Homeಮುಖಪುಟವಿಚಾರವಾದಿ ದಾಬೋಲ್ಕರ್‌ ಹತ್ಯೆ - ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

ವಿಚಾರವಾದಿ ದಾಬೋಲ್ಕರ್‌ ಹತ್ಯೆ – ಐವರ ವಿರುದ್ದ ದೋಷಾರೋಪ ದಾಖಲಿಸಿದ ಮಹಾರಾಷ್ಟ್ರ ಕೋರ್ಟ್‌

- Advertisement -
- Advertisement -

ಮೂಢನಂಬಿಕೆ ವಿರೋಧಿ ಹೋರಾಟಗಾರ ಡಾ. ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಪುಣೆಯ ವಿಶೇಷ ನ್ಯಾಯಾಲಯವು ಬುಧವಾರ ದೊಷಾರೋಪಗಳನ್ನು ದಾಖಲಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ್‌ ಸಮಿತಿಯ ಮುಖ್ಯಸ್ಥರಾಗಿದ್ದ ದಾಭೋಲ್ಕರ್ ಅವರನ್ನು 2013 ರ ಆಗಸ್ಟ್ 20 ರಂದು ಪುಣೆಯಲ್ಲಿ ಬಲಪಂಥೀಯ ಸಂಘಟನೆಯ ಉಗ್ರಗಾಮಿಗಳು ಹತ್ಯೆಗೈದಿದ್ದರು.

ಪ್ರಕರಣದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆ ನಡೆಸುತ್ತಿದೆ. ನ್ಯಾಯಾಲಯವು ದೋಷಾರೋಪಗಳನ್ನು ದಾಖಲಿಸಿದ ನಂತರ ಕ್ರಿಮಿನಲ್ ವಿಚಾರಣೆ ಆರಂಭವಾಗುತ್ತದೆ. ಐವರು ಆರೋಪಿಗಳನ್ನು ಡಾ.ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌, ವಕೀಲ ಸಂಜೀವ್‌ ಪುಣೇಕರ್‌, ಆತನ ಸಹಾಯಕ ವಿಕ್ರಮ್‌ ಭಾವೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್‌ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ ಮತ್ತು ಶರದ್ ಕಲಾಸ್ಕರ್‌ ತಮ್ಮ ಜೈಲಿನಿಂದಲೇ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಅವರು ತಮ್ಮ ವಕೀಲರೊಂದಿಗೆ ಈ ವಿಷಯವನ್ನು ಚರ್ಚಿಸಲು ಬಯಸುತ್ತೇವೆ ಎಂದು ಹೇಳಿ ನ್ಯಾಯಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದರಾದರೂ, ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿತು.

ಇತರ ಇಬ್ಬರು ಆರೋಪಿಗಳಾದ ವಕೀಲ ಸಂಜೀವ್‌ ಪುಣೇಕರ್‌ ಮತ್ತು ಆತನ ಸಹಾಯಕ ವಿಕ್ರಮ್‌ ಭಾವೆ ದೈಹಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವೀರೇಂದ್ರ ಸಿನ್ಹಾ ತಾವಡೆ, ಸಚಿನ್ ಆಂದುರೆ, ಶರದ್ ಕಲಾಸ್ಕರ್‌ ಮತ್ತು ವಿಕ್ರಮ್‌‌ ಭಾವೆ ವಿರುದ್ದ, ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ಗಳ, 302(ಕೊಲೆ), 120 (ಬಿ) (ಕ್ರಿಮಿನಲ್ ಪಿತೂರಿ), 34 (ಸಾಮಾನ್ಯ ಉದ್ದೇಶ), ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಕಾಯ್ದೆಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ(ಯುಎಪಿಎ)ಯ ಸೆಕ್ಷನ್‌ 16 (ಭಯೋತ್ಪಾದಕ ಕೃತ್ಯಕ್ಕೆ ಶಿಕ್ಷೆ) ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಜೊತೆಗೆ, ವಕೀಲ ಸಂಜೀವ್‌ ಪುಣೇಕರ್‌ ವಿರುದ್ಧ ಐಪಿಸಿ ಸೆಕ್ಷನ್ 201 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

2014ರಲ್ಲಿ ದಾಬೋಲ್ಕರ್‌ ಹತ್ಯೆ ಪ್ರಕರಣ ಪುಣೆ ಪೊಲೀಸರಿಂದ ಸಿಬಿಐಗೆ ತನಿಖೆ ವರ್ಗಾವಣೆಯಾಗಿತ್ತು. ದಾಬೋಲ್ಕರ್‌ ಹತ್ಯೆಗೆ ಸಂಬಂಧಿಸಿದಂತೆ ಸನಾತನ ಸಂಸ್ಥೆಗೆ ಸಂಬಂಧಿಸಿದ ಐವರನ್ನು ಸಿಬಿಐ ಬಂಧಿಸಿತ್ತು. ವಕೀಲ ಸಂಜೀವ್‌ ಪುಣೇಕರ್‌ ಮತ್ತು ವಿಕ್ರಮ್ ಭಾವೆ ಜಾಮೀನು ಮೇಲೆ ಹೊರಗಡೆ ಬಂದಿದ್ದಾರೆ. ಉಳಿದ ಮೂವರು ಜೈಲಿನಲ್ಲಿದ್ದಾರೆ.

2013 ರ ಆಗಸ್ಟ್ 20 ರಲ್ಲಿ ಪುಣೆ ನಗರದಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಅವರ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಇದನ್ನೂ ಓದಿ: ಪನ್ಸಾರೆ, ದಾಬೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...