ್ವಸತಿ ಸ್ಥಳವಾದ ಬೈಜರ್ ಅಲ್ಗಾ ಗ್ರಾಮವು ತಗ್ಗು ಪ್ರದೇಶದ ನದಿಪಾತ್ರದಲ್ಲಿದೆ ಎಂದು ನಿರಾಶ್ರಿತ ಜನರು ಹೇಳಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿನ ಅವಧಿ ಇಲ್ಲಿ ಪ್ರವಾಹ ಪರಿಸ್ಥಿತಿ ಇರುತ್ತದೆ ಎಂದು ಸ್ಥಳಾಂತರಗೊಂಡ ನಿವಾಸಿ ನಜ್ರುಲ್ ಇಸ್ಲಾಂ ಹೇಳಿದ್ದಾರೆ. ರಸ್ತೆ ಅಥವಾ ಯಾವುದೇ ಇತರ ಸಂವಹನವಿಲ್ಲದೆ ಜನರು ಅಲ್ಲಿಗೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು scroll.in ಹೇಳಿದೆ.

ಅನೇಕ ನಿವಾಸಿಗಳು ಭಯದಿಂದ ತಮ್ಮ ವಸ್ತುಗಳನ್ನು ಈಗಾಗಲೇ ಸ್ಥಳಾಂತರಿಸಿದ್ದಾರೆ. ಪ್ರತಿದಿನ ಜನರು ಸ್ಥಳಾಂತರಗೊಳ್ಳುತ್ತಿದ್ದಾರೆ. ಮೊದಲು ಸ್ಥಳಾಂತರಗೊಳ್ಳದವರ ಮನೆಗಳನ್ನು ಮಂಗಳವಾರ ಕೆಡವಲಾಗಿದೆ ಎಂದು ಮನೆ ಕಳೆದುಕೊಂಡಿರುವ ಹುಸಿಯಾನ್ ತಿಳಿಸಿದ್ದಾರೆ.

ಕೆಲವು ನಿವಾಸಿಗಳು ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಬುಲ್ಡೋಜರ್‌ಗಳ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಮೂರು ಬುಲ್ಡೋಜರ್‌ಗಳು ಹಾನಿಗೊಳಗಾಗಿವೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ವತಂತ್ರ ಶಾಸಕ ಮತ್ತು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಮಂಗಳವಾರ ತೆರವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಾಂತರಗೊಂಡವರಿಗೆ ಪುನರ್ವಸತಿಗಾಗಿ 165 ಎಕರೆ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಿನಂತಿಸುವುದಾಗಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಗೊಗೊಯ್ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದಿದ್ದರು.

“ಈ ತೆರವು ಕಾರ್ಯಾಚರಣೆ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ” ಎಂದು ಶಾಸಕ ಗೊಗೊಯ್ ಆರೋಪಿಸಿದ್ದು, “ಈ ಪ್ರಕರಣ ಗುವಾಹಟಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರವು ಕಾನೂನುಬಾಹಿರವಾಗಿ ಮನೆಗಳನ್ನು ಕೆಡವುತ್ತಿದೆ” ಎಂದಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಮುಸ್ಲಿಮರ ವಿರುದ್ಧ ಇಂತಹ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ. ಏಕೆಂದರೆ ಅವರು ‘ಮುಸ್ಲಿಮರು’ ಎಂದು ಗೊಗೊಯ್ ದೂರಿದ್ದಾರೆ.

ಈ ನಡುವೆ, ಗೋಲ್‌ಪಾರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಪೈಕರ್ ಪ್ರದೇಶದಲ್ಲಿ ಜುಲೈ 10ರಂದು ರಾಜ್ಯ ಸರ್ಕಾರವು ಮತ್ತೊಂದು ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ನಮ್ಮ ಗುರಿ ಅತಿಕ್ರಮಣಗೊಂಡ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಸುವುದು. ನಾವು ಅಸ್ಸಾಂನ ಸ್ಥಳೀಯ ಜನರೊಂದಿಗೆ ಇದ್ದೇವೆ. ಆದರೆ, ಶಾಸಕ ಅಖಿಲ್ ಗೊಗೊಯ್ ನಿರ್ದಿಷ್ಟ ಸಮುದಾಯವನ್ನು ಪ್ರತಿನಿಧಿಸುತ್ತಿದ್ದಾರೆ. ನಮ್ಮ ರಾಜಕೀಯ ಸಿದ್ಧಾಂತದಂತೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ” ಎಂದು ಸಿಎಂ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯಿಂದ ಉಂಟಾದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದ ಚಾರುಬಖ್ರ ಜಂಗಲ್ ಬ್ಲಾಕ್ ಗ್ರಾಮದ ಸುಮಾರು 400 ನಿವಾಸಿಗಳು ಏಪ್ರಿಲ್‌ನಲ್ಲಿ ತೆರವು ನೋಟಿಸ್‌ಗಳ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾಡಳಿತದ ಕ್ರಮವು ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಪ್ರಕರಣ ಇನ್ನೂ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಶಿಕ್ಷಾರ್ಹ ಕ್ರಮವಾಗಿ ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೇಳಿತ್ತು. ತೆರವು ಕಾರ್ಯಾಚರಣೆಗೂ ಮುನ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿತ್ತು.

ಕಳೆದ 30 ದಿನಗಳಲ್ಲಿ ಅಸ್ಸಾಂನಲ್ಲಿ ನಡೆದ ನಾಲ್ಕನೇ ಪ್ರಮುಖ ತೆರವು ಕಾರ್ಯಾಚರಣೆ ಇದಾಗಿದೆ.

ಜೂನ್ 16 ರಂದು, ಗೋಲ್ಪಾರದಲ್ಲಿ ಅಧಿಕಾರಿಗಳು 690 ಕುಟುಂಬಗಳ ಮನೆಗಳನ್ನು ಕೆಡವಿದ್ದರು. ಅವರೆಲ್ಲವೂ ಬಂಗಾಳಿ ಮೂಲದ ಮುಸ್ಲಿಮರಿಗೆ ಸೇರಿದ್ದಾಗಿವೆ. ಹಸಿಲಾ ಬೀಲ್ ಎಂಬ ಜೌಗು ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿತ್ತು ಎಂದು ಹೇಳಲಾದ ಭೂಮಿಯಲ್ಲಿ ಅವರು ವಾಸಿಸುತ್ತಿದ್ದರು.

ಈ ಪ್ರದೇಶವನ್ನು ಜೌಗು ಪ್ರದೇಶವೆಂದು ಘೋಷಿಸುವ ಮೊದಲೇ ಅಲ್ಲಿ ವಾಸಿಸುತ್ತಿದ್ದೆವು ಎಂದು ಅನೇಕ ಕುಟುಂಬಗಳು ಹೇಳಿದ್ದಾಗಿ scroll.in ತಿಳಿಸಿದೆ.

ಜೂನ್ 30 ರಂದು ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಬರ್ಖೇತ್ರಿ ಕಂದಾಯ ವ್ಯಾಪ್ತಿಯ ಸುಮಾರು 150 ಎಕರೆ ಅತಿಕ್ರಮಣ ತೆರವು ಮಾಡಲಾಗಿತ್ತು. ಇಲ್ಲಿಯೂ ಬಂಗಾಳಿ ಮೂಲದ ಮುಸ್ಲಿಮರ ತೊಂಬತ್ತಮೂರು ಮನೆಗಳನ್ನು ಕೆಡವಲಾಗಿದೆ.

ಕಳೆದ ಗುರುವಾರ, ಅಪ್ಪರ್ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ 220 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಸ್ಥಳಗಳ 77 ಎಕರೆ ಭೂಮಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, 2016 ಮತ್ತು ಆಗಸ್ಟ್ 2024ರ ನಡುವೆ 10,620ಕ್ಕೂ ಹೆಚ್ಚು ಕುಟುಂಬಗಳನ್ನು (ಅವುಗಳಲ್ಲಿ ಹೆಚ್ಚಿನವು ಮುಸ್ಲಿಮರು) ಸರ್ಕಾರಿ ಭೂಮಿಯಿಂದ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

‘ಲವ್ ಜಿಹಾದ್’ ಆರೋಪ: ಹರಿಯಾಣದಲ್ಲಿ ಮುಸ್ಲಿಂ ಕುಟುಂಬದ ಮನೆಗಳಿಗೆ ಬೆಂಕಿ – ಆಸ್ತಿಪಾಸ್ತಿ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...