Homeಮುಖಪುಟಅಸ್ಸಾಂನಲ್ಲಿ ಲಾರಿ-ಆಟೋ ಡಿಕ್ಕಿ: ಛತ್ ಪೂಜೆ ಮುಗಿಸಿ ಮನೆಗೆ ತೆರಳುತ್ತಿದ್ದ 10 ಮಂದಿ ಸಾವು

ಅಸ್ಸಾಂನಲ್ಲಿ ಲಾರಿ-ಆಟೋ ಡಿಕ್ಕಿ: ಛತ್ ಪೂಜೆ ಮುಗಿಸಿ ಮನೆಗೆ ತೆರಳುತ್ತಿದ್ದ 10 ಮಂದಿ ಸಾವು

- Advertisement -
- Advertisement -

ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಿಮೆಂಟ್ ತುಂಬಿದ ಲಾರಿಯೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.

ಛತ್ ಪೂಜೆ ಮುಗಿಸಿ ಘಾಟ್‌ನಿಂದ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 8 ರ ಬೈತಖಾಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನೂ ಓದಿ: ಗುಜರಾತ್‌: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ

ಅಪಘಾತದ ಬಳಿಕ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಪಾಥರಕಂಡಿಯ ಲೊಂಗಾಯ್ (Longai) ಟೀ ತೋಟದ ನಿವಾಸಿಗಳಾದ ದುಜಾ ಬಾಯಿ ಪಣಿಕಾ, ಶಾಲು ಬಾಯಿ ಪಣಿಕಾ, ಗೌರಬ್ ದಾಸ್ ಪಣಿಕಾ, ಲಾಲನ್ ಗೋಸ್ವಾಮಿ, ಸಂಭು ದಾಸ್ ಪಣಿಕಾ, ಪೂಜಾ ಗೌರ್, ದೇವ್ ಗೌರ್, ಮಂಗಲಿ ಕರ್ಮಾಕರ್, ತೋಪು ಕರ್ಮಾಕರ್ ಮತ್ತು ಆಟೋ ರಿಕ್ಷಾ ಚಾಲಕ ಸೋನೂರಿ ಎಂದು ಗುರುತಿಸಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘಟನೆಗೆ ಸಂತಾಪ ಸೂಚಿಸಿದ್ದಾರೆ. “ಇಂದು ಬೆಳಿಗ್ಗೆ ಪಾಥರಕಂಡಿಯ ಬೈತಖಾಲ್‌ನಲ್ಲಿ ನಡೆದ ಅಪಘಾತದಲ್ಲಿ 9 ಜನರ ದುರಂತ ಸಾವಿಗೆ ನಾನು ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಪ್ರಯಾಣಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಟ್ರಕ್‌ನ ಚಾಲಕನನ್ನು ಪತ್ತೆಹಚ್ಚಲು ಅಸ್ಸಾಂ ಪೊಲೀಸರು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

 

ರಾಜ್ಯ ಸರ್ಕಾರ ಸಂತ್ರಸ್ತರ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.


ಇದನ್ನೂ ಓದಿ: 2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...