Homeಮುಖಪುಟ20 ಭಾರತೀಯ ಯೋಧರ ಹತ್ಯೆ: ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್ ಆಗ್ರಹ

20 ಭಾರತೀಯ ಯೋಧರ ಹತ್ಯೆ: ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್ ಆಗ್ರಹ

- Advertisement -
- Advertisement -

ಲಡಾಖ್‌ನ ಪೂರ್ವಭಾಗದ ಗಾಲ್ವಾನ್ ಕಣಿವೆಯಲ್ಲಿ 20 ಮಂದಿ ಭಾರತೀಯ ಯೋಧರು ಹತ್ಯೆಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.

ಈ ಕುರಿತು ಕಾಂಗ್ರೆಸ್ ವಕ್ತಾರ ಪವನ್ ಖೇರ ಟ್ವೀಟ್ ಮಾಡಿ, “ಗೌರವಾನ್ವಿತ ಪ್ರಧಾನಮಂತ್ರಿಗಳೇ ದೇಶ ದುಃಖದಲ್ಲಿದೆ. ದಯವಿಟ್ಟು ಸರ್ವಪಕ್ಷ ಸಭೆ ಕರೆಯಿರಿ. ರಾಷ್ಟ್ರೀಯ ಭದ್ರತಾ ಬಿಕ್ಕಟ್ಟಿನ ನಡುವೆ ಏಕೀಕೃತ ರಾಜಕೀಯ ವೇದಿಕೆ ರೂಪಿಸುವ ಬಗ್ಗೆ ಎಲ್ಲಾ ಪಕ್ಷಗಳ ಸಭೆ ಕರೆದು ಚರ್ಚಿಸಿ” ಎಂದು ಸಲಹೆ ನೀಡಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಮಾತನಾಡಿ, ಚೀನಾದ ಅಪಾಯಕಾರಿ ಆಕ್ರಮಣದ ಕುರಿತು ಪ್ರತಿಕ್ರಿಯಿಸಲು ದೇಶದೊಳಗೆ ರಾಜಕೀಯ ಒಮ್ಮತದ ತೀರ್ಮಾನಕ್ಕೆ ಬರಬೇಕಾಗಿದೆ ಎಂದು ಹೇಳಿದ್ದಾರೆ.

ಇದು ಚೀನಾದ ಅಪಾಯಕಾರಿ ಆಕ್ರಮಣಕ್ಕೆ ಪ್ರತಿಕ್ರಿಯಿಸುವಲ್ಲಿ ದೇಶದಲ್ಲಿ ಪ್ರಬುದ್ಧ ರಾಜಕೀಯ ಒಮ್ಮತಕ್ಕೆ ಬರುವ ಸಮಯವಾಗಿದೆ. ಈ ಹಿಂದೆ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ (ಯುಪಿಎ) ವಿರುದ್ದ ಹಲವು ಅತಿರೇಕದ ಟೀಕೆಗಳನ್ನು ಮಾಡಿದ್ದಾರೆ. ಆದರೂ ನಮ್ಮ ಅಭಿಪ್ರಾಯಗಳು ಭಿನ್ನವಾಗಿರಲಿ, ಆದರೆ ಒಂದಾಗಿರಲಿ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹುತಾತ್ಮ ಯೋಧರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹುತಾತ್ಮ ಯೋಧರ ಕುಟುಂಬಗಳ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಇದನ್ನೂ ಓದಿ: ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಇದನ್ನೂಓದಿ: ಕರ್ನಲ್ ಸಂತೋಷ್ ಬಾಬು ಪೋಷಕರ ಹೇಳಿಕೆ: ನಮ್ಮ ಮಗ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಕ್ಕೆ ಹೆಮ್ಮೆಯಿದೆ

ಇದನ್ನೂಓದಿ: ಲಡಾಖ್ ಘರ್ಷಣೆ: 20 ಭಾರತೀಯ ಸೈನಿಕರ ಹತ್ಯೆ, ನಾಲ್ವರ ಸ್ಥಿತಿ ಗಂಭೀರ 

ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು?

ಇದನ್ನೂ ಓದಿ: ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ಮೋದಿ ಏಕೆ ಅಡಗಿಕೂತಿದ್ದಾರೆ? – ರಾಹುಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...