Homeಮುಖಪುಟಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ವಕೀಲ ಶುವೋದೀಪ್ ರಾಯ್ ಮೂಲಕ ಭಾನುವಾರ (ಏ.12) ಅರ್ಜಿ ಸಲ್ಲಿಸಲಾಗಿದ್ದು, ಈ ವಾರ ವಿಚಾರಣೆಗೆ ಬರುವ ನಿರೀಕ್ಷೆಯಿದೆ.

ಏಪ್ರಿಲ್ 10ರಂದು, ತೆಲಂಗಾಣ ಹೈಕೋರ್ಟ್ ಖೇರಾ ಅವರಿಗೆ ಸೀಮಿತ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ್ದು, ಅಸ್ಸಾಂನ ನ್ಯಾಯವ್ಯಾಪ್ತಿಯ ನ್ಯಾಯಾಲಯವನ್ನು ಸಂಪರ್ಕಿಸಲು ಅವರಿಗೆ ಸಮಯಾವಕಾಶ ನೀಡಿದೆ ಮತ್ತು ತಕ್ಷಣದ ಬಂಧನದಿಂದ ಅವರಿಗೆ ರಕ್ಷಣೆ ಒದಗಿಸಿದೆ.

“ಪ್ರಕರಣದ ಅರ್ಹತೆಯ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ, ಅರ್ಜಿದಾರರು ಸೀಮಿತ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಈ ನ್ಯಾಯಾಲಯವು ಅಭಿಪ್ರಾಯಪಡುತ್ತದೆ. ಏಕೆಂದರೆ, ಅವರ ಬಂಧನದ ಭೀತಿಯು ಸಮಂಜಸವಾಗಿ ಕಂಡುಬರುತ್ತಿದೆ ಮತ್ತು ದಾಖಲೆಯಲ್ಲಿರುವ ಪೂರಕ ಅಂಶಗಳು ಇದನ್ನು ಬೆಂಬಲಿಸುತ್ತಿವೆ” ಎಂದು ಜಾಮೀನು ನೀಡುವಾಗ ಹೈಕೋರ್ಟ್ ಹೇಳಿದೆ.

ಖೇರಾ ಅವರು ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಗಳನ್ನು ನೀಡುವ ಮೂಲಕ ಬಂಧನಕ್ಕೊಳಗಾದ ಸಂದರ್ಭದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಬೇಕು ಎಂಬುದು ಸೇರಿದಂತೆ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದೆ. ಅಲ್ಲದೆ, ಅವರು ತನಿಖೆಗೆ ಸಹಕರಿಸಬೇಕು ಮತ್ತು ತನಿಖಾಧಿಕಾರಿಗೆ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿದೆ. ಸಂಬಂಧಪಟ್ಟ ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶ ಬಿಟ್ಟು ಹೊರಹೋಗಬಾರದು ಎಂದು ಸೂಚಿಸಿದೆ.

ಖೇರಾ ಅವರು ನಿಗದಿತ ಅವಧಿಯೊಳಗೆ ಅಸ್ಸಾಂನ ಸಂಬಂಧಪಟ್ಟ ನ್ಯಾಯಾಲಯವನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಅವರು ಒಬ್ಬ ಸಾರ್ವಜನಿಕ ವ್ಯಕ್ತಿಯಾಗಿರುವುದರಿಂದ, ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡುವಾಗ ಸಂಯಮ ವಹಿಸಬೇಕು. ಏಕೆಂದರೆ ಅಂತಹ ಹೇಳಿಕೆಗಳು ತನಿಖೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಹೈಕೋರ್ಟ್ ಹೇಳಿದೆ. 

ಖೇರಾ ಅವರು ಏಪ್ರಿಲ್ 5ರಂದು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಅನೇಕ ಪಾಸ್‌ಪೋರ್ಟ್‌ಗಳನ್ನು ಮತ್ತು ವಿದೇಶದಲ್ಲಿ ಆಸ್ತಿಯನ್ನು ಹೊಂದಿದ್ದಾರೆ, ಆದರೆ ಮುಖ್ಯಮಂತ್ರಿಯ ಚುನಾವಣಾ ಅಫಿಡವಿಟ್‌ನಲ್ಲಿ ಇವುಗಳನ್ನು ಬಹಿರಂಗಪಡಿಸಿಲ್ಲ ಎಂದು ಖೇರಾ ಆರೋಪಿಸಿದ್ದರು.

ಈ ಸಂಬಂಧ ಅಸ್ಸಾಂನ ಗುವಾಹಟಿ ಕ್ರೈಂ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಖೇರಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಹಲವು ಸೆಕ್ಷನ್‌ಗಳ ಅಡಿಯಲ್ಲಿ ಈ ಕೇಸ್ ಹಾಕಲಾಗಿದ್ದು, ಮುಖ್ಯವಾಗಿ ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡುವುದು ಮತ್ತು ವಂಚನೆ ಪ್ರಕರಣಗಳು ಇದರಲ್ಲಿ ಸೇರಿವೆ.

ಖೇರಾ ಅವರು ತಮ್ಮ ಹೈದರಾಬಾದ್ ವಿಳಾಸವನ್ನು ಉಲ್ಲೇಖಿಸಿ ಏಪ್ರಿಲ್ 7ರಂದು ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಸ್ಸಾಂನ ಸಂಬಂಧಪಟ್ಟ ನ್ಯಾಯಾಲಯವನ್ನು ಸಂಪರ್ಕಿಸಲು ತಮಗೆ ಕಾಲಾವಕಾಶ ನೀಡಬೇಕು ಮತ್ತು ಅಷ್ಟರವರೆಗೆ ಬಂಧನದಿಂದ ರಕ್ಷಣೆ ನೀಡಬೇಕು ಎಂದು ಅವರು ಕೋರಿದ್ದರು.



 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...