Homeಮುಖಪುಟಅಪ್ರಾಪ್ತೆಯರ ಅತ್ಯಾಚಾರ, ಕೊಲೆ ಮಾಡಿ ಮರಕ್ಕೆ ನೇಣು ಹಾಕಿದ ದುಷ್ಕರ್ಮಿಗಳು

ಅಪ್ರಾಪ್ತೆಯರ ಅತ್ಯಾಚಾರ, ಕೊಲೆ ಮಾಡಿ ಮರಕ್ಕೆ ನೇಣು ಹಾಕಿದ ದುಷ್ಕರ್ಮಿಗಳು

- Advertisement -
- Advertisement -

ಕಳೆದ ಶನಿವಾರ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ನಿಗೂಢ ಸಾವಿನ ಪ್ರಕರಣವನ್ನು ಅಸ್ಸಾಂ ಪೊಲೀಸರು ಮಂಗಳವಾರ ಬಗೆಹರಿಸಿದ್ದಾಗಿ ಹೇಳಿದ್ದಾರೆ. ” ಈ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ನಂತರ ಆತ್ಮಹತ್ಯೆಯಂತೆ ಕಾಣಲಿ ಎಂದು ಮರಕ್ಕೆ ನೇಣು ಹಾಕಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತೆಯರ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

’ನಾವು ಈ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬಂಧಿಸಿದ್ದೇವೆ. ಅವರಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯರನ್ನು ಕೊಲೆ ಮಾಡಿದ ನಂತರ ಅವರನ್ನು ಮರಕ್ಕೆ ನೇಣು ಹಾಕಿದ್ದಾರೆ. ಆರೋಪಿಗಳು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಪ್ರಕರಣ ಸಂಬಂಧ ಭಾನುವಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿತ್ತು, 72 ಗಂಟೆಗಳ ಒಳಗೆ ನಾವು ಪ್ರಕರಣವನ್ನು ಭೇದಿಸಿದ್ದೇವೆ” ಎಂದು ಕೊಕ್ರಜಾರ್ ಎಸ್‌ಪಿ ಪ್ರತೀಕ್ ವಿಜಯ್ ಕುಮಾರ್ ತೂಬೆ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್ ಮುಖ್ಯಮಂತ್ರಿ ನಿವಾಸದೆದುರು ಸುಖಬೀರ್ ಬಾದಲ್ ಪ್ರತಿಭಟನೆ – ಬಂಧನ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ Aರೋಪಿಗಳ ಬಂಧನದ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

“ಇಬ್ಬರು ಅಪ್ರಾಪ್ತ ಬುಡಕಟ್ಟು ಬಾಲಕಿಯರ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣವನ್ನು ಬಗೆಹರಿಸಲಾಗಿದೆ. ಐಜಿಪಿ, ಬಿಟಿಆರ್ ತನಿಖೆಯ ಬಗ್ಗೆ ನನಗೆ ಕರೆ ಮಡಿ ತಿಳಿಸಿದ್ದಾರೆ. ನಾನು ಭಾನುವಾರ ಸಂತ್ರಸ್ತ ಬಾಲಕಿಯರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಆರೋಪಿಗಳು ಸಿಕ್ಕಿ ಬಿದ್ದದ್ದು ತೃಪ್ತಿಯ ಭಾವನೆ ಮೂಡಿಸಿದೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.

ಅಸ್ಸಾಂನ ಕೊಕ್ರಜಾರ್ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ 16 ಮತ್ತು 14 ವರ್ಷದ ಒಂದೆ ಕುಟುಂಬದ ಅಪ್ರಾಪ್ತ ಬಾಲಕಿಯರು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದರು. ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಅಪ್ರಾಪ್ತ ಬಾಲಕಿಯರ ಮನೆಗೆ ಭಾನುವಾರ ಭೇಟಿ ನೀಡಿ ಕುಟುಂಬಕ್ಕೆ ನ್ಯಾಯ ನೀಡುವ ಭರವಸೆ ನೀಡಿದ್ದರು.


ಇದನ್ನೂ ಓದಿ: ಒರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...