Homeಕರ್ನಾಟಕಒಂದು ಲೋಟ ನೀರು ಕೇಳಿದ್ದಕ್ಕೆ ಹಲ್ಲೆ: ದಲಿತ ಮುಖಂಡನ ಸಾವು

ಒಂದು ಲೋಟ ನೀರು ಕೇಳಿದ್ದಕ್ಕೆ ಹಲ್ಲೆ: ದಲಿತ ಮುಖಂಡನ ಸಾವು

- Advertisement -
- Advertisement -

ಹೋಟೆಲ್‍ನಲ್ಲಿ ಕುಡಿಯುವ ನೀರು ಕೇಳಿದ ಸಣ್ಣ ಕಾರಣಕ್ಕೆ ಸವರ್ಣೀಯರ ದೌರ್ಜನ್ಯದಿಂದ ಗಂಭೀರವಾಗಿ ಗಾಯಗೊಂಡಿದ್ದ ಅರಕಲಗೂಡು ತಾಲೂಕು ದಲಿತ ಮುಖಂಡ ವೆಂಕಟೇಶ್(42) ಸಾವನಪ್ಪಿದ್ದು, ಇದರ ವಿರುದ್ಧ ತೀವ್ರ ಪ್ರತಿಭಟನೆ ದಾಖಲಾಗಿದೆ.

ಅರಕಲಗೂಡು ತಾಲ್ಲೂಕಿನ ಕಬ್ಬಡಿ ಗ್ರಾಮದ ವೆಂಕಟೇಶ್ ದಲಿತಪರ ಹೋರಾಟಗಾರರಾಗಿದ್ದು, ಜೂನ್ 4 ರಂದು ಮಲ್ಲಿಪಟ್ಟಣದ ಮಲ್ನಾಡ್ ಹಿಂದೂ ಮಿಲ್ಟ್ರಿ ಹೋಟೆಲ್ ಹೋಗಿ ಕುಡಿಯಲು ನೀರು ಕೊಡಿ ಎಂದು ಕೇಳಿದ್ದಾರೆ.  ಇಷ್ಟಕ್ಕೇ ಕೆರಳಿದ ಹೋಟೆಲ್ ಮಾಲೀಕ ಜಗದೀಶ್ ಗೌಡ ಮತ್ತವರ ಮಕ್ಕಳಾದ ಕಿರಣ್, ಲತೇಶ್ ಮತ್ತು ಸ್ಥಳೀಯ ಮಲ್ಲೇಶ್ ಎಂಬುವರು ಸೇರಿ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲಿನಿಂದ ಒದ್ದು, ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರ ಗಾಯಗೊಂಡ ವೆಂಕಟೇಶ್‍ಗೆ ಅರಕಲಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹಾಸನ ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರಿನಲ್ಲೂ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಕಿಡ್ನಿ, ಲಿವರ್ ಹಾಗೂ ಹೃದಯದ ಭಾಗಕ್ಕೆ ಪೆಟ್ಟಾಗಿರುವುದು ಪತ್ತೆಯಾಗಿದೆ. ಜೊತೆಗೆ ರಕ್ತಸ್ರಾವ ಕೂಡ ಆಗಿತ್ತು. ನಂತರ ಅವರನ್ನು ಹಾಸನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದಾಗ ಜೂನ್‌ 10 ರಂದು ಪ್ರಾಣಬಿಟ್ಟಿದ್ದಾರೆ.

ಈ ವಿಚಾರದಲ್ಲಿ ಅರಕಲಗೂಡು ಪೊಲೀಸರು ಎಫ್‍ಐಆರ್ ದಾಖಲು ಮಾಡಲು ವಿಳಂಬ ತೋರಿದ್ದಾರೆ ಎಂದು ಆರೋಪಿಸಿ ದಸಸಂ ಮತ್ತು ಬಿಎಸ್‌ಪಿ ಕಾರ್ಯಕರ್ತರು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ವೆಂಕಟೇಶ್ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು. ಘಟನೆ ನಡೆದು ವಾರ ಕಳೆದಿದ್ದರೂ, ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ ಅರಕಲಗೂಡು ಪೊಲೀಸರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವೆಂಕಟೇಶ್ ಸಂಬಂಧಿಕರು, ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ, ಬೀದಿಗೆ ಬಂದಿರುವ ಮೃತನ ಬಡ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ “ಈಗಾಗಲೇ ಮೂವರನ್ನು ಬಂಧಿಸಲಾಗಿದೆ, ಮತ್ತೋರ್ವನನ್ನು ಶೀಘ್ರ ಬಂಧಿಸಲಾಗುವುದು. ಮೃತನ ಕುಟುಂಬಕ್ಕೆ ಈಗಾಗಲೇ 8.25 ಲಕ್ಷರೂ ಪರಿಹಾರ ಧನ ಬಿಡುಗಡೆಯಾಗಿದ್ದು, ಮೊದಲ ಕಂತಿನಲ್ಲಿ 4.12 ಲಕ್ಷ ನೀಡಲಾಗಿದೆ. ಉಳಿದ ಹಣ ಶೀಘ್ರ ಕುಟುಂಬಕ್ಕೆ ತಲುಪಲಿದೆ. ಮೃತನ ಪತ್ನಿಗೆ ಮಾಸಿಕ ಪಿಂಚಣಿ ಮತ್ತು ಸರ್ಕಾರಿ ಕೆಲಸ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂ ನಂತರ ಸಾವಿಗೆ ಕಾರಣಗಳನ್ನು ತಿಳಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವೆಂಕಟೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಉತ್ತರ ಪ್ರದೇಶ: ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ್ದಕ್ಕೆ ದಲಿತ ಬಾಲಕನನ್ನು ಗುಂಡಿಕ್ಕೆ ಹತ್ಯೆ

ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...