Homeಮುಖಪುಟನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

- Advertisement -
- Advertisement -

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಈ ವಿಚಾರವಾಗಿ ಸಚಿವರನ್ನು ಪೀಡಿಸಬೇಡಿ ಎಂದು ಮನವಿ ಮಾಡಿದ್ದು, ಮಕ್ಕಳ ಇಂತಹ ನಡವಳಿಕೆಗಳಿಗೆ ಪೋಷಕರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ವಾದಿಸಿದ್ದಾರೆ.

ಗುರುವಾರ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮತ್ತು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅಸ್ಸಾಂನಲ್ಲಿಯೂ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಸ್ಸಾಂ ಸಂಪುಟ ಸಚಿವ ಕೇಶವ್ ಮಹಂತ ಅವರ ಮಗಳು ದಿಬಿಸಾ ಮಹಂತ ಭಾಗವಿಸಿದ್ದು ಎಲ್ಲರ ಗಮನ ಸೆಳೆದಿತ್ತು.

ಕೇಶವ್ ಮಹಂತ ಅವರು ಬಿಜೆಪಿಯ ಪ್ರಾದೇಶಿಕ ಮಿತ್ರಪಕ್ಷವಾದ ‘ಅಸೋಮ್ ಗಣ ಪರಿಷತ್’ (AGP) ನಾಯಕ ಹಾಗೂ ಪ್ರಸ್ತುತ ಕಂದಾಯ ಮತ್ತು ವಿಪತ್ತು ನಿರ್ವಹಣೆ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಾಮಾನ್ಯ ಆಡಳಿತ ಇಲಾಖೆಯ ಸಚಿವರಾಗಿದ್ದಾರೆ.

ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ನಿಂದ (UK) ಎರಡು ಸ್ನಾತಕೋತ್ತರ ಪದವಿಗಳನ್ನು ಪೂರ್ಣಗೊಳಿಸಿರುವ ದಿಬಿಸಾ, ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ “ನ್ಯಾಯ”ಕ್ಕಾಗಿ ಆಗ್ರಹಿಸುತ್ತಿರುವುದು ವೈರಲ್ ವೀಡಿಯೊಗಳಲ್ಲಿ ಕಂಡುಬಂದಿದೆ.

ಮತ್ತೊಂದು ವೀಡಿಯೊದಲ್ಲಿ ಅವರು, “ಇಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನೋಡಿ ನನಗೆ ತುಂಬಾ ಬೇಸರವಾಗುತ್ತಿದೆ. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಯಸಿದ್ದರು, ಆದರೆ ಅದು ಹಿಂಸಾರೂಪಕ್ಕೆ ತಿರುಗಿತು. ಲಾಠಿ ಚಾರ್ಜ್, ಟಿಯರ್ ಗ್ಯಾಸ್ ದಾಳಿ ಎಲ್ಲವೂ ನಡೆಯಿತು. ಆದಾಗ್ಯೂ, ಆ ದಿನ ಧೈರ್ಯದಿಂದ ಬಂದು ಧ್ವನಿ ಎತ್ತಿದ ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ನನಗೆ ಹೆಮ್ಮೆಯಿದೆ. ಅವರ ಧೈರ್ಯವೇ ನಾನು ಇಂದು ಇಲ್ಲಿಗೆ ಬರಲು ಪ್ರೇರಣೆಯಾಯಿತು” ಎಂದು ದಿಬಿಸಾ ಮಹಂತ ಹೇಳಿದ್ದರು.

ಪ್ರಸ್ತುತ ಪ್ರವಾಹ ಪರಿಹಾರ ಕಾರ್ಯಗಳಲ್ಲಿ ನಿರತರಾಗಿರುವ ಸಚಿವ ಕೇಶವ್ ಮಹಂತ ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಶನಿವಾರ ರಾತ್ರಿ ನಡೆಸಿದ ಸುದ್ದಿಗೋಷ್ಠಿಯ ನಂತರ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

‘ಸಚಿವರ ಮಗಳೊಂದಿಗೆ ನಾನು ಮಾತನಾಡುತ್ತೇನೆ ಸಿಎಂ’

ನನ್ನ ಮಕ್ಕಳು ಏನು ಹೇಳುತ್ತಾರೆಂಬುದಕ್ಕೆ ನಾನು ಹೇಗೆ ಉತ್ತರ ನೀಡಲು ಸಾಧ್ಯ? ನನ್ನ ಸ್ವಂತ ಸಹೋದರನೇ ನಾನು ಹೇಳುವ ವಿಷಯಗಳನ್ನು ಒಪ್ಪುವುದಿಲ್ಲ. ನನ್ನ ಮಕ್ಕಳೂ ಸಹ ನಾನು ಹೇಳುವ ಹಲವು ವಿಷಯಗಳನ್ನು ಒಪ್ಪುವುದಿಲ್ಲ. ಇಲ್ಲಿ ಬಿಜೆಪಿ ವಿರುದ್ಧ ವರದಿ ಮಾಡುವ ವರದಿಗಾರರ ಪೋಷಕರೆಲ್ಲರೂ ಬಿಜೆಪಿಯವರೇ ಆಗಿದ್ದಾರೆ. ಅವಳು ಮೋದಿಜಿಯವರ ವಿರುದ್ಧ ಮಾತನಾಡಿದ್ದಾಳೆ, ಅದಕ್ಕೆ ನನಗೆ ಬೇಸರವಿದೆ. ನಾನು ಎಂದಾದರೂ ಅವಳನ್ನು ಭೇಟಿಯಾದಾಗ ಖಂಡಿತಾ ಮಾತನಾಡುತ್ತೇನೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾಳೆ ನನ್ನ ಮಗನೂ ಏನಾದರೂ ತಪ್ಪಾಗಿ ಮಾತನಾಡಿದರೆ ಆಶ್ಚರ್ಯಪಡಬೇಡಿ. ನನ್ನ ಮಗ ಭವಿಷ್ಯದಲ್ಲಿ ವಕೀಲನಾಗುತ್ತಾನೆ ಮತ್ತು ನನಗೆ ಇಷ್ಟವಿಲ್ಲದ ಜನರ ಪರವಾಗಿ ವಾದಿಸಬಹುದು. ಮಕ್ಕಳು ದೊಡ್ಡವರಾಗಿ ವಯಸ್ಕರಾದ ಮೇಲೆ, ಅವರ ನಡವಳಿಕೆಗಳನ್ನು ಪೋಷಕರಿಗೆ ಮುಡಿಪಾಗಿಡಬಾರದು. ಆಕೆ ಹೇಳಿದ್ದು ತಪ್ಪು, ಆದರೆ ಅದಕ್ಕಾಗಿ ನಾವು ಆ ಹುಡುಗಿಯೊಂದಿಗೆ ಮಾತನಾಡುತ್ತೇವೆ. ಅದಕ್ಕಾಗಿ ತಂದೆಯನ್ನು ಏಕೆ ಪೀಡಿಸಬೇಕು?” ಎಂದು ಶರ್ಮಾ ಪ್ರಶ್ನಿಸಿದರು.

ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಕನಿಷ್ಠ ಆರು ಜನರನ್ನು ಬಂಧಿಸಿದ್ದು, ಅವರ ವಿರುದ್ಧ “ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವುದು, ವಿವಿಧ ಗುಂಪುಗಳ ನಡುವೆ ಶತ್ರುತ್ವವನ್ನು ಉತ್ತೇಜಿಸುವುದು ಮತ್ತು ಅಪರಾಧಿ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ನಡೆಸಿದ ಸರಣಿ ಪ್ರತಿಭಟನೆಗಳ ಬೆನ್ನಲ್ಲೇ, ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...