ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹಾರಾಷ್ಟ್ರ ಶಿವಸೇನಾ ಬಂಡಾಯ ಶಾಸಕರು ತಂಗಿರುವ ಅಸ್ಸಾಂನ ಗುವಾಹಟಿಯ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಬೃಹತ್ ಪ್ರತಿಭಟನೆಯ ನೇತೃತ್ವವನ್ನು ತೃಣಮೂಲ ಕಾಂಗ್ರೆಸ್‌ನ ಅಸ್ಸಾಂ ಮುಖ್ಯಸ್ಥ ರಿಪುನ್ ಬೋರಾ ವಹಿಸಿದ್ದರು. ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನಿಸಿದ್ದಾರೆ.
ಅಸ್ಸಾಂನಲ್ಲಿ ಪ್ರವಾಹದಿಮದ ಜನ ತತ್ತರಿಸುತ್ತಿದ್ದರೂ, ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸಲು ಅಸ್ಸಾಂನ ಆಡಳಿತಾರೂಢ ಬಿಜೆಪಿಯು ಶಿವಸೇನೆ ಬಂಡಾಯ ಶಾಸಕರನ್ನು ಉಳಿಸಿಕೊಳ್ಳಲು ತನ್ನ ಎಲ್ಲಾ ಸಂಪನ್ಮೂಲಗಳನ್ನು ಹೂಡಿಕೆ ಮಾಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ
#WATCH | Members and workers of Assam unit of TMC protest outside Radisson Blu Hotel in Guwahati where rebel Maharashtra MLAs, including Shiv Sena's Eknath Shinde, are staying.
Party's state president Ripun Bora is leading the protest here. pic.twitter.com/rfoD0fQSKU
— ANI (@ANI) June 23, 2022
ರಾಜ್ಯದಲ್ಲಿ ಭಾರಿ ಪ್ರವಾಹದಿಂದ ಹಾನಿಗೊಳಗಾದವರ ಸಂಕಷ್ಟಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಏನೂ ಮಾಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದೆ.
ಅಸ್ಸಾಂನಲ್ಲಿ ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳ ನೀರಿನ ಏರಿಕೆಯಿಂದ ಉಂಟಾದ ಪ್ರವಾಹದಿಂದ 55 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಮೇ ತಿಂಗಳಿನಿಂದ ಇಲ್ಲಿಯವರೆಗೆ 89 ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ.
UNBELIEVABLE!
Silencing dissent is becoming innate to the @BJP4India regime.
When the people of Assam are suffering owing to the floods, @himantabiswa is only interested in politics. And now, our workers who were peacefully protesting against such inefficiency, are arrested! pic.twitter.com/1r7hoQKP6a
— AITC Assam (@AITC4Assam) June 23, 2022
ಮಹಾರಾಷ್ಟ್ರದ ರಾಜಕೀಯದಲ್ಲಿ ಮೂಗು ತೂರಿಸಿ ಅಸ್ಸಾಂ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಆದರೆ, ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೂ ನಮಗೂ ಯಾವುದೇ ಸಂಬಂಧವಿಲ್ಲ ಮತ್ತು ಇದು ಶಿವಸೇನೆಯ ಆಂತರಿಕ ಸಮಸ್ಯೆ ಎಂದು ಬಿಜೆಪಿ ಅಧಿಕೃತವಾಗಿ ಸಮರ್ಥಿಸಿಕೊಂಡಿದೆ.
ಪ್ರತಿಭಟನೆ ಮಾಡುತ್ತಿದ್ದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದಕ್ಕೆ ಖಂಡನೆ ವ್ಯಕ್ತಪಡಿಸಿರುವ ಟಿಎಂಸಿ, “ಭಿನ್ನಾಭಿಪ್ರಾಯವನ್ನು ಮೌನಗೊಳಿಸುವುದು ಬಿಜೆಪಿ ಆಡಳಿತದಲ್ಲಿ ಸಹಜವಾಗುತ್ತಿದೆ. ಅಸ್ಸಾಂನ ಜನರು ಪ್ರವಾಹದಿಂದ ಬಳಲುತ್ತಿರುವಾಗ,
ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರಿಗೆ ರಾಜಕೀಯದಲ್ಲಿ ಮಾತ್ರ ಆಸಕ್ತಿ ಇದೆ. ಅಂತಹ ಅಸಮರ್ಥತೆಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಮ್ಮ ಕಾರ್ಯಕರ್ತರನ್ನು ಬಂಧಿಸಲಾಗಿದೆ” ಎಂದು ಟೀಕಿಸಿದೆ.
ಇತ್ತ, ಮಹಾವಿಕಾಸ್ ಅಘಾಡಿ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಾವು ಶಿವಸೇನೆಯೊಂದಿಗೆ ಇದ್ದೇವೆ ಎಂದು ಹೇಳಿದ್ದಾರೆ. ಆದರೆ ಬಂಡಾಯವು ಪಕ್ಷದ ಆಂತರಿಕ ವಿಷಯವಾಗಿದ್ದು, ಅದನ್ನು ಪಕ್ಷವೇ ಪರಿಹರಿಸಬೇಕಾಗಿದೆ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ತಾನು ಅಧಿಕಾರ ಹಿಡಿಯಲು ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ರೂಪಿಸಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ದೂಷಿಸಿವೆ.
ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹದ ನಡುವೆಯೆ, “ಬಂಡಾಯ ಶಿವಸೇನೆ ಶಾಸಕರು ಬಯಸಿದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಉದ್ಧವ್ ಬುಧವಾರ ಹೇಳಿದ್ದಾರೆ. ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕೆಲವೇ ಗಂಟೆಗಳ ನಂತರ, ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ