Homeಮುಖಪುಟಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

ಅಸ್ಸಾಂನಲ್ಲಿ ಗೋಹತ್ಯೆ, ಸಾಗಾಣಿಕೆಗೆ ತಡೆ: ಮಸೂದೆ ಮಂಡಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಅಸ್ಸಾಂನ ವಿಧಾನಸಭೆಯಲ್ಲಿ ಹೊಸ “ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021″ ಮಂಡಿಸಲಾಗಿದ್ದು, ಗೋಹತ್ಯೆ, ಗೋ ಸಾಗಾಣಿಕೆಗೆ ನಿರ್ಬಂಧ ಹೇರಲಾಗಿದೆ. ಇದರ ಪ್ರಕಾರ ಗೋಮಾಂಸ ಸೇವಿಸದ ಹಿಂದೂ, ಜೈನ, ಸಿಖ್ ಮತ್ತು ಇತರ ಸಮುದಾಯಗಳು ವಾಸಿಸುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲಾಗಿದೆ.

ಇನ್ನು ಹಿಂದೂ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳು ಇರುವ ಪ್ರದೇಶದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಸಾಗಣೆ ಮಾಡುವಂತಿಲ್ಲ ಎಂದು ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ಮಸೂದೆ ಮಂಡಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ’ಅಸ್ಸಾಂ ಜಾನುವಾರು ಸಂರಕ್ಷಣಾ ಮಸೂದೆ- 2021” ಮಂಡಿಸಿದ್ದಾರೆ.

ಈ ಮಸೂದೆ ಅಂಗೀಕರಿಸಲ್ಪಟ್ಟರೆ ಜಾನುವಾರುಗಳ ವಧೆ, ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 1950 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯಲ್ಲಿ, ಗೋಹತ್ಯೆ, ಗೋಮಾಂಸ ಸೇವನೆ, ಅಕ್ರಮ ಸಾಗಣೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ನಿಬಂಧನೆಗಳ ಕೊರತೆಯಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ಜನಸಂಖ್ಯಾ ನಿಯಂತ್ರಣದ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಚರ್ಚಿಸಿದ ಅಸ್ಸಾಂ ಸಿಎಂ

ಇನ್ನು ಈ ಮಸೂದೆ ಜಾರಿಯಾದರೇ, ನೆರೆಯ ರಾಜ್ಯಗಳು ಅಸ್ಸಾಂ ಸರ್ಕಾರದ ಅನುಮತಿ ಇಲ್ಲದೆ ರಾಜ್ಯದಲ್ಲಿ ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಸಾಧ್ಯವಿರುವುದಿಲ್ಲ.

ಮಸೂದೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಪ್ರತಿಪಕ್ಷದ ನಾಯಕ ಡೆಬಬ್ರತಾ ಸಾಕಿಯಾ, ’ಹೊಸ ಮಸೂದೆಯಲ್ಲಿ ಸಾಕಷ್ಟು ಸಮಸ್ಯಾತ್ಮಕ  ವಿಷಯಗಳಿವೆ. ಅದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಉದಾಹರಣೆಗೆ, ದೇವಾಲಯ, ಧಾರ್ಮಿಕ ಸಂಸ್ಥೆಗಳಿರುವ 5 ಕಿ.ಮೀ. ಒಳಗೆ ಗೋಮಾಂಸ ಮಾರಾಟ ಮಾಡುವಂತಿಲ್ಲ ಎಂದಿದೆ. ದೇವಾಲಯವನ್ನು ಯಾರಾದರೂ ಎಲ್ಲಿ ಬೇಕಾದರೂ ನಿರ್ಮಿಸಬಹುದು. ಆದ್ದರಿಂದ ಇದು ತುಂಬಾ ಅಸ್ಪಷ್ಟವಾಗುತ್ತದೆ. ಇದು ಬಹಳಷ್ಟು ಕೋಮು ಗಲಭೆಗಳಿಗೂ ಕಾರಣವಾಗಬಹುದು” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

“ಇದು ಹಸುಗಳನ್ನು ರಕ್ಷಿಸುವ ಅಥವಾ ಹಸುಗಳನ್ನು ಗೌರವಿಸುವ ಮಸೂದೆ ಅಲ್ಲ. ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಲು ಮತ್ತು ಸಮುದಾಯಗಳನ್ನು ಮತ್ತಷ್ಟು ಬೇರ್ಪಡಿಸಲು ಇದನ್ನು ತರಲಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ ಮತ್ತು ತಿದ್ದುಪಡಿ ನಿರ್ಣಯಗಳನ್ನು ತರಲು ಪ್ರಯತ್ನಿಸುತ್ತೇವೆ” ಎಂದು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

ಈ ಮಸೂದೆ ಪ್ರಕಾರ ತಪ್ಪಿತಸ್ಥರೆಂದು ಸಾಬೀತಾದ ಆರೋಪಿಗೆ ಕನಿಷ್ಠ ಮೂರು ವರ್ಷಗಳವರೆಗೆ (ಎಂಟು ವರ್ಷಗಳವರೆಗೆ ವಿಸ್ತರಿಸಬಹುದು) ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. (5 ಲಕ್ಷ ರೂ.ವರೆಗೆ) ದಂಡ ಅಥವಾ ಎರಡನ್ನೂ ವಿಧಿಸಬಹುದು. ಪುನರಾವರ್ತಿತ ಅಪರಾಧಿಗಳಿಗೆ, ಶಿಕ್ಷೆಯನ್ನು ದ್ವಿಗುಣಗೊಳಿಸಲಾಗುತ್ತದೆ.


ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...