Homeಮುಖಪುಟಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ನಿಶ್ಚಲವಾಗಿದ್ದ ವ್ಯಕ್ತಿಯ ಮೇಲೆ ಫೋಟೋ ಪತ್ರಕರ್ತನೊಬ್ಬ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

- Advertisement -
- Advertisement -

ಗನ್‌ ಮತ್ತು ಲಾಠಿ ಹಿಡಿದು ಶಸ್ತ್ರಸಜ್ಜಿತರಾಗಿ, ಗಲಭೆ ವಿರೋಧಿ ಧಿರಿಸು ಧರಿಸಿದ್ದ ಪೊಲೀಸರ ಗುಂಪನ್ನು, ಕೈಯ್ಯಲ್ಲಿ ಕೋಲು ಹಿಡಿದುಕೊಂಡು ಅಟ್ಟಿಸಿಕೊಂಡು ಬಂದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಕ್ರೂರವಾಗಿ ಥಳಿಸಲಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ವ್ಯಕ್ತಿ ನೆಲಕ್ಕೆ ಉರುಳಿ ನಿಶ್ಚಲವಾದ ನಂತರವು ಪೊಲೀಸರು ಗುಂಪಾಗಿ ಬಂದು ವ್ಯಕ್ತಿಗೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲದೆ ಫೋಟೋ ಪತ್ರಕರ್ತನೊಬ್ಬ ವ್ಯಕ್ತಿಗೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಈ ಭಯಾನಕ ದೃಶ್ಯಗಳು ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದ ರಾಜ್ಯದ ದರ್‍ರಾಂಗ್‌ ಜಿಲ್ಲೆಯ ಧೋಲ್ಪುದಲ್ಲಿ ಗುರುವಾರ ನಡೆದಿದೆ. ಪೊಲೀಸರು ಈ ಪ್ರಕ್ರಿಯೆಗಾಗಿ ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಎಂಎಲ್‌ ಪಾಲಿಟ್‌ಬ್ಯೂರೋ ಸದಸ್ಯೆ ಕವಿತಾ ಕೃಷ್ಣನ್ ಅವರು, “ಒಬ್ಬ ಏಕಾಂಗಿ ವ್ಯಕ್ತಿ ಕೋಲು ಹಿಡಿದುಕೊಂಡು ಓಡುತ್ತ ಬಂದಾಗ ಎದೆಗೆ ಗುಂಡು ಹಾರಿಸಲು ಯಾವ ಪ್ರೋಟೋಕಾಲ್ ಆದೇಶಿಸುತ್ತದೆ. ಬಹುಶಃ ಸತ್ತು ನೆಲಕ್ಕೆ ಬಿದ್ದಿರುವ ಮನುಷ್ಯನ ದೇಹದ ಮೇಲೆ ರಕ್ತಪಿಪಾಸುವಿನಂತೆ ದ್ವೇಷದಿಂದ ಪದೇ ಪದೇ ಜಿಗಿಯುವ, ಕ್ಯಾಮರಾದೊಂದಿಗಿರುವ ನಾಗರಿಕ ಉಡುಪು ಧರಿಸಿದ ವ್ಯಕ್ತಿ ಯಾರು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಘಟನೆಯನ್ನು ಖಂಡಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇದು ಯಾವ ನರಕ? ಈ ಹತ್ಯೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಈಗಲೇ ಕ್ರಮ ಕೈಗೊಳ್ಳಿ. ನತದೃಷ್ಟ ವ್ಯಕ್ತಿಯನ್ನು ಬಂಧಿಸಬಹುದಿತ್ತು. ಅವರನ್ನು ಕೊಲ್ಲಲು ಪೊಲೀಸರಿಗೆ ಅಧಿಕಾರವಿಲ್ಲ. ಒಂದು ಸಮಾಜವಾಗಿ ನಮಗೆ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧೋಲ್ಪುದಲ್ಲಿ ನಡೆದ ಅತಿಕ್ರಮಣ ವಿರೋಧಿ ಪ್ರಕ್ರಿಯೆಯಲ್ಲಿ ಒಂಬತ್ತು ಪೊಲೀಸರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಕೆಲವು ಮಾಧ್ಯಮಗಳು, “ತಮ್ಮ ಮನೆಗಳನ್ನು ತೆರವುಗೊಳಿಸುತ್ತಿದ್ದ ಪೊಲೀಸರ ವಿರುದ್ದ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ತಾರಕಕ್ಕೇರಿ, ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಸದ್ದಾಂ ಹುಸೇನ್ ಮತ್ತು ಶೇಖ್ ಫರೀದ್ ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿ, ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ವರದಿ ಮಾಡಿವೆ.

ಸೋಮವಾರ ಕೂಡಾ ಅತಿಕ್ರಮಣ ವಿರೋಧಿ ಪ್ರಕ್ರಿಯೆಯ ಕಾರ್ಯಾಚರಣೆಯಲ್ಲಿ ಸುಮಾರು 800 ಕುಟುಂಬಗಳನ್ನು ಹೊರಹಾಕಲಾಗಿದೆ. ಸ್ಥಳೀಯರು ಕಲ್ಲುಗಳಿಂದ ದಾಳಿ ಮಾಡಿದ್ದರಿಂದ ಬಲಪ್ರಯೋಗಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

“ನಮ್ಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಪರಿಸ್ಥಿತಿ ಸಾಮಾನ್ಯವಾಗಿದೆ” ಎಂದು ಇಂದಿನ ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

‘‘ಘರ್ಷನೆಯ ಪರಿಸ್ಥಿತಿಯಿಂದಾಗಿ ನಾವು ಹೊರಹಾಕುವಿಕೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ನಾವು ನಂತರ ಮೌಲ್ಯಮಾಪನ ಮಾಡುತ್ತೇವೆ. ಇಲ್ಲಿಂದ ಈಗಲೇ ಹಿಂದಿರುಗುತ್ತಿದ್ದೇವೆ” ಎಂದು ಘರ್ಷಣೆಯ ಸ್ಥಳದಲ್ಲಿದ್ದ ಹಾಜರಿದ್ದ ಸುಶಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆದರೆ ಸ್ಥಳೀಯರನ್ನು ಹೊಡೆದುರುಳಿಸಿದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಆ ಪ್ರದೇಶವು ದೊಡ್ಡದಾಗಿದ್ದು, ನಾನು ಇನ್ನೊಂದು ಬದಿಯಲ್ಲಿದ್ದೆ. ಈ ಬಗ್ಗೆ ಪರಿಶೀಲಿಸಿ ಪರಿಸ್ಥಿತಿಯನ್ನು ನಿರ್ಣಯಿಸುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ಸೋಮವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ನಂತರ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “800 ಮನೆಗಳನ್ನು ತೆರವುಗೊಳಿಸುವ ಮೂಲಕ 4500 ಬಿಘಾಗಳನ್ನು ತೆರವುಗೊಳಿಸಿದ್ದಕ್ಕಾಗಿ ದರ್ರಾಂಗ್ ಜಿಲ್ಲಾಡಳಿತ ಮತ್ತು ಅಸ್ಸಾಂ ಪೊಲೀಸರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...