ಖ್ಯಾತ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ‘‘ಗೌರಿ ಲಂಕೇಶ್” ಹತ್ಯೆ ಪ್ರಕರಣದಲ್ಲಿ ಯಾವುದೇ ರೀತಿಯ ಪ್ರಭಾವಗಳಿಗೆ ಒಳಗಾಗದೇ ಆರೋಪಿಗಳ ಜಾಮೀನು ಅರ್ಜಿಯನ್ನು ಇತ್ಯರ್ಥಗೊಳಿಸಬೇಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಶನಿವಾರ ಸೂಚನೆ ನೀಡಿದೆ. ಇತ್ತೀಚೆಗೆ, ಆರೋಪಿಗಳ ವಿರುದ್ದ ದಾಖಲಿಸಲಾಗಿದ್ದ KOCCA ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಆರೋಪಿಗಳ ವಿರುದ್ದ ದಾಖಲಿಸಲಾಗಿದ್ದ KOCCA ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿದ್ದನ್ನು ಪ್ರಶ್ನಿಸಿ, ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಆರೋಪಿ ವಿರುದ್ದ KOCCA ಕಾಯ್ದೆ ರದ್ದತಿಯನ್ನು ವಜಾಗೊಳಿಸಿದ್ದು, ಆರೋಪಿಯ ಜಾಮೀನು ಅರ್ಜಿಯನ್ನು ಯಾವುದೇ ಪ್ರಭಾವಗಳಿಗೆ ಒಳಗಾಗದೇ ಇತ್ಯರ್ಥಪಡಿಸಿ ಎಂದು ಹೈಕೋರ್ಟ್‌ಗೆ ಸೂಚನೆ ನೀಡಿದೆ.
ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ
ನ್ಯಾಯಮೂರ್ತಿ ಎ.ಎಂ.ಖನ್‍ವಾಲಿಕರ್, ದಿನೇಶ್ ಮಹೇಶ್ವರಿ, ಅನಿರುದ್ಧ ಭೋಸ್ ಅವರುಗಳನ್ನೊಳಗೊಂಡ ವಿಭಾಗೀಯ ಪೀಠವು, ಕವಿತಾ ಲಂಕೇಶ್ ಅವರ ಅರ್ಜಿ ಆಧರಿಸಿ ರಾಜ್ಯ ಸರ್ಕಾರ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದ್ದು, ಆ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಆರೋಪಿ ಮೋಹನ್ ನಾಯಕ್ ತನಗೆ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನಾವು ಹೈಕೋರ್ಟ್‍ನ ವಿಚಾರಣೆಯನ್ನು ಗಮನಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.
ಈ ಮೊದಲು ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸಿರುವ ಆದೇಶವು ಯಾವುದೋ ಪ್ರಭಾವಕ್ಕೆ ಒಳಗಾದಂತಿದೆ. ಪ್ರಕರಣವನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ವಿಚಾರಣೆ ನಡೆಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಜು.15ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್ ಬರಹ


